ಯಾಜಕಕಾಂಡ 8:29 - ಕನ್ನಡ ಸಮಕಾಲಿಕ ಅನುವಾದ29 ಮೋಶೆಯು ಟಗರಿನ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ನಿವಾಳಿಸಿದನು. ಏಕೆಂದರೆ ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಪ್ರತಿಷ್ಠಿತ ಟಗರು ಮೋಶೆಯ ಪಾಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮೋಶೆ ಬಲಿಪ್ರಾಣಿಯ ಎದೇಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ಆರತಿಯೆತ್ತಿದನು. ಸರ್ವೇಶ್ವರನ ಆಜ್ಞಾನುಸಾರ ಆ ಯಾಜಕಾಭಿಷೇಕ ಬಲಿಯ ಟಗರಿನ ಎದೆಯ ಭಾಗ ಮೋಶೆಗೆ ಸಲ್ಲತಕ್ಕದಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಮೋಶೆ ಅದರ ಎದೆಯ ಭಾಗವನ್ನು ತೆಗೆದುಕೊಂಡು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಿದನು. ಯೆಹೋವನು ಆಜ್ಞಾಪಿಸಿದಂತೆ ಆ ಪಟ್ಟಾಭಿಷೇಕಯಜ್ಞದ ಟಗರಿನಲ್ಲಿ ಆ ಎದೆಯ ಭಾಗವೇ ಮೋಶೆಗೆ ಸಲ್ಲಬೇಕಾದದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಮೋಶೆ ಎದೆಯ ಭಾಗವನ್ನು ತೆಗೆದುಕೊಂಡು ಯೆಹೋವನ ಮುಂದೆ ನೈವೇದ್ಯವಾಗಿ ನಿವಾಳಿಸಿದನು. ಅದು ಯಾಜಕರನ್ನು ನೇಮಿಸುವುದಕ್ಕಾಗಿ ಅರ್ಪಿಸಲ್ಪಟ್ಟ ಟಗರಿನಲ್ಲಿ ಮೋಶೆಯ ಪಾಲಾಗಿತ್ತು. ಯೆಹೋವನು ಆಜ್ಞಾಪಿಸಿದಂತೆಯೇ ಮೋಶೆ ಮಾಡಿದನು. ಅಧ್ಯಾಯವನ್ನು ನೋಡಿ |