Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:18 - ಕನ್ನಡ ಸಮಕಾಲಿಕ ಅನುವಾದ

18 ಅವನು ಜನರಿಗಾಗಿದ್ದ ಹೋರಿ ಮತ್ತು ಟಗರನ್ನು ಸಮಾಧಾನ ಬಲಿಗಳ ಯಜ್ಞಕ್ಕಾಗಿ ವಧಿಸಿದನು. ಆರೋನನ ಪುತ್ರರು ರಕ್ತವನ್ನು ಅವನ ಬಳಿಗೆ ತರಲು, ಅದನ್ನು ಅವನು ಬಲಿಪೀಠದ ಮೇಲೆ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನು ಮತ್ತು ಟಗರನ್ನು ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಯ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಜನರ ಪರವಾಗಿ ಶಾಂತಿಸಮಾಧಾನದ ಬಲಿದಾನಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಿದಾಗ, ಅವನು ಅದನ್ನು ಬಲಿಪೀಠದ ಸುತ್ತಲೂ ಚಿಮುಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಬಳಿಕ ಜನರಿಗೋಸ್ಕರ ಸಮಾಧಾನಯಜ್ಞಕ್ಕಾಗಿ ನೇಮಕವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಮಕ್ಕಳು ಅವುಗಳ ರಕ್ತವನ್ನು ಒಪ್ಪಿಸಲಾಗಿ ಅವನು ಅದನ್ನು ಯಜ್ಞವೇದಿಗೆ ಸುತ್ತಲೂ ಎರಚಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆರೋನನು ಜನರಿಗಾಗಿ ಸಮಾಧಾನಯಜ್ಞವಾದ ಹೋರಿಯನ್ನೂ ಟಗರನ್ನೂ ವಧಿಸಿದನು. ಆರೋನನ ಪುತ್ರರು ಅವುಗಳ ರಕ್ತವನ್ನು ಅವನ ಬಳಿಗೆ ತಂದರು. ಆರೋನನು ಈ ರಕ್ತವನ್ನು ಯಜ್ಞವೇದಿಕೆಯ ಸುತ್ತಲೂ ಚಿಮಿಕಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:18
7 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ಶಿಲುಬೆಯ ಮೇಲೆ ಸುರಿಸಿದ ರಕ್ತದ ಮೂಲಕವಾಗಿ, ದೇವರು ಸಮಾಧಾನವನ್ನು ಉಂಟುಮಾಡಿ, ಕ್ರಿಸ್ತನ ಮೂಲಕವೇ ಭೂಪರಲೋಕಗಳಲ್ಲಿರುವ ಎಲ್ಲವನ್ನೂ ತಮ್ಮೊಂದಿಗೆ ಸಂಧಾನಪಡಿಸಿಕೊಂಡರು.


ಹೀಗಿರುವುದರಿಂದ, ವಿಶ್ವಾಸದ ಮೂಲಕ ನೀತಿವಂತರೆಂಬ ನಿರ್ಣಯ ಹೊಂದಿದ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ದೇವರೊಂದಿಗೆ ಸಮಾಧಾನವಿರುತ್ತದೆ.


ನಾವು ದೇವರ ಶತ್ರುಗಳಾಗಿದ್ದಾಗಲೇ ಅವರು ನಮ್ಮನ್ನು ತಮ್ಮ ಪುತ್ರನ ಮರಣದ ಮೂಲಕ ಸಂಧಾನ ಮಾಡಿಕೊಂಡಿರುವುದಾದರೆ, ಕ್ರಿಸ್ತ ಯೇಸುವಿನ ಜೀವದ ಮೂಲಕ ಎಷ್ಟೋ ಹೆಚ್ಚಾಗಿ ನಾವು ರಕ್ಷಿಸುವುದು ಇನ್ನೂ ಖಚಿತವಲ್ಲವೆ?


ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು