ಯಾಜಕಕಾಂಡ 9:2 - ಕನ್ನಡ ಸಮಕಾಲಿಕ ಅನುವಾದ2 ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಆರೋನನಿಗೆ, “ನೀನು ದೋಷಪರಿಹಾರ ಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನು ಮತ್ತು ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನು ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆರೋನನಿಗೆ, “ನೀನು ಪರಿಹಾರಕ ಬಲಿದಾನಕ್ಕಾಗಿ ಕಳಂಕರಹಿತವಾದ ಹೋರಿಕರುವನ್ನು ಮತ್ತು ದಹನಬಲಿಗಾಗಿ ಕಳಂಕರಹಿತವಾದ ಟಗರನ್ನು ತೆಗೆದುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ನಿನಗೋಸ್ಕರ ಸಮರ್ಪಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ದೋಷಪರಿಹಾರಕಯಜ್ಞಕ್ಕಾಗಿ ಪೂರ್ಣಾಂಗವಾದ ಹೋರಿಕರುವನ್ನೂ ಸರ್ವಾಂಗಹೋಮಕ್ಕಾಗಿ ಪೂರ್ಣಾಂಗವಾದ ಟಗರನ್ನೂ ನಿನಗೋಸ್ಕರ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಮೋಶೆಯು ಆರೋನನಿಗೆ ಹೀಗೆಂದನು; “ಒಂದು ಎಳೆಹೋರಿಯನ್ನೂ ಒಂದು ಟಗರನ್ನೂ ತೆಗೆದುಕೊ. ಆ ಪಶುಗಳಲ್ಲಿ ಏನೂ ದೋಷವಿರಬಾರದು. ಹೋರಿಯನ್ನು ಪಾಪಪರಿಹಾರಕ ಯಜ್ಞವಾಗಿಯೂ ಟಗರನ್ನು ಸರ್ವಾಂಗಹೋಮವಾಗಿಯೂ ಯೆಹೋವನಿಗೆ ಸಮರ್ಪಿಸು. ಅಧ್ಯಾಯವನ್ನು ನೋಡಿ |