Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:23 - ಕನ್ನಡ ಸಮಕಾಲಿಕ ಅನುವಾದ

23 ಮೋಶೆಯೂ ಆರೋನನೂ ದೇವದರ್ಶನದ ಗುಡಾರದ ಒಳಗೆ ಹೋಗಿ, ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವ ದೇವರ ಮಹಿಮೆಯು ಜನರೆಲ್ಲರಿಗೂ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ತರುವಾಯ ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅಲ್ಲಿಂದ ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಸರ್ವೇಶ್ವರನ ಮಹಿಮೆ ಜನರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ತರುವಾಯ ಮೋಶೆಯೂ ಆರೋನನೂ ದೇವದರ್ಶನದ ಗುಡಾರದೊಳಗೆ ಹೋದರು. ಅವರು ಅಲ್ಲಿಂದ ಹೊರಗೆ ಬಂದಾಗ ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಮೋಶೆ ಮತ್ತು ಆರೋನನು ದೇವದರ್ಶನದ ಗುಡಾರದೊಳಗೆ ಹೋದರು. ಅವರು ಹೊರಗೆ ಬಂದು ಜನರನ್ನು ಆಶೀರ್ವದಿಸಿದರು. ಆಗ ಯೆಹೋವನ ಮಹಿಮೆಯು ಜನರೆಲ್ಲರಿಗೆ ಪ್ರತ್ಯಕ್ಷವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:23
10 ತಿಳಿವುಗಳ ಹೋಲಿಕೆ  

ಮೋಶೆ ಅವರಿಗೆ, “ಯೆಹೋವ ದೇವರು ಆಜ್ಞಾಪಿಸಿದ ಸಂಗತಿಯು ಇದೇ. ಇದನ್ನು ನೀವು ಮಾಡಿರಿ. ಯೆಹೋವ ದೇವರ ಮಹಿಮೆಯು ನಿಮಗೆ ಕಾಣಿಸಿಕೊಳ್ಳುವುದು,” ಎಂದನು.


ಕೋರಹನು ಅವರಿಗೆ ಎದುರಾಗಿ ಸಮಸ್ತ ಸಮೂಹವನ್ನು ದೇವದರ್ಶನ ಗುಡಾರದ ಬಾಗಿಲಿನ ಹತ್ತಿರ ಕೂಡಿಸಿದನು. ಆಗ ಯೆಹೋವ ದೇವರ ಮಹಿಮೆಯು ಸಮಸ್ತ ಸಮೂಹಕ್ಕೆ ತೋರಿಬಂತು.


ಜನರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡಾಗ, ಅವರು ದೇವದರ್ಶನ ಗುಡಾರದ ಕಡೆಗೆ ನೋಡಲಾಗಿ, ಮೇಘವು ಅದನ್ನು ಮುಚ್ಚಿಕೊಂಡು, ಯೆಹೋವ ದೇವರ ಮಹಿಮೆಯು ಕಾಣಬಂತು.


ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು.


ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ, ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆದ್ದರಿಂದ ಮೋಶೆಯು ಅವರನ್ನು ಆಶೀರ್ವದಿಸಿದನು.


ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.


ಆರೋನನು ಇಸ್ರಾಯೇಲರ ಸಭೆಯ ಸಂಗಡ ಮಾತನಾಡುತ್ತಿದ್ದಾಗ ಅವರು ಮರುಭೂಮಿಯ ಕಡೆಗೆ ನೋಡಿದರು. ಆಗ, ಯೆಹೋವ ದೇವರ ಮಹಿಮೆಯು ಮೇಘದಲ್ಲಿ ಪ್ರತ್ಯಕ್ಷವಾಯಿತು.


ಯೆಹೋವ ದೇವರ ಮುಂದೆ ಯಜ್ಞಕ್ಕೆ ಸಮಾಧಾನ ಬಲಿಗಾಗಿ ಒಂದು ಹೋರಿಯನ್ನು ಮತ್ತು ಒಂದು ಟಗರನ್ನು ಸಹ ತೆಗೆದುಕೊಳ್ಳಬೇಕು. ಆಹಾರದ ಬಲಿ ಎಣ್ಣೆಯೊಂದಿಗೆ ಬೆರೆತಿರಬೇಕು. ಏಕೆಂದರೆ ಈ ದಿನವೇ ಯೆಹೋವ ದೇವರು ನಿಮಗೆ ಕಾಣಿಸಿಕೊಳ್ಳುವರು,’ ” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು