ಯಾಜಕಕಾಂಡ 9:24 - ಕನ್ನಡ ಸಮಕಾಲಿಕ ಅನುವಾದ24 ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ, ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನ ಸನ್ನಿಧಿಯಿಂದ ಬೆಂಕಿಯು ಹೊರಟು ಯಜ್ಞವೇದಿಯ ಮೇಲಿದ್ದ ಸರ್ವಾಂಗಹೋಮದ್ರವ್ಯವನ್ನೂ ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರೂ ಅದನ್ನು ಕಂಡು ಉತ್ಸಾಹದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಯೆಹೋವನ ಬಳಿಯಿಂದ ಬೆಂಕಿಯು ಬಂದು ವೇದಿಕೆಯ ಮೇಲಿದ್ದ ಸರ್ವಾಂಗಹೋಮವನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಜನರೆಲ್ಲರೂ ಇದನ್ನು ನೋಡಿದಾಗ, ಅವರು ಆನಂದದಿಂದ ಆರ್ಭಟಿಸಿ ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿ |