Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 9:7 - ಕನ್ನಡ ಸಮಕಾಲಿಕ ಅನುವಾದ

7 ಮೋಶೆಯು ಆರೋನನಿಗೆ, “ಬಲಿಪೀಠದ ಕಡೆಗೆ ಹೋಗಿ, ಯೆಹೋವ ದೇವರು ಆಜ್ಞಾಪಿಸಿದಂತೆಯೇ ನಿನ್ನ ಪಾಪ ಪರಿಹಾರದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸು. ನಿನಗಾಗಿ ಪ್ರಾಯಶ್ಚಿತ್ತವನ್ನು ಮಾಡು, ಜನರ ಸಮರ್ಪಣೆಗಳನ್ನು ಸಮರ್ಪಿಸಿ, ಅವರಿಗಾಗಿಯೂ ಪ್ರಾಯಶ್ಚಿತ್ತವನ್ನು ಮಾಡು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಮೋಶೆ ಆರೋನನಿಗೆ, “ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಯಜ್ಞವನ್ನು, ಸರ್ವಾಂಗಹೋಮವನ್ನು ಸಮರ್ಪಿಸಿ ನಿನಗೋಸ್ಕರವೂ ಮತ್ತು ನಿನ್ನ ಜನರಿಗೋಸ್ಕರವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗಾಗಿ ದೋಷಪರಿಹಾರವನ್ನು ಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅನಂತರ ಮೋಶೆ ಆರೋನನಿಗೆ, “ಬಲಿಪೀಠದ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕ ಬಲಿಯನ್ನು ಮತ್ತು ದಹನಬಲಿಯನ್ನು ಸಮರ್ಪಿಸಿ ನಿನ್ನ ಹಾಗು ಜನರ ದೋಷವನ್ನು ಪರಿಹರಿಸು. ಜನರು ತಂದದ್ದನ್ನು ಸಮರ್ಪಿಸಿ ಸರ್ವೇಶ್ವರನ ಆಜ್ಞೆಯಂತೆ ಅವರ ದೋಷವನ್ನು ಪರಿಹರಿಸು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಮೋಶೆ ಆರೋನನಿಗೆ - ಯಜ್ಞವೇದಿಯ ಹತ್ತಿರಕ್ಕೆ ಬಂದು ನೀನು ಮಾಡಬೇಕಾದ ದೋಷಪರಿಹಾರಕಯಜ್ಞವನ್ನೂ ಸರ್ವಾಂಗಹೋಮವನ್ನೂ ಸಮರ್ಪಿಸಿ ನಿನಗೋಸ್ಕರವೂ ಜನರಿಗೋಸ್ಕವೂ ದೋಷವನ್ನು ಪರಿಹರಿಸು; ಜನರು ತಂದದ್ದನ್ನು ಸಮರ್ಪಿಸಿ ಯೆಹೋವನ ಆಜ್ಞೆಯಂತೆ ಅವರಿಗೋಸ್ಕರ ದೋಷಪರಿಹಾರವನ್ನು ಮಾಡು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೋಶೆಯು ಆರೋನನಿಗೆ, “ಯೆಹೋವನು ಆಜ್ಞಾಪಿಸಿದವುಗಳನ್ನು ಮಾಡು. ಯಜ್ಞವೇದಿಕೆಯ ಬಳಿಗೆ ಹೋಗಿ ಪಾಪಪರಿಹಾರಕ ಯಜ್ಞವನ್ನೂ ಸರ್ವಾಂಗಹೋಮವನ್ನೂ ಅರ್ಪಿಸು. ನಿನ್ನನ್ನೂ ಜನರನ್ನೂ ಶುದ್ಧಿಮಾಡುವ ಆ ಕಾರ್ಯಗಳನ್ನು ಮಾಡು. ಜನರು ತಂದದ್ದನ್ನು ತೆಗೆದುಕೊಂಡು ಅವರಿಗಾಗಿ ಪಾಪಪರಿಹಾರಕ ಯಜ್ಞವನ್ನು ಅರ್ಪಿಸಿ ಅವರನ್ನು ಶುದ್ಧಿಮಾಡು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 9:7
12 ತಿಳಿವುಗಳ ಹೋಲಿಕೆ  

ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ.


ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ.


ಆದರೆ ಎರಡನೆಯ ಭಾಗದೊಳಗೆ ಮಹಾಯಾಜಕನೊಬ್ಬನೇ ವರ್ಷಕ್ಕೆ ಒಂದೇ ಸಾರಿ ಪ್ರವೇಶಿಸುತ್ತಿದ್ದನು. ಅವನು ರಕ್ತವನ್ನು ತೆಗೆದುಕೊಳ್ಳದೆ ಎಂದಿಗೂ ಹೋಗುತ್ತಿರಲಿಲ್ಲ. ಬಲಿಯ ರಕ್ತವನ್ನು ತನಗೋಸ್ಕರವೂ ಜನರು ತಿಳಿಯದೆ ಮಾಡಿದ ಪಾಪಗಳಿಗೋಸ್ಕರವೂ ಸಮರ್ಪಿಸುತ್ತಿದ್ದನು.


“ ‘ಅಭಿಷಿಕ್ತನಾದ ಯಾಜಕನು ಪಾಪಮಾಡಿ ಜನರ ಮೇಲೆ ಅಪರಾಧವನ್ನು ತಂದರೆ, ತಾನು ಮಾಡಿದ ಪಾಪಕ್ಕಾಗಿ ಕಳಂಕರಹಿತವಾದ ಒಂದು ಎಳೆಯ ಹೋರಿಯನ್ನು ದೋಷಪರಿಹಾರಕ ಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ಆದ್ದರಿಂದ ‘ಏಲಿಯ ಮನೆಯ ದುಷ್ಟತನವು ಎಂದೆಂದಿಗೂ ಬಲಿಯಿಂದಲಾದರೂ, ಅರ್ಪಣೆಯಿಂದಲಾದರೂ ಪ್ರಾಯಶ್ಚಿತ್ತವಾಗುವದಿಲ್ಲ, ಎಂದು ನಾನು ಏಲಿಯ ಮನೆಯನ್ನು ಕುರಿತು ಪ್ರಮಾಣಮಾಡಿದೆನು,’ ” ಎಂದರು.


ಅವನು ಆರೋನನಿಗೆ, “ನೀನು ಪಾಪ ಪರಿಹಾರದ ಬಲಿಗಾಗಿ ಒಂದು ಎಳೆಯ ಕರುವನ್ನೂ ಮತ್ತು ದಹನಬಲಿಗಾಗಿ ಕಳಂಕರಹಿತ ಟಗರನ್ನೂ ತೆಗೆದುಕೊಂಡು ಅವುಗಳನ್ನು ಯೆಹೋವ ದೇವರ ಸನ್ನಿಧಿಯಲ್ಲಿ ಸಮರ್ಪಿಸು.


ನಿಮ್ಮ ದೋಷಪರಿಹಾರಕ್ಕಾಗಿ ಈ ಹೊತ್ತು ಏನೇನು ನಡೆಯಿತೋ ಅದನ್ನು ಏಳು ದಿನವೂ ನಡೆಸಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ.


“ಇದಲ್ಲದೆ ಆರೋನನು ತನಗೋಸ್ಕರ ಪಾಪ ಪರಿಹಾರದ ಬಲಿಗಾಗಿ ತನ್ನ ಹೋರಿಯನ್ನು ಸಮರ್ಪಿಸಿ, ತನ್ನ ಮನೆಯವರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


“ಇದಲ್ಲದೆ ಆರೋನನು ಪಾಪ ಪರಿಹಾರದ ಬಲಿಯಾಗಿರುವ ಹೋರಿಯನ್ನು ತಂದು, ತನಗೋಸ್ಕರ ಮತ್ತು ತನ್ನ ಮನೆತನದವರಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ತನಗೋಸ್ಕರ ದೋಷಪರಿಹಾರಕ ಬಲಿಯಾಗಿ ಆ ಹೋರಿಯನ್ನು ವಧಿಸಬೇಕು.


ಅವನು ಪರಿಶುದ್ಧ ಸ್ಥಳದಲ್ಲಿ ನೀರಿನಲ್ಲಿ ಸ್ನಾನಮಾಡಿ, ತನ್ನ ಬಳಕೆಯ ಬಟ್ಟೆಗಳನ್ನು ಧರಿಸಿಕೊಂಡು, ಹೊರಗೆ ಬಂದು ತನ್ನ ದಹನಬಲಿಯನ್ನೂ, ಜನರ ದಹನಬಲಿಯನ್ನೂ ಸಮರ್ಪಿಸಿ ತನಗೋಸ್ಕರವೂ, ಜನರಿಗೋಸ್ಕರವೂ ಪ್ರಾಯಶ್ಚಿತ್ತ ಮಾಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು