ಯಾಜಕಕಾಂಡ 9:9 - ಕನ್ನಡ ಸಮಕಾಲಿಕ ಅನುವಾದ9 ಆಗ ಆರೋನನ ಪುತ್ರರು ಅವನ ಬಳಿಗೆ ರಕ್ತವನ್ನು ತಂದರು. ಅವನು ಆ ರಕ್ತದಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಿಗೆ ಹಚ್ಚಿ, ಬಲಿಪೀಠದ ಅಡಿಯಲ್ಲಿ ಉಳಿದ ರಕ್ತವನ್ನು ಹೊಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ, ಉಳಿದ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯ್ದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆರೋನನ ಮಕ್ಕಳು ಆ ಬಲಿಪ್ರಾಣಿಯ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ, ಬಲಿಪೀಠದ ಕೊಂಬುಗಳಗೆ ಹಚ್ಚಿ, ಮಿಕ್ಕ ರಕ್ತವನ್ನು ಬಲಿಪೀಠದ ಬುಡದಲ್ಲಿ ಹೊಯ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಆರೋನನ ಮಕ್ಕಳು ಅದರ ರಕ್ತವನ್ನು ಅವನಿಗೆ ಒಪ್ಪಿಸಿದಾಗ ಅವನು ಅದರಲ್ಲಿ ತನ್ನ ಬೆರಳನ್ನು ಅದ್ದಿ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನು ಯಜ್ಞವೇದಿಯ ಬುಡದಲ್ಲಿ ಹೊಯಿದುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆರೋನನ ಪುತ್ರರು ಅದರ ರಕ್ತವನ್ನು ಆರೋನನ ಬಳಿಗೆ ತಂದರು. ಆರೋನನ ತನ್ನ ಬೆರಳನ್ನು ರಕ್ತದಲ್ಲಿ ಅದ್ದಿ ಯಜ್ಞವೇದಿಕೆಯ ಮೂಲೆಗಳಿಗೆ ಹಚ್ಚಿದನು. ಬಳಿಕ ಆರೋನನು ರಕ್ತವನ್ನು ಯಜ್ಞವೇದಿಕೆಯ ಬುಡದಲ್ಲಿ ಸುರಿದನು. ಅಧ್ಯಾಯವನ್ನು ನೋಡಿ |