Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:19 - ಕನ್ನಡ ಸಮಕಾಲಿಕ ಅನುವಾದ

19 ಇವರು ನಿಮ್ಮಲ್ಲಿ ಭಿನ್ನಾಭಿಪ್ರಾಯವನ್ನು ಉಂಟುಮಾಡುವವರೂ ಪ್ರಾಪಂಚಿಕ ಮನುಷ್ಯರೂ ಪವಿತ್ರಾತ್ಮ ದೇವರಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇವರು ತಮ್ಮನ್ನು ತಾವು ಪ್ರತ್ಯೇಕಿಸಿಕೊಳ್ಳುವವರೂ, ಪ್ರಾಕೃತ ಮನುಷ್ಯರೂ, ದೇವರಾತ್ಮ ಇಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇವರು ನಿಮ್ಮಲ್ಲಿ ಭಿನ್ನಭೇದವನ್ನು ಉಂಟುಮಾಡುವವರು, ಪ್ರಾಪಂಚಿಕ ವಿಷಯಾಸಕ್ತರು; ಪವಿತ್ರಾತ್ಮರಹಿತರಾಗಿ ಬಾಳುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇವರು ಭೇದಗಳನ್ನು ಉಂಟುಮಾಡುವವರೂ ಪ್ರಾಕೃತಮನುಷ್ಯರೂ ದೇವರಾತ್ಮವಿಲ್ಲದವರೂ ಆಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಜನರು ನಿಮ್ಮಲ್ಲಿ ಭೇದವನ್ನು ಹುಟ್ಟಿಸುತ್ತಾರೆ. ಈ ಜನರು ತಮ್ಮ ಪಾಪಸ್ವಭಾವದ ಅಪೇಕ್ಷೆಯಂತೆ ಮಾತ್ರ ಮಾಡುತ್ತಾರೆ. ಅವರಲ್ಲಿ ಪವಿತ್ರಾತ್ಮನಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಹಿ ಲೊಕಾ ಹ್ಯಾ ಜಗಾಚಿ ಲೊಕಾತ್ನಿ ಭೆದ್‍ಭಾವ್ ಯೆವ್ಕ್ ಕಾರನ್ ಹೊತಾತ್, ತೆನಿ ಹ್ಯಾ ಜಗಾಚ್ಯಾ ಆಶಾಚ್ಯಾ ಪರ್ಕಾರ್ ಚಲ್ತಾತ್, ತೆಂಚ್ಯಾಕ್ಡೆ ಪವಿತ್ರ್ ಆತ್ಮೊ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:19
11 ತಿಳಿವುಗಳ ಹೋಲಿಕೆ  

ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ಅಂಥ ಜ್ಞಾನವು ದೈವಿಕ ಜ್ಞಾನವಲ್ಲ. ಅದು ಭೂಸಂಬಂಧವಾದದ್ದು. ಅದು ಆತ್ಮಿಕವಾದದ್ದಲ್ಲ. ಅದು ದೆವ್ವಗಳಿಗೆ ಸಂಬಂಧಪಟ್ಟದ್ದು.


ಸಭೆಯಾಗಿ ಸೇರುವುದನ್ನು ಕೆಲವರಿಗೆ ರೂಢಿಯಾಗಿ ಬಿಟ್ಟಂತೆ, ನಾವು ಹಾಗೆ ಮಾಡದಿರೋಣ. ಕರ್ತ ಯೇಸುವಿನ ಪ್ರತ್ಯಕ್ಷತೆಯ ದಿನವು ಸಮೀಪಿಸುತ್ತಾ ಬರುತ್ತದೆ ಎಂದು ನೀವು ತಿಳಿದಿರುವುದರಿಂದ ಒಬ್ಬರನ್ನೊಬ್ಬರು ಪ್ರೋತ್ಸಾಹಗೊಳಿಸುವುದನ್ನು ಇನ್ನೂ ಹೆಚ್ಚಾಗಿ ಮಾಡಿರಿ.


“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.


ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ ಸಮಸ್ತ ಸುಜ್ಞಾನಕ್ಕೂ ರೇಗುವನು.


“ನಿಮ್ಮ ಪುತ್ರಿಯರು ವ್ಯಭಿಚಾರ ಮಾಡುವಾಗಲೂ, ನಿಮ್ಮ ಸೊಸೆಯಂದಿರು ವ್ಯಭಿಚಾರ ಮಾಡುವಾಗಲೂ ನಾನು ಅವರನ್ನು ಶಿಕ್ಷಿಸುವುದಿಲ್ಲ. ಏಕೆಂದರೆ ಪುರುಷರು ಸ್ವತಃ ವೇಶ್ಯೆಯರೊಂದಿಗೆ ವಾಸಿಸುತ್ತಾರೆ ಮತ್ತು ದೇವಾಲಯದ ವೇಶ್ಯೆಯರೊಂದಿಗೆ ಬಲಿ ಅರ್ಪಿಸುತ್ತಾರೆ. ಆದ್ದರಿಂದ ವಿವೇಕವಿಲ್ಲದ ಜನರು ನಾಶವಾಗುತ್ತಾರೆ.


“ ‘ಏಕೆಂದರೆ ಇಸ್ರಾಯೇಲ್ ವಂಶದವರಲ್ಲಾಗಲಿ ಇಸ್ರಾಯೇಲಿನಲ್ಲಿ ನೆಲೆಸಿರುವ ವಿದೇಶಿಗಳಲ್ಲಾಗಲಿ, ಯಾವನಾದರೂ ನನ್ನಿಂದ ಅಗಲಿ ವಿಗ್ರಹಗಳನ್ನು ಹೃದಯದಲ್ಲಿ ನೆಲೆಗೊಳಿಸಿಕೊಂಡು ಪಾಪಕಾರಿಯಾದ ಆ ವಿಘ್ನವನ್ನು ತನ್ನ ಮುಂದೆಯೇ ಇಟ್ಟುಕೊಂಡು, ಪ್ರವಾದಿಯ ಬಳಿಗೆ ಬಂದು, ಅವನ ಮೂಲಕ ದೈವೋತ್ತರವನ್ನು ಕೇಳಿಕೊಂಡರೆ, ಯೆಹೋವ ದೇವರಾದ ನಾನೇ ಉತ್ತರಕೊಡುವೆನು.


ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.


‘ನಿನ್ನಷ್ಟಕ್ಕೆ ನೀನೇ ನಿಂತುಕೋ, ನನ್ನ ಬಳಿಗೆ ಬರಬೇಡ. ಏಕೆಂದರೆ ನಿನಗಿಂತ ಪರಿಶುದ್ಧನಾಗಿದ್ದೇನೆ,’ ಎಂದು ಹೇಳುವರು. ಇವರು ನನ್ನ ಮೂಗಿನಲ್ಲಿ ಹೊಗೆಯಾಗಿಯೂ, ದಿನವೆಲ್ಲಾ ಉರಿಯುವ ಬೆಂಕಿಯಾಗಿಯೂ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು