ಯೂದನು 1:5 - ಕನ್ನಡ ಸಮಕಾಲಿಕ ಅನುವಾದ5 ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ, ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವುದೆಂದರೆ, ಕರ್ತನು ತನ್ನ ಪ್ರಜೆಗಳನ್ನು ಐಗುಪ್ತ ದೇಶದೊಳಗಿಂದ ರಕ್ಷಿಸಿದರೂ, ತರುವಾಯ ಅವರೊಳಗೆ ನಂಬದೇ ಹೋದವರನ್ನು ನಾಶಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಇದನ್ನೆಲ್ಲಾ ನೀವು ಈಗಾಗಲೇ ಚೆನ್ನಾಗಿ ಅರಿತವರಾಗಿದ್ದೀರಿ. ಆದರೂ ಕೆಲವು ವಿಷಯಗಳನ್ನು ನಿಮ್ಮ ನೆನಪಿಗೆ ತರಲು ಬಯಸುತ್ತೇನೆ: ದೇವರು ತಮ್ಮ ಪ್ರಜೆಗಳನ್ನು ಈಜಿಪ್ಟ್ ದೇಶದಿಂದ ಬಿಡುಗಡೆಮಾಡಿದರು; ವಿಶ್ವಾಸವಿಡದವರನ್ನು ಅನಂತರ ಅವರೇ ನಾಶಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀವು ಈಗಾಗಲೇ ತಿಳಿದುಕೊಂಡಿರುವ ಕೆಲವು ವಿಚಾರಗಳನ್ನು ನೆನಪು ಮಾಡಿಕೊಳ್ಳಲು ನಾನು ನಿಮಗೆ ಸಹಾಯ ಮಾಡಲಿಚ್ಛಿಸುತ್ತೇನೆ. ಪ್ರಭುವು ತನ್ನ ಜನರನ್ನು ಈಜಿಪ್ಟ್ ದೇಶದಿಂದ ಹೊರಗೆ ತಂದು ಅವರನ್ನು ರಕ್ಷಿಸಿದನೆಂಬುದನ್ನು ನೆನಪು ಮಾಡಿಕೊಳ್ಳಿರಿ. ತರುವಾಯ ಪ್ರಭುವು ನಂಬಿಕೆಯಿಲ್ಲದ ಜನರೆಲ್ಲರನ್ನೂ ನಾಶಪಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತುಮ್ಕಾ ಅದ್ದಿಚ್ ಗೊತ್ತ್ ಹಾಯ್ ಜಾಲ್ಯಾರ್ಬಿ ಉಲ್ಲ್ಯಾ ಫಾಟ್ಲ್ಯಾ ಸಂಗ್ತಿಯಾ ಮಿಯಾ ತುಮ್ಕಾ ಯಾದ್ ಕರುಕ್ ಆಶಾ ಕರ್ತಾ, ಧನಿಯಾನ್ ಆಪ್ಲ್ಯಾ ಲೊಕಾಕ್ನಿ ಇಜಿಪ್ತ್ ದೆಶಾತ್ನಾ ಭಾಯ್ರ್ ಹಾನುನ್ ಬಚಾವ್ ಕರಲ್ಲೆ ಯಾದ್ ಕರುನ್ ಘೆವಾ. ಖರೆ ಮಾನಾ ಧನಿಯಾನ್ ವಿಶ್ವಾಸ್ ಕರಿನಸಲ್ಲ್ಯಾ ಲೊಕಾಕ್ನಿ ನಾಸ್ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |