Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೂದನು 1:7 - ಕನ್ನಡ ಸಮಕಾಲಿಕ ಅನುವಾದ

7 ಸೊದೋಮ ಗೊಮೋರದವರೂ ಹಾಗೆಯೇ ಅವುಗಳ ಸುತ್ತಮುತ್ತಣ ಪಟ್ಟಣಗಳವರೂ ಅದೇ ರೀತಿಯಲ್ಲಿ ತಮ್ಮನ್ನು ಅನೈತಿಕತೆಗೆ ಒಪ್ಪಿಸಿಕೊಟ್ಟರು. ಅವರು ಸ್ವಭಾವಕ್ಕೆ ವಿರುದ್ಧ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ ಉದಾಹರಣೆಗಾಗಿ ಇಡಲಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಸೊದೋಮ್, ಗೊಮೋರ ಮತ್ತು ಅವುಗಳ ಸುತ್ತಮುತ್ತಲಿನ ಪಟ್ಟಣಿಗರು ಆ ದೂತರಂತೆಯೇ ನಡೆದುಕೊಂಡರು. ಅಲ್ಲದೆ, ಅವರು ಅನೈತಿಕತೆಯಲ್ಲೂ ಪ್ರಕೃತಿ ವಿರುದ್ಧವಾದ ಲೈಂಗಿಕಕೃತ್ಯಗಳಲ್ಲೂ ಮಗ್ನರಾಗಿದ್ದರು. ಈ ಕಾರಣದಿಂದ ಅವರು ನಿತ್ಯಾಗ್ನಿಯ ಶಿಕ್ಷೆಗೆ ಗುರಿಯಾಗಿ ಇತರರಿಗೆ ಎಚ್ಚರಿಕೆಯನ್ನು ನೀಡುವ ನಿದರ್ಶನವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಸೊದೋಮ್ ಮತ್ತು ಗೊಮೋರ ನಗರಗಳನ್ನೂ ಅವುಗಳ ಸುತ್ತಲಿನ ಪಟ್ಟಣಗಳನ್ನೂ ನೆನಪು ಮಾಡಿಕೊಳ್ಳಿರಿ. ಅವುಗಳೂ ಆ ದೇವದೂತರಂತಾದವು. ಆ ಪಟ್ಟಣಗಳಲ್ಲಿ ಲೈಂಗಿಕ ಪಾಪಗಳು ಮತ್ತು ಕೆಟ್ಟಕಾರ್ಯಗಳು ತುಂಬಿಕೊಂಡಿದ್ದವು. ಅವರು ನಿತ್ಯವಾದ ಬೆಂಕಿಯ ದಂಡನೆಯಿಂದ ಸಂಕಟಪಡುವರು. ಅವರಿಗೆ ನೀಡಿದ ದಂಡನೆಯು ನಮಗೊಂದು ದೃಷ್ಟಾಂತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಸೊದೊಮ್, ಗೊಮೊರ್ ಅನಿ ತೆಚ್ಯಾ ಆಜುಬಾಜುಕ್ ಹೊತ್ತ್ಯಾ ಶಾರಾಕ್ನಿ ಯಾದ್ ಕರುನ್ ಘೆವಾ, ಥೈತ್ಲ್ಯಾ ಲೊಕಾನಿಬಿ ತ್ಯಾ ದೆವಾಚ್ಯಾ ದುತಾಂಚ್ಯಾ ಸಾರ್ಕೆ ಅನೈತಿಕ್ ಶಾರಿರಿಕ್ ಸಮಂದ್ ಅನಿ ಸ್ವಭಾವಾ ಸಾರ್ಕೆ ಕರಿನಸ್ತಾನಾ ರ್‍ಹಾತಲೆ, ಪೊಜ್ಡೆಪಾನ್ ಕರ್ಲ್ಯಾನಿ. ಅಸೆ ತೆನಿ ಸಗ್ಳ್ಯಾಕ್ನಿ ಎಕ್ ಹುಶಾರ್ಕಿಚ್ಯಾ ರುಪಾತ್ ಕನ್ನಾಚ್ ಇಜಿನಸಲ್ಲ್ಯಾ ಆಗಿಚ್ಯಾ ಶಿಕ್ಷಾತ್ ಪಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೂದನು 1:7
27 ತಿಳಿವುಗಳ ಹೋಲಿಕೆ  

ಯೆಹೋವ ದೇವರು ತಮ್ಮ ದೈವಿಕ ಕೋಪದಲ್ಲಿ ಕೆಡವಿ ಹಾಕಿದ ಸೊದೋಮ್, ಗೊಮೋರ, ಅದ್ಮಾ, ಚೆಬೋಯಿಮ್ ಎಂಬ ಪಟ್ಟಣಗಳಂತೆ ಆ ದೇಶವೆಲ್ಲಾ ಗಂಧಕವೂ, ಉಪ್ಪೂ ಉರಿಯುತ್ತಾ, ವ್ಯವಸಾಯವಾದರೂ ಹುಲ್ಲಾದರೂ ಬೆಳೆಯದೆ ಇರುವುದು.


ದೇವರು ಸೊದೋಮ ಗೊಮೋರ ಪಟ್ಟಣಗಳನ್ನು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರ ಗತಿಗೆ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದರು.


ಇದಲ್ಲದೆ ಯೆಹೋವ ದೇವರು, “ಸೊದೋಮ್ ಗೊಮೋರಗಳ ಕೂಗು ದೊಡ್ಡದಾಗಿದೆ. ಅವರ ಪಾಪವೂ ಘೋರವಾಗಿದೆ.


ಆದರೆ ಲೋಟನು ಸೊದೋಮಿನಿಂದ ತೆರಳಿದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಮಾಡಿತು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.


ಸೊದೋಮಿನ ಜನರು ದುಷ್ಟರಾಗಿದ್ದರು ಮತ್ತು ಯೆಹೋವ ದೇವರ ವಿರುದ್ಧ ಬಹಳ ಪಾಪಮಾಡುತ್ತಿದ್ದರು.


ಅನ್ಯಾಯಗಾರರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಮೋಸಹೋಗಬೇಡಿರಿ: ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಸಲಿಂಗಕಾಮಿಗಳು,


ಸೇನಾಧೀಶ್ವರ ಯೆಹೋವ ದೇವರು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ನಾವು ಸೊದೋಮಿನಂತೆ ಆಗುತ್ತಿದ್ದೆವು, ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.


“ಸೊದೋಮನ್ನೂ, ಗೊಮೋರವನ್ನೂ ಕೆಡವಿದ ಹಾಗೆ, ನಾನು ನಿಮ್ಮಲ್ಲಿ ಕೆಲವರನ್ನು ಕೆಡವಿ ಹಾಕಿದ್ದೇನೆ. ಬೆಂಕಿ ಉರಿಯೊಳಗಿಂದ ತೆಗೆದ ಕೊಳ್ಳಿಯ ಹಾಗೆ ಇದ್ದೀರಿ. ಆದರೂ ನೀವೂ ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅವರು ಲೋಟನನ್ನು ಕರೆದು, “ಈ ರಾತ್ರಿಯಲ್ಲಿ ನಿನ್ನ ಬಳಿಗೆ ಬಂದ ಮನುಷ್ಯರು ಎಲ್ಲಿ? ಅವರನ್ನು ನಮ್ಮ ಬಳಿಗೆ ಕರೆದುಕೊಂಡು ಬಾ, ಅವರೊಡನೆ ಸಂಭೋಗಿಸಬೇಕು,” ಎಂದು ಹೇಳಿದರು.


ಆದರೆ ಈಗಿನ ಆಕಾಶವೂ ಭೂಮಿಯೂ ಅದೇ ವಾಕ್ಯದಿಂದ ಬೆಂಕಿಗಾಗಿ ಕಾದಿರಿಸಲಾಗಿವೆ. ಅವು ನ್ಯಾಯತೀರ್ಪಿಗಾಗಿ ಮತ್ತು ಭಕ್ತಿಹೀನರ ನಾಶನಕ್ಕಾಗಿ ಇಡಲಾಗಿವೆ.


“ಎಫ್ರಾಯೀಮೇ, ನಿನ್ನನ್ನು ಹೇಗೆ ಬಿಟ್ಟುಬಿಡಲಿ? ಇಸ್ರಾಯೇಲೇ, ನಿನ್ನನ್ನು ಹೇಗೆ ಕೈಬಿಡಲಿ? ಅದ್ಮದ ಹಾಗೆ ನಿನ್ನನ್ನು ದುರ್ಗತಿಗೆ ಹೇಗೆ ಒಪ್ಪಿಸಲಿ? ಚೆಬೋಯಿಮನಂತೆ ನಿನ್ನನ್ನು ಹೇಗೆ ನಾಶಮಾಡಲಿ? ನನ್ನ ಹೃದಯವು ನನ್ನಲ್ಲಿ ಮಾರ್ಪಟ್ಟಿದೆ. ನನ್ನಲ್ಲಿ ಕರುಣೆ ಉಕ್ಕಿ ಬಂದಿದೆ.


ರಾಜ್ಯಗಳ ಘನತೆಯೂ, ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬಿಲೋನನ್ನು ದೇವರು ಸೊದೋಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಕೆಡವಿಬಿಡುವನು.


ಆದರೆ ನ್ಯಾಯತೀರ್ಪಿನ ದಿನದಲ್ಲಿ ನಿಮಗಿಂತಲೂ ಸೊದೋಮ್ ಪಟ್ಟಣದ ಗತಿಯು ಹೆಚ್ಚು ತಾಳಬಹುದಾಗಿರುವುದು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು.


ಆ ಮನುಷ್ಯನು, ಯೆಹೋವ ದೇವರು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ. ಅವನು ಬೆಳಿಗ್ಗೆ ಕೂಗನ್ನೂ, ಮಧ್ಯಾಹ್ನದಲ್ಲಿ ಆರ್ಭಟವನ್ನೂ ಕೇಳಲಿ.


ನನ್ನ ಜನರ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು. ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲಾಯಿತು ಮತ್ತು ಅವಳಿಗೆ ಸಹಾಯಮಾಡಲು ಯಾವ ಕೈಗಳೂ ಇರಲಿಲ್ಲ.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಅವನ ತಂದೆ ಆಸನ ಕಾಲದಲ್ಲಿ ಉಳಿದಿದ್ದ ಪುರುಷಗಾಮಿಗಳನ್ನು ಅವನು ದೇಶದಿಂದ ತೆಗೆದುಹಾಕಿದನು.


ನ್ಯಾಯತೀರ್ಪಿನ ದಿನದಲ್ಲಿ ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಗತಿಯು ಆ ಪಟ್ಟಣಕ್ಕಿಂತ ಹೆಚ್ಚು ತಾಳುವಂಥದ್ದಾಗಿರುವುದು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ಅವರು ದೇವರನ್ನು ಅರಿಯದವರಿಗೂ ನಮಗೆ ಕರ್ತ ಆಗಿರುವ ಯೇಸುವಿನ ಸುವಾರ್ತೆಗೆ ಅವಿಧೇಯರಾದವರಿಗೂ ಪ್ರತೀಕಾರ ಮಾಡುವರು.


ಆ ಸುಳ್ಳು ಬೋಧಕರ ಅಸಹ್ಯ ಕೃತ್ಯಗಳನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು