Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 1:18 - ಕನ್ನಡ ಸಮಕಾಲಿಕ ಅನುವಾದ

18 ಸಮಸ್ತ ದೇಶಕ್ಕೆ ವಿರೋಧವಾಗಿ ಯೆಹೂದದ ಅರಸರಿಗೆ ವಿರೋಧವಾಗಿಯೂ, ಅದರ ಪ್ರಧಾನರಿಗೆ ವಿರೋಧವಾಗಿಯೂ, ಅದರ ಯಾಜಕರಿಗೆ ವಿರೋಧವಾಗಿಯೂ, ದೇಶದ ಜನರಿಗೆ ವಿರೋಧವಾಗಿಯೂ ನಾನೇ ಈ ಹೊತ್ತು ನಿನ್ನನ್ನು ಕೋಟೆಯುಳ್ಳ ಪಟ್ಟಣವಾಗಿಯೂ, ಕಬ್ಬಿಣದ ಸ್ತಂಭವಾಗಿಯೂ, ಕಂಚಿನ ಗೋಡೆಗಳಾಗಿಯೂ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನಾನು ಹೇಳುವುದನ್ನು ಗಮನದಿಂದ ಕೇಳು - ಈ ದಿನ ನಿನ್ನನ್ನು ಜುದೇಯದ ಅರಸರು, ಅಧಿಪತಿಗಳು, ಯಾಜಕರು, ಜನಸಾಮಾನ್ಯರು, ಹೀಗೆ ನಾಡಿನವರೆಲ್ಲರನ್ನು ಎದುರಿಸತಕ್ಕವನನ್ನಾಗಿ ಮಾಡಿದ್ದೇನೆ; ಕೋಟೆಕೊತ್ತಲಗಳಿಂದ ಸುಸಜ್ಜಿತ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ನಿನ್ನನ್ನು ಸ್ಥಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಇಗೋ, ನೀನು ನನ್ನ ವಿಷಯವಾಗಿ ಹೇಳಬೇಕು. ನಾನು ನಿನ್ನನ್ನು ಭದ್ರವಾದ ನಗರವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ಕಂಚಿನ ಗೋಡೆಯನ್ನಾಗಿಯೂ ಮಾಡುತ್ತೇನೆ. ನೀನು ದೇಶದಲ್ಲಿ ಎಲ್ಲರಿಗೂ ಎದುರಾಗಿ ನಿಲ್ಲಬಹುದು, ಯೆಹೂದ ದೇಶದ ರಾಜರ ವಿರುದ್ಧವಾಗಿಯೂ ಯೆಹೂದದ ನಾಯಕರ ವಿರುದ್ಧವಾಗಿಯೂ ಯೆಹೂದದ ಯಾಜಕರ ವಿರುದ್ಧವಾಗಿಯೂ ಯೆಹೂದದೇಶದ ಜನರ ವಿರುದ್ಧವಾಗಿಯೂ ನೀನು ನಿಲ್ಲುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 1:18
21 ತಿಳಿವುಗಳ ಹೋಲಿಕೆ  

ಸಾರ್ವಭೌಮ ಯೆಹೋವ ದೇವರು, ನನಗೆ ಸಹಾಯ ಮಾಡುವನು. ಆದಕಾರಣ ನಾನು ಅವಮಾನ ಪಡುವುದಿಲ್ಲ. ಆದ್ದರಿಂದ ನನ್ನ ಮುಖವನ್ನು ಕಗ್ಗಲ್ಲಿನಂತೆ ಮಾಡಿಕೊಂಡಿದ್ದೇನೆ. ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.


ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ.


“ನೀನು ನನ್ನ ಜನರ ಮಾರ್ಗವನ್ನು ಪರೀಕ್ಷಿಸಿ ತಿಳಿದುಕೊಳ್ಳುವಂತೆ, ನಾನು ನಿನ್ನನ್ನು ನನ್ನ ಜನವೆಂಬ ಅದುರಿಗೆ ಲೋಹ ಶೋಧಕನನ್ನಾಗಿ ನೇಮಿಸಿದ್ದೇನೆ.


“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಬಳಿಯಲ್ಲಿ ವಿಚಾರಿಸುವುದಕ್ಕೆ ನಿಮ್ಮನ್ನು ಕಳುಹಿಸಿದ ಯೆಹೂದದ ಅರಸನಿಗೆ ನೀವು ಹೇಳಬೇಕಾದದ್ದೇನೆಂದರೆ, ಇಗೋ, ನಿಮ್ಮ ಸಹಾಯಕ್ಕೆ ಹೊರಟ, ‘ಫರೋಹನ ಸೈನ್ಯವು, ಅದರ ಸ್ವದೇಶವಾದ ಈಜಿಪ್ಟಿಗೆ ಹಿಂದಿರುಗುವುದು.


“ಯೆಹೋವ ದೇವರು ಹೀಗೆನ್ನುತ್ತಾರೆ: ‘ನಗರದಲ್ಲಿ ನಿಲ್ಲುವವರು ಖಡ್ಗ, ಕ್ಷಾಮ, ವ್ಯಾಧಿಗಳಿಂದ ಸಾಯುವರು. ನಗರವನ್ನು ಬಿಟ್ಟು ಹೋಗಿ, ಬಾಬಿಲೋನಿಯರನ್ನು ಮೊರೆಹೋಗುವವರು ಬದುಕುವರು. ತಮ್ಮ ಪ್ರಾಣದೊಂದಿಗೆ ತಪ್ಪಿಸಿಕೊಂಡವರು, ಬದುಕುವರು.


ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.


ನೀನು ಅವನ ಕೈಯೊಳಗಿಂದ ತಪ್ಪಿಸಿಕೊಳ್ಳುವುದಿಲ್ಲ. ಆದರೆ ನಿಶ್ಚಯವಾಗಿ ಹಿಡಿಯಲಾಗಿ, ಅವನ ಕೈವಶವಾಗುವೆ. ನೀವು ಬಾಬಿಲೋನಿನ ಅರಸನನ್ನು ಪ್ರತ್ಯಕ್ಷವಾಗಿ ಕಾಣುವಿರಿ. ಅವನು ನಿಮ್ಮೊಂದಿಗೆ ಮುಖಾಮುಖಿಯಾಗಿ ಮಾತನಾಡುವನು. ನೀನು ಬಾಬಿಲೋನಿಗೆ ಹೋಗುವಿ.


‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು.


ಅವನನ್ನು ಯೇಸುವಿನ ಬಳಿಗೆ ಕರೆತಂದನು. “ಮೆಸ್ಸೀಯ” ಎಂದರೆ ಕ್ರಿಸ್ತ ಎಂದು ಅರ್ಥ. ಯೇಸು ಅವನನ್ನು ನೋಡಿ, “ನೀನು ಯೋಹಾನನ ಮಗ ಸೀಮೋನನು. ನಿನ್ನನ್ನು ‘ಕೇಫ’ ಎಂದು ಕರೆಯುವರು,” ಎಂದು ಹೇಳಿದರು. “ಕೇಫ” ಎಂದರೆ ಪೇತ್ರ ಇಲ್ಲವೆ ಬಂಡೆ ಎಂದರ್ಥ.


ಆದರೆ ನೀನು ಬಾಬಿಲೋನಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ, ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲಾಗುವುದು. ಅವರು ಅದನ್ನು ಬೆಂಕಿಯಿಂದ ಸುಡುವರು. ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವುದಿಲ್ಲ,’ ” ಎಂದನು.


ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.


“ಆದ್ದರಿಂದ ಈಗ ನೀನು ನಿನ್ನ ನಡುವನ್ನು ಕಟ್ಟಿ ನಿಂತುಕೊಂಡು, ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಅವರ ಸಂಗಡ ಮಾತನಾಡು. ನಾನು ನಿನ್ನನ್ನು ಅವರ ಮುಂದೆ ದಿಗಿಲುಪಡಿಸದ ಹಾಗೆ ನೀನು ಅವರಿಗೆ ಭಯಪಡಬೇಡ.


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ಇತ್ತ ಯಾಜಕರೂ, ಪ್ರವಾದಿಗಳೂ ಯೆರೆಮೀಯನನ್ನು ಜನರ ಕೈಗೆ ಸಿಕ್ಕಿಸಿ, ಕೊಲ್ಲಿಸಲು ಸಾಧ್ಯವಾಗಲಿಲ್ಲ. ಏಕೆಂದರೆ ಯೆರೆಮೀಯನಿಗೆ ಶಾಫಾನನ ಮಗ ಅಹೀಕಾಮನ ಸಹಾಯ ದೊರಕಿತ್ತು.


ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು