ಯೆರೆಮೀಯ 1:3 - ಕನ್ನಡ ಸಮಕಾಲಿಕ ಅನುವಾದ3 ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಕಾಲದ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆ ಹೋಗುವ ತನಕ ಯೆಹೋವ ದೇವರ ವಾಕ್ಯವು ಒದಗುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅಲ್ಲದೆ, ಜುದೇಯದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಜುದೇಯದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ಜನರು ಸೆರೆಹೋಗುವ ತನಕ ಸರ್ವೇಶ್ವರ ಸ್ವಾಮಿಯ ವಾಣಿ ಇವನಿಗೆ ಕೇಳಿಬರುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅಲ್ಲದೆ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ ಯೋಷೀಯನ ಮಗನೂ ಆದ ಚಿದ್ಕೀಯನ ಆಳಿಕೆಯ ಹನ್ನೊಂದನೆಯ ವರುಷದ ಐದನೆಯ ತಿಂಗಳಿನಲ್ಲಿ ಯೆರೂಸಲೇವಿುನವರು ಸೆರೆಹೋಗುವ ತನಕ ಯೆಹೋವನ ವಾಕ್ಯವು ಒದಗುತ್ತಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೋಯಾಕೀಮನು ಯೆಹೂದದಲ್ಲಿ ಆಳುವಾಗಲೂ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಯೆಹೋಯಾಕೀಮನು ಯೋಷೀಯನ ಮಗನು. ಯೆಹೂದದಲ್ಲಿ ಚಿದ್ಕೀಯನು ಆಳಿದ ಹನ್ನೊಂದು ವರ್ಷ ಐದು ತಿಂಗಳ ಕಾಲ ಯೆಹೋವನು ಯೆರೆಮೀಯನೊಂದಿಗೆ ಮಾತನಾಡುವದನ್ನು ಮುಂದುವರೆಸಿದನು. ಚಿದ್ಕೀಯನು ಸಹ ಯೋಷೀಯನ ಮಗನಾಗಿದ್ದನು. ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರ್ಷದ ಐದನೆಯ ತಿಂಗಳಿನಲ್ಲಿ ಜೆರುಸಲೇಮಿನ ನಿವಾಸಿಗಳು ಸೆರೆ ಒಯ್ಯಲ್ಪಟ್ಟರು. ಅಧ್ಯಾಯವನ್ನು ನೋಡಿ |