Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:15 - ಕನ್ನಡ ಸಮಕಾಲಿಕ ಅನುವಾದ

15 ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ. ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವು ವ್ಯರ್ಥವಾದುವುಗಳು, ಹಾಸ್ಯಾಸ್ಪದವಾದುವುಗಳು ದಂಡನೆಯ ಕಾಲದಲ್ಲಿ ಅಳಿದುಹೋಗುವಂಥವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದು ಹೋಗುವವು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ವಿಗ್ರಹಗಳು ನಿಷ್ಪ್ರಯೋಜಕ ವಸ್ತುಗಳಾಗಿವೆ. ಅವು ಅಪಹಾಸ್ಯಕ್ಕೆ ಯೋಗ್ಯವಾದವುಗಳಾಗಿವೆ. ನ್ಯಾಯನಿರ್ಣಯದ ಸಮಯದಲ್ಲಿ ಆ ವಿಗ್ರಹಗಳನ್ನು ನಾಶಪಡಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:15
22 ತಿಳಿವುಗಳ ಹೋಲಿಕೆ  

ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ನೀವು ಶೂನ್ಯವೇ, ನಿಮ್ಮ ಕಾರ್ಯವು ವ್ಯರ್ಥವೇ. ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ.


ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ; ಅವುಗಳ ದಂಡನೆಯ ಕಾಲದಲ್ಲಿ ಅವು ನಾಶವಾಗುವುವು.


“ಆ ದಿನದಲ್ಲಿ, ನಾನು ವಿಗ್ರಹಗಳ ಹೆಸರುಗಳನ್ನು ದೇಶದೊಳಗಿಂದ ಕಡಿದುಬಿಡುವೆನು. ಅವು ಇನ್ನು ಮೇಲೆ ಜ್ಞಾಪಕಕ್ಕೆ ಬರುವುದಿಲ್ಲ,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ. “ಪ್ರವಾದಿಗಳನ್ನೂ, ಅಶುದ್ಧ ಆತ್ಮವನ್ನೂ ದೇಶದೊಳಗಿಂದ ತೊಲಗಿಹೋಗುವಂತೆ ಮಾಡುವೆನು.


“ನಿರುಪಯೋಗ ಮೂರ್ತಿಗಳಿಗೆ ಅಂಟಿಕೊಳ್ಳುವವರು, ಅವರದಾಗುವ ದೇವರ ಪ್ರೀತಿಯನ್ನು ಕಳೆದುಕೊಳ್ಳುವರು.


ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು: “ಯೆಹೋವ ದೇವರು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ?” ಎಂಬುದೇ ಆದರೂ ಅವರು ತಮ್ಮ ವಿಗ್ರಹಗಳಿಂದಲೂ, ವಿಚಿತ್ರವಾದ ವ್ಯರ್ಥತ್ವಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಏಕೆ?


ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆ ಪಡಲಿಲ್ಲ, ಲಜ್ಜೆಯನ್ನೇ ಅರಿಯರು. ಆದ್ದರಿಂದ ಬೀಳುವವರೊಳಗೆ ಅವರು ಬೀಳುವರು. ನಾನು ಅವರನ್ನು ದಂಡಿಸುವ ಕಾಲದಲ್ಲಿ, ಅವರು ಕೆಳಗೆ ಬೀಳುವರು, ಎಂದು ಯೆಹೋವ ದೇವರು ಹೇಳುತ್ತಾರೆ.


“ಪ್ರಿಯ ಜನರೇ, ನೀವಿದನ್ನು ಏಕೆ ಮಾಡುತ್ತಿರುವಿರಿ? ನಾವೂ ನಿಮ್ಮ ಹಾಗೆಯೇ ಮಾನವರು. ಇಂಥಾ ವ್ಯರ್ಥವಾದ ಸಂಗತಿಗಳನ್ನು ಬಿಟ್ಟು ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅದರಲ್ಲಿರುವ ಪ್ರತಿಯೊಂದನ್ನೂ ಸೃಷ್ಟಿಸಿದ ಜೀವಿಸುವ ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನಿಮಗೆ ಸುವಾರ್ತೆಯನ್ನು ಸಾರುತ್ತಿದ್ದೇವೆ.


“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ”


ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.


ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.”


ವ್ಯರ್ಥವಾದ ವಸ್ತುಗಳ ಹಿಂದೆ ಹೋಗಬೇಡಿರಿ. ಅವು ನಿಮಗೆ ಒಳ್ಳೆಯದನ್ನು ಮಾಡಲಾರದವುಗಳೂ ನಿಮ್ಮನ್ನು ಬಿಡಿಸಲಾರದವುಗಳೂ ಆಗಿವೆ. ಏಕೆಂದರೆ ಅವು ವ್ಯರ್ಥವಾದವುಗಳಾಗಿವೆ.


ದೇವರಲ್ಲದವುಗಳಿಂದ ಅವರು ನನಗೆ ರೋಷ ಹುಟ್ಟಿಸಿದರು. ತಮ್ಮ ವ್ಯರ್ಥವಾದವುಗಳಿಂದ ನನಗೆ ಕೋಪವನ್ನು ಎಬ್ಬಿಸಿದರು. ನಾನು ಜನಾಂಗವಲ್ಲದವರ ಮೂಲಕ ನೀವು ಅಸೂಯೆಪಡುವಂತೆ ಮಾಡುವೆನು. ಮೂಢ ಜನಾಂಗದಿಂದ ಅವರಿಗೆ ಕೋಪವನ್ನೆಬ್ಬಿಸುವೆನು.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.


ಇಸ್ರಾಯೇಲರ ಮನೆಯವರೇ, ಯೆಹೋವ ದೇವರಲ್ಲಿ ಭರವಸೆ ಇಡಿರಿ; ಅವರೇ ನಿಮ್ಮ ಸಹಾಯವೂ, ಗುರಾಣಿಯೂ ಆಗಿದ್ದಾರೆ.


ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.


ನಾನು ಈಜಿಪ್ಟ್ ದೇವರುಗಳ ಆಲಯಗಳಲ್ಲಿ ಬೆಂಕಿ ಹಚ್ಚುವೆನು. ಅವನು ಅವರನ್ನು ಸುಟ್ಟುಬಿಟ್ಟು, ಸೆರೆಯಾಗಿ ಒಯ್ಯುವನು. ಕುರುಬನು ತನ್ನ ಉಡುಪನ್ನು ಹೇನುಗಳಿಂದ ಶುದ್ಧೀಕರಿಸುವಂತೆ ಅವನು ಈಜಿಪ್ಟ್ ದೇಶವನ್ನು ಶುದ್ಧವಾಗಿಸಿಕೊಂಡು ಅಲ್ಲಿಂದ ಸಮಾಧಾನವಾಗಿ ಹೊರಟು ಹೋಗುತ್ತಾನೆ.


“ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವನ್ನೆತ್ತಿ ಪ್ರಕಟಿಸಿರಿ; ಮರೆಮಾಡದೇ ಹೀಗೆ ಸಾರಿರಿ, ‘ಬಾಬಿಲೋನ್ ಶತ್ರುವಶವಾಯಿತು; ಬೇಲ್ ದೇವತೆಗೆ ನಾಚಿಕೆಯಾಯಿತು; ಮೆರೋದಾಕ್ ತುಂಡುತುಂಡಾಗಿ ಮುರಿದು ಹೋದನು. ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಮತ್ತು ಅವಳ ವಿಗ್ರಹಗಳು ಭಯದಿಂದ ತುಂಬಿವೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು