Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:16 - ಕನ್ನಡ ಸಮಕಾಲಿಕ ಅನುವಾದ

16 ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ. ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಯಾಕೋಬ್ಯರ ದೇವರು ಆ ವಿಗ್ರಹಗಳಂತಲ್ಲ. ಆತನು ಸಮಸ್ತವನ್ನೂ ನಿರ್ಮಿಸಿದಾತನಾಗಿದ್ದಾನೆ. ಇಸ್ರೇಲು ಆತನ ಸ್ವಾಸ್ತ್ಯವಾದ ಜನಾಂಗ. “ಸರ್ವಶಕ್ತನಾದ ಯೆಹೋವ” ಎಂಬುದು ಆತನ ನಾಮಧೇಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:16
28 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರ ಪಾಲು ಅವರ ಜನರೇ ಆಗಿರುತ್ತಾರೆ. ಯಾಕೋಬ್ಯರೇ ದೇವರ ಸೊತ್ತಿನ ಪಾಲು.


ನೀವು ಸಾವಿರಾರು ತಲೆಗಳವರೆಗೆ ಪ್ರೀತಿ, ದಯೆತೋರಿಸಿ, ತಂದೆಗಳ ಅಕ್ರಮಗಳನ್ನು ಅವರ ತರುವಾಯ ಇರುವ ಅವರ ಮಕ್ಕಳ ಎದೆಯಲ್ಲಿ ಸುರಿಸುವವರಾಗಿದ್ದೀರಿ. ಮಹತ್ವವುಳ್ಳವರೂ, ಪರಾಕ್ರಮವುಳ್ಳ ದೇವರೂ, ಸೇನಾಧೀಶ್ವರ ಯೆಹೋವ ದೇವರೂ ಎಂಬುದು ನಿಮ್ಮ ಹೆಸರು.


ಇದು ಯೆಹೋವ ದೇವರಾದ ನನ್ನ ನುಡಿ, ಯೆಹೋವ ದೇವರು, ಹಗಲಲ್ಲಿ ಬೆಳಕು ನೀಡಲು ಸೂರ್ಯನನ್ನು ನೇಮಿಸಿದವರು. ಇರುಳಲ್ಲಿ ಬೆಳಕು ನೀಡಲು ಚಂದ್ರ ನಕ್ಷತ್ರಗಳನ್ನು ಏರ್ಪಡಿಸಿದವರು. ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ಕೆರಳಿಸುವವರು, ಸೇನಾಧೀಶ್ವರ ಯೆಹೋವ ದೇವರು ಎಂಬ ನಾಮಧೇಯದಿಂದ ಪ್ರಸಿದ್ಧರು.


ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ; ಏಕೆಂದರೆ ಅವರು ಎಲ್ಲವನ್ನು ರೂಪಿಸಿದವರೇ, ಇಸ್ರಾಯೇಲ್ ಅವರ ಸ್ವಾಸ್ತ್ಯವಾದ ವಂಶ. ಅವರ ಹೆಸರು ಸೇನಾಧೀಶ್ವರ ಯೆಹೋವ ದೇವರೇ.


ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ, ತಮ್ಮ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತಮ್ಮ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾರೆ.


ಯೆಹೋವ ದೇವರೇ, ನೀವೇ ನನ್ನ ಪಾಲು; ನಿಮ್ಮ ವಾಕ್ಯಗಳನ್ನು ಪಾಲಿಸುವೆನೆಂದು ನಾನು ಪ್ರಮಾಣ ಮಾಡಿದ್ದೇನೆ.


ಪೂರ್ವಕಾಲದಲ್ಲಿ ನೀವು ಕೊಂಡುಕೊಂಡ ನಿಮ್ಮ ಜನರನ್ನೂ ನೀವು ವಿಮೋಚಿಸಿದ ನಿಮ್ಮ ಬಾಧ್ಯತೆಯನ್ನೂ ನೀವು ವಾಸಮಾಡಿದ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೊಳ್ಳಿರಿ.


“ಯೆಹೋವ ದೇವರೇ ನನ್ನ ಪಾಲು, ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,” ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.


ಯೆಹೋವ ದೇವರು ಯಾಕೋಬನನ್ನು ತಮಗೋಸ್ಕರ ಆಯ್ದುಕೊಂಡರು, ಇಸ್ರಾಯೇಲನ್ನು ತಮ್ಮ ಶ್ರೇಷ್ಠ ಸಂಪತ್ತಾಗಿಯೂ ಆಯ್ದುಕೊಂಡಿದ್ದಾರೆ.


ಅವರ ವಿಮೋಚಕನು ಬಲಿಷ್ಠನೇ, ಸೇನಾಧೀಶ್ವರ ಯೆಹೋವ ದೇವರೆಂಬುದೇ ಅವರ ಹೆಸರು; ಅವರು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ, ಬಾಬಿಲೋನಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ, ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವರು.


ಬೆಳಕನ್ನು ರೂಪಿಸುವವನೂ, ಕತ್ತಲನ್ನು ನಿರ್ಮಿಸುವವನೂ, ಸಮಾಧಾನವನ್ನು ಉಂಟುಮಾಡುವವನೂ, ವಿಪತ್ತನ್ನು ಬರಮಾಡುವವನೂ ನಾನೇ. ಯೆಹೋವನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.


ನನ್ನ ತನುಮನಗಳು ಕುಂದುತ್ತವೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ, ನನ್ನ ಪಾಲೂ ಆಗಿದ್ದಾರೆ.


ಆದ್ದರಿಂದ ಈಗ ನೀವು ನನ್ನ ಮಾತನ್ನು ಕೇಳಿ, ನನ್ನ ಒಡಂಬಡಿಕೆಯನ್ನು ಕಾಪಾಡಿದರೆ, ಸಮಸ್ತ ಜನರಲ್ಲಿ ನೀವು ನನ್ನ ಸಂಗ್ರಹಿಸಿದ ಸೊತ್ತಾಗಿರುವಿರಿ. ಏಕೆಂದರೆ ಭೂಮಿಯೆಲ್ಲಾ ನನ್ನದೇ.


ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ. ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು. ನಿನ್ನ ವಿಮೋಚಕನು ಇಸ್ರಾಯೇಲಿನ ಪರಿಶುದ್ಧನೇ. ಸಮಸ್ತ ಭೂಮಿಯ ದೇವರು ಎಂದು ಆತನನ್ನು ಕರೆಯಲಾಗುತ್ತದೆ.


ಆದರೆ ತೆರೆಗಳು ಬೋರ್ಗರೆಯುವಾಗ, ಸಮುದ್ರವನ್ನು ವಿಭಾಗಿಸಿದ ನಿನ್ನ ದೇವರಾಗಿರುವ ಯೆಹೋವ ದೇವರು ನಾನೇ, ಸೇನಾಧೀಶ್ವರ ಯೆಹೋವ ದೇವರು ಎಂಬುದು ಆತನ ಹೆಸರು.


ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸೊತ್ತನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು. ನೀನು ಅವರಿಗೆ ಕರುಣೆಯನ್ನು ತೋರಿಸದೆ, ವೃದ್ಧರ ಮೇಲೆಯೂ, ಬಹು ಭಾರವಾದ ನೊಗವನ್ನು ಹೊರಿಸಿದೆ.


ನಮ್ಮ ವಿಮೋಚಕರಿಗೆ ಸೇನಾಧೀಶ್ವರರಾದ ಯೆಹೋವ ದೇವರು ಎಂಬುದೇ ಅವರ ಹೆಸರು. ಅವರೇ ಇಸ್ರಾಯೇಲಿನ ಪರಿಶುದ್ಧರು.


ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ. ಹೌದು, ಕೇಡಿನ ದಿನಕ್ಕಾಗಿಯೂ ಕೆಡುಕರನ್ನು ಮಾಡಿದ್ದಾರೆ.


ಯೆಹೋವ ದೇವರೇ, ನಿಮಗೆ ಹೀಗೆಂದು ಮೊರೆಯಿಡುತ್ತೇನೆ: “ನೀವು ನನ್ನ ಆಶ್ರಯವೂ, ಜೀವಿತರ ದೇಶದಲ್ಲಿ ನನ್ನ ಪಾಲೂ ಆಗಿದ್ದೀರಿ.”


ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.


“ಭೂಮಿಯನ್ನು ಸೃಷ್ಟಿಮಾಡುವ ಯೆಹೋವ ದೇವರೂ ಅದನ್ನು ಸ್ಥಾಪಿಸುವುದಕ್ಕಾಗಿ ಅದನ್ನು ರೂಪಿಸಿದ ಯೆಹೋವನೆಂಬ ಹೆಸರುಳ್ಳವನೂ ಹೇಳುವುದೇನೆಂದರೆ,


ಬೆಟ್ಟಗಳನ್ನು ರೂಪಿಸಿ, ಗಾಳಿಯನ್ನು ನಿರ್ಮಿಸಿ, ಮನುಷ್ಯನಿಗೆ ಅವನ ಯೋಚನೆ ಏನೆಂದು ತಿಳಿಸಿ, ಉದಯವನ್ನು ಅಂಧಕಾರವನ್ನಾಗಿ ಮಾಡಿ, ಭೂಮಿಯ ಉನ್ನತ ಸ್ಥಳಗಳನ್ನು ತುಳಿದುಬಿಡುವಾತನು, ಸರ್ವಶಕ್ತರಾದ ಯೆಹೋವ ದೇವರು ಇದೇ ಅವರ ಹೆಸರು.


ಇದಲ್ಲದೆ ಯೆಹೋವ ದೇವರು ತಮ್ಮ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸೊತ್ತಾಗಿ ಹೊಂದುವರು. ಯೆರೂಸಲೇಮನ್ನು ತಿರುಗಿ ಆಯ್ದುಕೊಳ್ಳುವರು.


ಅವನು, ಕರ್ತನೇ, “ಈಗ ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರಕಿದರೆ, ನನ್ನ ಕರ್ತನೇ ತಾವೇ ನಮ್ಮ ಸಂಗಡ ಬರಬೇಕು. ಇದು ಮಾತು ಕೇಳದ ಹಟಮಾರಿ ಜನಾಂಗವೇ ಹೌದು. ಆದರೂ ನಮ್ಮ ದೋಷವನ್ನೂ ಪಾಪವನ್ನೂ ಮನ್ನಿಸಿ ನಮ್ಮನ್ನು ನಿಮ್ಮ ಸೊತ್ತಾಗಿ ತೆಗೆದುಕೊಳ್ಳಿ,” ಎಂದನು.


ಯೆಹೋವ ದೇವರ ವಾಕ್ಯದಿಂದ ಆಕಾಶವೂ, ಅವರ ಬಾಯಿಯ ಉಸಿರಿನಿಂದ ನಕ್ಷತ್ರ ಮಂಡಲವೂ ಉಂಟಾದವು.


ನನ್ನ ಪ್ರಜೆಯಾದ ಈಜಿಪ್ಟಿಗೂ, ನನ್ನ ಕೈಕೆಲಸವಾದ ಅಸ್ಸೀರಿಯಕ್ಕೂ ಮತ್ತು ನನ್ನ ಸೊತ್ತಾದ ಇಸ್ರಾಯೇಲಿಗೂ, “ನಿಮಗೆ ಆಶೀರ್ವಾದ,” ಎಂದು ಸೇನಾಧೀಶ್ವರ ಯೆಹೋವ ದೇವರು ಅವುಗಳನ್ನು ಆಶೀರ್ವಾದ ಮಾಡುವರು.


“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ, ‘ನನ್ನ ಜೀವದಾಣೆ,’ ಬೆಟ್ಟಗಳಲ್ಲಿ ತಾಬೋರಿನಂತೆಯೂ, ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯವಾಗಿ ಬರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು