Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:3 - ಕನ್ನಡ ಸಮಕಾಲಿಕ ಅನುವಾದ

3 ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ. ಹೇಗೆಂದರೆ, ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ. ಅದು ಕೊಡಲಿಯಿಂದ ಕಡಿದ ಬಡಿಗೆಯವನ ಕೈಕೆಲಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಜನಾಂಗಗಳ ಧಾರ್ಮಿಕ ಪದ್ಧತಿಗಳು ಶೂನ್ಯ. ಅರಣ್ಯದ ಮರಗಳನ್ನು ಅವರು ಕತ್ತರಿಸುತ್ತಾರೆ ಬಡಗಿಯ ಕೈಯಿಂದ, ಅವನ ಉಳಿಯಿಂದ, ಅದನ್ನು ರೂಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಬಾಚಿಯಿಂದ ರೂಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಬೇರೆ ಜನರ ಸಂಪ್ರದಾಯಗಳು ನಿಷ್ಪ್ರಯೋಜಕವಾದವುಗಳಾಗಿವೆ. ಅವರ ವಿಗ್ರಹಗಳು ಅರಣ್ಯದ ಮರವಲ್ಲದೆ ಮತ್ತೇನಲ್ಲ. ಅವರ ವಿಗ್ರಹಗಳು ಬಡಗಿಯು ಉಳಿಯಿಂದ ಮಾಡಲ್ಪಟ್ಟವುಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:3
17 ತಿಳಿವುಗಳ ಹೋಲಿಕೆ  

ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ನಿಮ್ಮ ಪೂರ್ವಿಕರಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿಹೋಗುವ ಬೆಳ್ಳಿ, ಬಂಗಾರದಿಂದಲ್ಲ.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ. ಅವರಿಗೆ ವ್ಯರ್ಥವಾದ ಮರ, ಬೊಂಬೆಗಳಿಂದ ಬೋಧನೆಯಾಗಿವೆ.


ಆದರೆ ನೀವು ಪ್ರಾರ್ಥನೆ ಮಾಡುವಾಗ ಯೆಹೂದ್ಯರಲ್ಲದವರಂತೆ ವ್ಯರ್ಥವಾಗಿ ಹೇಳಿದ್ದನ್ನೇ ಪದೇಪದೇ ಹೇಳಬೇಡಿರಿ. ತಮ್ಮ ಅನೇಕ ಮಾತುಗಳ ದೆಸೆಯಿಂದ ತಮ್ಮ ಪ್ರಾರ್ಥನೆಯನ್ನು ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


“ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸಮೀಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತುಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ, ವ್ಯರ್ಥವಾಗುವ ಹಾಗೆ ನನ್ನಲ್ಲಿ ಏನು ತಪ್ಪನ್ನು ಕಂಡಿದ್ದಾರೆ?


ಪೌಲನೆಂಬ ಈ ಮನುಷ್ಯನು ಎಫೆಸದಲ್ಲಿಯೂ ಇಡೀ ಏಷ್ಯಾ ಪ್ರಾಂತದಲ್ಲಿಯೂ ದೊಡ್ಡ ಸಂಖ್ಯೆಯಲ್ಲಿ ಜನರನ್ನು ಮನವೊಲಿಸಿ, ಕೈಯಿಂದ ಮಾಡಿದ ಮೂರ್ತಿಗಳು ದೇವರುಗಳಲ್ಲ ಎಂದು ಹೇಳಿ, ಅವರನ್ನು ಮಾರ್ಪಡಿಸಿಬಿಟ್ಟಿದ್ದಾನೆ ಎಂಬುದನ್ನು ನೀವು ಕೇಳಿದ್ದೀರಿ ಹಾಗೂ ಕಂಡಿದ್ದೀರಿ.


ಜನರ ವಿಗ್ರಹಗಳು ಬೆಳ್ಳಿ, ಬಂಗಾರದವುಗಳು, ಅವು ಮನುಷ್ಯರ ಕೈಯಿಂದ ಮಾಡಲಾಗಿವೆ.


ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯುವೆನು.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು