ಯೆರೆಮೀಯ 10:6 - ಕನ್ನಡ ಸಮಕಾಲಿಕ ಅನುವಾದ6 ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಹೇ ಸರ್ವೇಶ್ವರಾ, ನಿಮಗೆ ಸಮಾನನು ಇಲ್ಲ, ನೀವು ಮಹೋತ್ತಮರು ಸಾಮರ್ಥ್ಯದಿಂದ ಕೂಡಿರುವ ನಿಮ್ಮ ನಾಮವೂ ಮಹತ್ತರವಾದುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಯೆಹೋವನೇ, ನಿನ್ನ ಸಮಾನನು ಯಾವನೂ ಇಲ್ಲ; ನೀನು ಮಹತ್ತಮನು, ನಿನ್ನ ನಾಮವೂ ಸಾಮರ್ಥ್ಯದಿಂದ ಕೂಡಿ ಮಹತ್ತಮವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಯೆಹೋವನೇ, ನಿನ್ನತೆ ಯಾರೂ ಇಲ್ಲ. ನೀನೇ ಮಹೋನ್ನತನು. ನಿನ್ನ ಹೆಸರು ಮಹೋನ್ನತವಾದದ್ದು; ಸಾಮರ್ಥ್ಯಪೂರ್ಣವಾದದ್ದು. ಅಧ್ಯಾಯವನ್ನು ನೋಡಿ |
“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.