Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:7 - ಕನ್ನಡ ಸಮಕಾಲಿಕ ಅನುವಾದ

7 ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:7
28 ತಿಳಿವುಗಳ ಹೋಲಿಕೆ  

ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರು? ಏಕೆಂದರೆ ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ಕೃತ್ಯಗಳು ಪ್ರಕಟವಾದ್ದರಿಂದ ಎಲ್ಲಾ ರಾಷ್ಟ್ರಗಳವರು ಬಂದು, ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು,” ಎಂದು ಹೇಳಿದರು.


ಏಕೆಂದರೆ ರಾಜ್ಯವು ಯೆಹೋವ ದೇವರದೇ; ಜನಾಂಗಗಳನ್ನು ಆಳುವವರು ಅವರೇ.


ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ. ನೀವು ಮಹೋತ್ತಮರು, ನಿಮ್ಮ ಹೆಸರು ಪರಾಕ್ರಮದಲ್ಲಿ ಮಹತ್ತರವಾದದ್ದು.


ನೀವು ನನಗೆ ಭಯಪಡುವುದಿಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ನನ್ನ ಸಮ್ಮುಖದಲ್ಲಿ ನಡುಗುವುದಿಲ್ಲವೋ? ನಾನು ಮರಳನ್ನು ನಿತ್ಯ ನೇಮವಾಗಿ ಸಮುದ್ರಕ್ಕೆ, ಅದು ದಾಟಕೂಡದ ಹಾಗೆ ಮೇರೆಯಾಗಿಟ್ಟಿದ್ದೇನೆ. ಅದರ ತೆರೆಗಳು ಎದ್ದರೂ ದಡ ಮೀರಲಾರವು; ಘೋಷಿಸಿದರೂ ಅದನ್ನು ದಾಟಲಾರವು.


ಪ್ರಪಂಚದಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು? ಪರಲೋಕ ಜೀವಿಗಳಲ್ಲಿ ಯೆಹೋವ ದೇವರಿಗೆ ಸಮಾನನಾದವನು ಯಾರು?


ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


“ಆ ದಿವಸದಲ್ಲಿ ಅನೇಕ ಜನಾಂಗಗಳು ಯೆಹೋವ ದೇವರನ್ನು ಅಂಟಿಕೊಂಡು ನನ್ನ ಜನರಾಗುವರು, ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು. ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾರೆಂದು ತಿಳಿದುಕೊಳ್ಳುವೆ.


ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಯೆಹೋವ ದೇವರೇ, ನೀವು ಉಂಟುಮಾಡಿದ ಜನಾಂಗದವರೆಲ್ಲರೂ ಬಂದು ನಿಮ್ಮ ಮುಂದೆ ಅಡ್ಡಬಿದ್ದು, ನಿಮ್ಮ ಹೆಸರಿಗೆ ಮಹಿಮೆ ಸಲ್ಲಿಸುವರು.


ನೀವು ಭಯಭಕ್ತಿಗೆ ಪಾತ್ರರು, ನೀವು ಒಂದು ಸಾರಿ ಬೇಸರಗೊಂಡರೆ, ನಿಮ್ಮ ಮುಂದೆ ನಿಲ್ಲುವವನ್ಯಾರು?


ಹೌದು, ಎಲ್ಲಾ ಅರಸರು ನಮ್ಮ ಅರಸನ ಮುಂದೆ ಅಡ್ಡಬೀಳಲಿ. ಎಲ್ಲಾ ಜನಾಂಗಗಳು ಅರಸನಿಗೆ ಸೇವೆಸಲ್ಲಿಸಲಿ.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಫರೋಹನು ಮೋಶೆಗೆ, “ನಾಳೆ,” ಎಂದನು. ಆಗ ಮೋಶೆಯು, “ನಮ್ಮ ದೇವರಾಗಿರುವ ಯೆಹೋವ ದೇವರ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ನಿನ್ನ ಮಾತಿನ ಪ್ರಕಾರ ಆಗಲಿ.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ಭೂಮಿಯ ಜನರೆಲ್ಲಾ ಯೆಹೋವ ದೇವರ ಹಸ್ತವು ಬಲವುಳ್ಳದ್ದೆಂದು ತಿಳಿಯುವಂತೆಯೂ ನೀವು ನಿರಂತರವೂ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಡುವಂತೆಯೂ ದೇವರಾದ ಯೆಹೋವ ದೇವರು ಹೀಗೆ ಮಾಡಿದರು,’ ಎಂದು ನೀವು ಹೇಳಬೇಕು,” ಎಂದನು.


ಆಗ ನೀತಿ ನ್ಯಾಯಗಳನ್ನು ತಿಳಿದ ಪಂಡಿತರೆಲ್ಲರೊಂದಿಗೆ ಅರಮನೆಯ ಸಂಗತಿಗಳನ್ನು ಆಲೋಚಿಸುವುದು ಅರಸನ ಪದ್ಧತಿಯಾಗಿತ್ತು. ಆದುದರಿಂದ ಅರಸನು ಕಾಲಜ್ಞಾನಿಗಳ ಸಂಗಡ ಈ ವಿಷಯವಾಗಿ ವಿಚಾರಿಸಿದನು.


ದಾನಿಯೇಲನು ಅರಸನ ಸನ್ನಿಧಿಯಲ್ಲಿ ಉತ್ತರವಾಗಿ, “ಅರಸನು ಕೇಳುವ ರಹಸ್ಯವನ್ನು ಜ್ಞಾನಿಗಳೂ, ಜ್ಯೋತಿಷ್ಯರೂ, ಮಂತ್ರಗಾರರೂ, ಶಕುನ ಹೇಳುವವರೂ ಅರಸನಿಗೆ ತಿಳಿಸಲಾರರು.


ಆದರೆ ಈ ರಹಸ್ಯಗಳನ್ನು ಪ್ರಕಟಪಡಿಸುವಂತಹ ದೇವರು ಪರಲೋಕದಲ್ಲಿ ಇದ್ದಾರೆ. ಅವರು ಮುಂಬರುವ ದಿವಸಗಳಲ್ಲಿ ಸಂಭವಿಸುವಂಥವುಗಳನ್ನು ಅರಸನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸುತ್ತಾರೆ. ನಿನ್ನ ಕನಸಿನಲ್ಲಿ ನಿನ್ನ ಹಾಸಿಗೆಯಲ್ಲಿ ನೀನು ಮಲಗಿದಾಗ, ನಿನ್ನ ಮನಸ್ಸಿನಲ್ಲಿ ಹಾದುಹೋದ ದರ್ಶನಗಳು ಇವೇ ಆಗಿವೆ.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಭಯಪಡಿರಿ. ಆಗ ಅವರು ನಿಮ್ಮನ್ನು ನಿಮ್ಮ ಶತ್ರುಗಳ ಕೈಯೊಳಗಿಂದ ವಿಮೋಚನೆ ಮಾಡುವರು,” ಎಂದು ಹೇಳಿದ್ದರು.


ಯೆಹೋವ ದೇವರು ಮಹೋನ್ನತರಾಗಿದ್ದಾರೆ, ಬಹು ಸ್ತುತಿಗೆ ಪಾತ್ರರೂ ಆಗಿದ್ದಾರೆ; ಅವರು ಎಲ್ಲಾ ದೇವರುಗಳಿಗಿಂತ ಬಹುಭಯಭಕ್ತಿಗೆ ಪಾತ್ರರಾಗಿದ್ದಾರೆ.


ಜನರನ್ನು ನಮ್ಮ ಕೆಳಗೆ ತಂದಿದ್ದಾರೆ. ಜನಾಂಗಗಳನ್ನು ನಮಗೆ ಅಧೀನಮಾಡಿದ್ದಾರೆ.


ಯೆಹೋವ ದೇವರೇ, ದೇವರುಗಳಲ್ಲಿ ನಿಮ್ಮ ಹಾಗೆ ಯಾರೂ ಇಲ್ಲ. ನಿಮ್ಮ ಕೆಲಸಗಳ ಹಾಗೆ ಒಂದೂ ಇಲ್ಲ.


ನಮ್ಮ ಯೆಹೋವ ದೇವರು ದೊಡ್ಡವರು, ಬಹು ಶಕ್ತರು; ಅವರ ವಿವೇಕಕ್ಕೆ ಎಣೆಯಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು