ಯೆರೆಮೀಯ 10:9 - ಕನ್ನಡ ಸಮಕಾಲಿಕ ಅನುವಾದ9 ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ, ಬಂಗಾರವನ್ನು ಊಫಜಿನಿಂದ ತರುತ್ತಾರೆ. ಅದು ಕೆತ್ತನೆಯವನ ಕೆಲಸವು ಮತ್ತು ಎರಕ ಹೊಯ್ಯುವವನ ಕೈಯಿಂದ ಉಂಟಾದವುಗಳೂ ಆಗಿವೆ. ನೀಲಿಯೂ ಧೂಮ್ರ ವರ್ಣವೂ ಅವುಗಳ ವಸ್ತ್ರವಾಗಿದೆ. ಅವುಗಳೆಲ್ಲಾ ಕೌಶಲ್ಯಗಾರರ ಕೈಕೆಲಸವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಬೊಂಬೆಗಳ ಭೂಷಣಕ್ಕಾಗಿ ಸಾಗಿಬರುತ್ತವೆ ತಾರ್ಷೀಷಿನಿಂದ ಬೆಳ್ಳೀತಗಡುಗಳು, ಊಫಜಿನಿಂದ ಚಿನ್ನ. ಅವು ಕೆತ್ತನೆಗಾರನ, ಎರಕದವನ ಕೈಕೆಲಸಗಳು ಅವುಗಳ ಉಡುಪು ನೀಲಧೂಮ್ರ ವರ್ಣದ ವಸ್ತ್ರಗಳು. ಇವೆಲ್ಲವು ಕೇವಲ ಕಲಾಕುಶಲರ ಕೌಶಲ್ಯಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವು ಊಫಜಿನಿಂದಲೂ ಸಾಗಿಬರುತ್ತವೆ; ನೀಲಧೂಮ್ರವಸ್ತ್ರಗಳು ಅವುಗಳ ಉಡುಪಾಗಿವೆ; ಇವೆಲ್ಲಾ ಕುಶಲರ ಕೌಶಲ್ಯ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅವರು ತಾರ್ಷೀಷ್ ನಗರದ ಬೆಳ್ಳಿಯಿಂದಲೂ ಧಿಫಜ್ ನಗರದ ಬಂಗಾರದಿಂದಲೂ ತಮ್ಮ ವಿಗ್ರಹಗಳನ್ನು ಮಾಡುತ್ತಾರೆ. ಆ ವಿಗ್ರಹಗಳನ್ನು ಬಡಗಿಗಳು, ಕಮ್ಮಾರರು ಮತ್ತು ಅಕ್ಕಸಾಲಿಗರು ಮಾಡುತ್ತಾರೆ; ಅವರು ನೀಲಿ ಮತ್ತು ಕಂದು ಬಣ್ಣದ ಬಟ್ಟೆಗಳನ್ನು ಆ ವಿಗ್ರಹಗಳಿಗೆ ತೊಡಿಸುತ್ತಾರೆ. ಅವು ಕುಶಲರ ಕೌಶಲ್ಯವಾಗಿವೆ. ಅಧ್ಯಾಯವನ್ನು ನೋಡಿ |