Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:13 - ಕನ್ನಡ ಸಮಕಾಲಿಕ ಅನುವಾದ

13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:13
24 ತಿಳಿವುಗಳ ಹೋಲಿಕೆ  

ಆದರೆ ನೀನು ನಿನಗೋಸ್ಕರ ಮಾಡಿಕೊಂಡ ನಿನ್ನ ದೇವರುಗಳು ಎಲ್ಲಿ? ನಿನ್ನ ಕಷ್ಟಕಾಲದಲ್ಲಿ ನಿನ್ನನ್ನು ರಕ್ಷಿಸಲು ಸಾಧ್ಯವಾದರೆ ಅವರೇ ಏಳಲಿ, ಓ ಯೆಹೂದವೇ, ನಿನ್ನ ಪಟ್ಟಣಗಳ ಲೆಕ್ಕದ ಹಾಗೆ ನಿನ್ನ ದೇವರುಗಳು ಇದ್ದಾರೆ.


ಇದಲ್ಲದೆ ಯೆರೂಸಲೇಮಿನ ಮುಂದೆ ವಿಘ್ನ ಬೆಟ್ಟದ ದಕ್ಷಿಣದಲ್ಲಿದ್ದ ಸೀದೋನ್ಯರ ಅಸಹ್ಯಕರವಾದ ಅಷ್ಟೋರೆತಿಗೂ, ಮೋವಾಬ್ಯರ ಅಸಹ್ಯಕರವಾದ ಕೆಮೋಷನಿಗೂ, ಅಮ್ಮೋನ್ಯರ ಅಸಹ್ಯಕರವಾದ ಮಿಲ್ಕೋಮನಿಗೂ ಇಸ್ರಾಯೇಲಿನ ಅರಸನಾದ ಸೊಲೊಮೋನನು ಕಟ್ಟಿಸಿದ ಉನ್ನತ ಪೂಜಾಸ್ಥಳಗಳನ್ನೂ ಯೋಷೀಯನು ಅಶುದ್ಧ ಮಾಡಿದನು.


ಗಿಲ್ಯಾದಿನಲ್ಲಿ ದುಷ್ಟತನ ಇದೆಯೋ? ಅಲ್ಲಿನ ಜನರು ಅಯೋಗ್ಯರೇ? ಅವರು ಗಿಲ್ಗಾಲಿನಲ್ಲಿ ಹೋರಿಗಳನ್ನು ಅರ್ಪಿಸುತ್ತಾರೆಯೇ? ಅವರ ಬಲಿಪೀಠಗಳು ಹೊಲದ ಸಾಲುಗಳಲ್ಲಿರುವ ಕಲ್ಲು ಕುಪ್ಪೆಯ ಹಾಗಿವೆ, ಎಂದು ಹೇಳಿದನು.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಮೋಲೆಕ್ ದೇವತೆಗೆ ಆಹುತಿ ಕೊಡುವುದಕ್ಕಾಗಿ ಬೆನ್ ಹಿನ್ನೋಮ್ ತಗ್ಗಿನಲ್ಲಿ ಬಾಳ್ ದೇವತೆಗೆ ಪೂಜಾಸ್ಥಳಗಳನ್ನು ಕಟ್ಟಿಸಿದ್ದಾರೆ. ಹೀಗೆ ಯೆಹೂದ ಕುಲವನ್ನೇ ಪಾಪಕ್ಕೆ ಸಿಕ್ಕಿಸಿದ್ದಾರೆ. ನಾನು ಇಂಥ ಅಸಹ್ಯ ಕಾರ್ಯವನ್ನು ವಿಧಿಸಲಿಲ್ಲ. ಅದರ ಯೋಚನೆ ಕೂಡ ನನ್ನ ಮನಸ್ಸಿನಲ್ಲಿ ಸುಳಿಯಲಿಲ್ಲ.


ತಮ್ಮ ಮಕ್ಕಳನ್ನು ಬಾಳನಿಗೆ ದಹನಬಲಿಗಳಾಗಿ ಬೆಂಕಿಯಲ್ಲಿ ಸುಡುವುದಕ್ಕೆ ಬಾಳನ ಉನ್ನತ ಪೂಜಾಸ್ಥಳಗಳನ್ನು ಕಟ್ಟಿದ್ದಾರೆ. ಇಂಥಾದ್ದನ್ನು ನಾನು ಆಜ್ಞಾಪಿಸಲಿಲ್ಲ. ನಾನು ಹೇಳಲಿಲ್ಲ, ನನ್ನ ಮನಸ್ಸಿಗೆ ಬರಲಿಲ್ಲ.


“ ‘ಕಳ್ಳತನ, ಹತ್ಯೆ, ವ್ಯಭಿಚಾರಗಳನ್ನು ನೀವು ನಡೆಸುವಿರೋ? ಸುಳ್ಳು ಪ್ರಮಾಣವನ್ನು ಮಾಡಿ, ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರುಗಳನ್ನು ಹಿಂಬಾಲಿಸಿ,


ನಾಚಿಕೆಯಾದದ್ದು, ನಮ್ಮ ಚಿಕ್ಕತನದಿಂದ ನಮ್ಮ ತಂದೆಗಳ ಕಷ್ಟವನ್ನೂ, ಅವರ ಕುರಿಗಳನ್ನೂ, ಅವರ ದನಗಳನ್ನೂ, ಅವರ ಪುತ್ರರನ್ನೂ, ಅವರ ಪುತ್ರಿಯರನ್ನೂ ತಿಂದುಬಿಟ್ಟಿದೆ.


ಅವರ ದೇಶವು ವಿಗ್ರಹಗಳಿಂದ ತುಂಬಿದೆ. ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನು ಆರಾಧಿಸುವರು.


ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ.


ಏಕೆಂದರೆ ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಅಶುದ್ಧಮಾಡಿ; ಅವರೂ, ಅವರ ತಂದೆಗಳೂ, ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪ ಸುಟ್ಟು, ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತದಿಂದ ತುಂಬಿಸಿ,


“ನೀವೂ, ನಿಮ್ಮ ಪಿತೃಗಳೂ, ನಿಮ್ಮ ಅರಸರೂ, ನಿಮ್ಮ ಪ್ರಧಾನರೂ, ದೇಶದ ಜನರೂ ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಸುಟ್ಟ ಧೂಪವನ್ನೇ, ಯೆಹೋವ ದೇವರು ಜ್ಞಾಪಕ ಮಾಡಿಕೊಂಡಿದ್ದು ಅಲ್ಲವೋ?


ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ, ತನ್ನ ದೇವರುಗಳಿಗೆ ಧೂಪಸುಡುವವನನ್ನೂ ಮೋವಾಬಿನಲ್ಲಿ ನಿಲ್ಲಿಸಿಬಿಡುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವು ನಿಮಗಾಗಿ ಒಂದು ದಿಬ್ಬವನ್ನು ನಿರ್ಮಿಸಿದ್ದೀರಿ ಮತ್ತು ಪ್ರತಿ ಸಾರ್ವಜನಿಕ ಚೌಕದಲ್ಲಿ ಎತ್ತರದ ದೇವಾಲಯವನ್ನು ನಿರ್ಮಿಸಿದ್ದೀರಿ.


“ನಾನು ಮರುಭೂಮಿಯಲ್ಲಿ ದ್ರಾಕ್ಷಾಫಲದ ಹಾಗೆ ಇಸ್ರಾಯೇಲನ್ನು ಕಂಡುಕೊಂಡೆನು. ಅಂಜೂರದ ಗಿಡದಲ್ಲಿ ಮೊದಲು ಮಾಗಿದ ಹಣ್ಣನ್ನು ಕಂಡ ಹಾಗೆ ನಿಮ್ಮ ಪಿತೃಗಳನ್ನು ನೋಡಿದೆನು. ಆದರೆ ಅವರು ಬಾಳ್ ಪೆಯೋರನ ಹತ್ತಿರ ಬಂದು ನಾಚಿಕೆಯ ವಿಗ್ರಹಕ್ಕೆ ತಮ್ಮನ್ನು ಪ್ರತ್ಯೇಕಿಸಿಕೊಂಡರು. ಅವರು ಪ್ರೀತಿಸಿದ ವಿಗ್ರಹಗಳ ಹಾಗೆ ಅಸಹ್ಯರಾದರು.


ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.


ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


“ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ, ವಜ್ರದ ಮೊನೆಯಿಂದಲೂ ಬರೆಯಲಾಗಿದೆ. ಅದು ಅವರ ಹೃದಯದ ಹಲಗೆಯ ಮೇಲೆಯೂ ಅವರ ಬಲಿಪೀಠಗಳ ಕೊಂಬುಗಳ ಮೇಲೆಯೂ ಕೆತ್ತಲಾಗಿದೆ.


ನನ್ನ ಜನರಾದರೋ ನನ್ನನ್ನು ಮರೆತುಬಿಟ್ಟಿದ್ದಾರೆ. ವ್ಯರ್ಥವಾದ ವಿಗ್ರಹಗಳಿಗೆ ಧೂಪವನ್ನರ್ಪಿಸಿದ್ದಾರೆ. ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರನ್ನು ಎಡವುವಂತೆ ಮಾಡಿ, ಮಾರ್ಗವಲ್ಲದ ಕಾಲು ದಾರಿಗಳಲ್ಲಿ ಅವರನ್ನು ನಡೆಯುವಂತೆ ಮಾಡಿವೆ.


ಆದರೆ ತಮ್ಮ ಕೆಟ್ಟತನದಿಂದ ತಿರುಗದೆ, ಬೇರೆ ದೇವರುಗಳಿಗೆ ಧೂಪಸುಡುವುದನ್ನು ಬಿಡದೆ ಕೇಳಲಿಲ್ಲ, ನೀವು ಕಿವಿಗೊಡಲಿಲ್ಲ.


ಇಸ್ರಾಯೇಲು ಹರಡುವ ದ್ರಾಕ್ಷಿಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿಸುತ್ತಾನೆ. ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಅಭಿವೃದ್ಧಿಯ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು