Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:15 - ಕನ್ನಡ ಸಮಕಾಲಿಕ ಅನುವಾದ

15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸಿಯಾವೇ? ಇಂಥವುಗಳ ಮೂಲಕ ತಪ್ಪಿಸಿಕೊಂಡೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:15
29 ತಿಳಿವುಗಳ ಹೋಲಿಕೆ  

ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ. ಕೇಡಿನ ವಕ್ರತನದಲ್ಲಿ ಆನಂದಿಸುತ್ತಾರೆ.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ಆದರೆ ನೀವು ನಿಮ್ಮ ಹೊಗಳಿಕೆಯ ಯೋಜನೆಗಳಲ್ಲಿ ಹೆಮ್ಮೆಪಡುತ್ತೀರಿ. ಅಂಥಾ ಅಹಂಭಾವವೆಲ್ಲಾ ಕೆಟ್ಟದ್ದೆ.


ಪ್ರೀತಿ ಕೆಟ್ಟದ್ದರಲ್ಲಿ ಸಂತೋಷಪಡುವುದಿಲ್ಲ, ಸತ್ಯದೊಂದಿಗೆ ಸಂತೋಷ ಪಡುತ್ತದೆ.


ಸುವಾರ್ತೆಯ ಪ್ರಕಾರ ಇಸ್ರಾಯೇಲರು ಈಗ ನಿಮ್ಮ ನಿಮಿತ್ತ ಶತ್ರುಗಳು. ಆದರೆ ದೇವರ ಆಯ್ಕೆಯ ದೃಷ್ಟಿಯಲ್ಲಿ ನೋಡುವಾಗ ಮೂಲಪಿತೃಗಳ ನಿಮಿತ್ತದಿಂದ ಅವರು ಪ್ರೀತಿಹೊಂದಿದವರು.


ಅವನು ಯೇಸುವನ್ನು ಕಂಡಾಗ, ಅವರ ಮುಂದೆ ಅಡ್ಡಬಿದ್ದು, “ಯೇಸುವೇ, ಮಹೋನ್ನತ ದೇವಪುತ್ರರೇ, ನನ್ನ ಗೊಡವೆ ನಿಮಗೆ ಏಕೆ? ನನ್ನನ್ನು ಪೀಡಿಸಬೇಡಿ, ನಿಮ್ಮನ್ನು ಬೇಡಿಕೊಳ್ಳುತ್ತೇನೆ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿ ಹೇಳಿದನು.


“ಅನಂತರ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದಾಗ, ಅಲ್ಲಿ ಮದುವೆಯ ವಸ್ತ್ರವಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಕಂಡನು.


ತರುವಾಯ ಯೆಹೋವ ದೇವರು ನನಗೆ, “ಬೇರೆ ದೇವತೆಗಳ ಕಡೆಗೆ ತಿರುಗಿಕೊಂಡು, ದ್ರಾಕ್ಷಿ ಉಂಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವ ದೇವರು ಪ್ರೀತಿಸುವ ಪ್ರಕಾರ, ನೀನು ಹೋಗಿ ನಿನ್ನ ಹೆಂಡತಿ ವ್ಯಭಿಚಾರಿಣಿಯಾಗಿದ್ದರೂ ಆಕೆಯನ್ನು ಪುನಃ ಪ್ರೀತಿಸು,” ಎಂದು ಹೇಳಿದನು.


ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.


“ನನ್ನ ಮನೆಯನ್ನು ಬಿಟ್ಟಿದ್ದೇನೆ, ನನ್ನ ಸೊತ್ತನ್ನು ತ್ಯಜಿಸಿದ್ದೇನೆ. ನನ್ನ ಪ್ರಾಣಕ್ಕೆ ಅತಿ ಪ್ರಿಯವಾದವಳನ್ನು ಅವಳ ಶತ್ರುಗಳ ಕೈಯಲ್ಲಿ ಒಪ್ಪಿಸಿದ್ದೇನೆ.


“ಓ ಭ್ರಷ್ಟರಾದ ಜನರೇ, ತಿರುಗಿಕೊಳ್ಳಿರಿ,” ಎಂದು ಯೆಹೋವ ದೇವರು ನುಡಿಯುತ್ತಾರೆ. “ಏಕೆಂದರೆ, ನಾನು ನಿಮಗೆ ಪತಿ. ಪಟ್ಟಣದೊಳಗಿಂದ ಒಬ್ಬನನ್ನು, ಗೋತ್ರದೊಳಗಿಂದ ಇಬ್ಬರನ್ನು ತೆಗೆದುಕೊಂಡು, ಚೀಯೋನಿಗೆ ಕರೆದುಕೊಂಡು ಬರುವೆನು.


ಆಗ ನಾನು ಕಂಡದ್ದೇನೆಂದರೆ, ಭ್ರಷ್ಟಳಾದ ಇಸ್ರಾಯೇಲು ವ್ಯಭಿಚಾರ ಮಾಡಿದ ಎಲ್ಲಾ ಕಾರಣಗಳ ನಿಮಿತ್ತ ನಾನು ಅವಳನ್ನು ಬಿಟ್ಟುಬಿಟ್ಟು, ತ್ಯಾಗ ಪತ್ರವನ್ನು ಕೊಟ್ಟಿದ್ದಾಗ್ಯೂ ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಭಯಪಡದೆ, ತಾನು ಕೂಡ ಹೋಗಿ ವೇಶ್ಯೆತನ ಮಾಡಿದಳು.


“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು: “ಯೆಹೋವ ದೇವರು ಹೀಗೆನ್ನುತ್ತಾರೆ, “ ‘ನೀನು ಯೌವನದಲ್ಲಿ ನನ್ನ ಮೇಲಿಟ್ಟಿದ್ದ ಪ್ರೀತಿಯನ್ನು, ನವವಧುವಾಗಿ ನನಗೆ ತೋರಿಸಿದ ಪ್ರೇಮವನ್ನು, ಹಾಗು ಬಿತ್ತನೆ ಇಲ್ಲದ ಅರಣ್ಯ ಮಾರ್ಗವಾಗಿ ನನ್ನನ್ನು ಹಿಂಬಾಲಿಸಿದಾಗ ಅನುಸರಿಸುತ್ತಿದ್ದ ನಿನ್ನ ಪಾತಿವ್ರತ್ಯವನ್ನು ನನ್ನ ನೆನಪಿನಲ್ಲಿ ಇಟ್ಟುಕೊಂಡಿದ್ದೇನೆ, ಇದು ನಿನ್ನ ಹಿತಕ್ಕಾಗಿಯೇ.


ಯೆಹೋವ ದೇವರು ಹೇಳುವುದೇನೆಂದರೆ, “ನಾನು ಬಿಟ್ಟುಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೆನು? ನಿಮ್ಮ ಪಾಪಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ. ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.


ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ ಪ್ರಾರ್ಥನೆಯು ದೇವರಿಗೆ ಅಸಹ್ಯ.


ತನ್ನ ನೆರೆಯವನನ್ನು ಮೋಸಗೊಳಿಸಿ, “ಇದು ತಮಾಷೆಗೋಸ್ಕರ ಮಾಡುತ್ತೇನೆ,” ಎಂದು ಹೇಳುವವನು, ಕೊಳ್ಳಿಗಳನ್ನೂ, ಬಾಣಗಳನ್ನೂ, ಸಾವನ್ನೂ ಬೀರುವ ಹುಚ್ಚನಂತೆಯೇ.


ದುಷ್ಟರ ಯಜ್ಞವು ಅಸಹ್ಯ; ಅದನ್ನು ದುರ್ಬುದ್ಧಿಯಿಂದ ಅರ್ಪಿಸಿದರೆ, ಇನ್ನೂ ಎಷ್ಟೋ ಅಸಹ್ಯಕರ.


ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ. ಆದರೆ ಯಥಾರ್ಥವಂತರ ಪ್ರಾರ್ಥನೆಯು ಅವರಿಗೆ ಮೆಚ್ಚುಗೆ.


ಮೂರ್ಖನಿಗೆ ಕೇಡು ಮಾಡುವುದರಲ್ಲಿ ಆನಂದ; ಆದರೆ ತಿಳುವಳಿಕೆಯ ವ್ಯಕ್ತಿಯು ಜ್ಞಾನದಲ್ಲಿ ಸಂತೋಷಪಡುತ್ತಾನೆ.


ಆದರೆ ದುಷ್ಟನಿಗೆ ದೇವರು ಹೇಳುವುದೇನೆಂದರೆ: “ನನ್ನ ನಿಯಮಗಳನ್ನು ಪಠಿಸುವುದಕ್ಕೆ ಹಕ್ಕು ನಿಮಗೆ ಏನಿದೆ? ಇಲ್ಲವೆ ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಛರಿಸುವುದೇಕೆ?


ನೀವು ಪ್ರೀತಿಸುವವರು ಬಿಡುಗಡೆಯಾಗುವಂತೆ ನಿಮ್ಮ ಬಲಗೈಯಿಂದ ರಕ್ಷಿಸಿ ನಮಗೆ ಸಹಾಯಮಾಡಿರಿ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”


“ಪ್ರವಾದಿಯೂ ಯಾಜಕನೂ ಕೂಡ ಭ್ರಷ್ಟರೇ. ಹೌದು, ನನ್ನ ಆಲಯದಲ್ಲಿ ಅವರ ಕೆಟ್ಟತನವನ್ನು ಕಂಡಿದ್ದೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು