Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:5 - ಕನ್ನಡ ಸಮಕಾಲಿಕ ಅನುವಾದ

5 ಹಾಲು ಜೇನು ಹರಿಯುವ ನಾಡನ್ನು, ಎಂದರೆ ಇಂದು ನೀವಿರುವ ನಾಡನ್ನು ಕೊಡುವುದಾಗಿ ನಿಮ್ಮ ಮೂಲ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು,’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವ ಮಾತು.” “ಓ ಯೆಹೋವ ದೇವರೇ, ಹಾಗೆಯೇ ಆಗಲಿ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಾನು ಹಾಲೂ ಮತ್ತು ಜೇನೂ ಹರಿಯುವ ದೇಶವನ್ನು ನಿಮಗೆ ಕೊಡುವುದಾಗಿ ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದೆನಷ್ಟೆ. ಆ ನನ್ನ ಮಾತು ಈಗ ಕೈಗೂಡಿದೆ” ಎಂದು ಸಾರಬೇಕು ಎಂದನು. ಆಗ ನಾನು, “ಅಪ್ಪಣೆಯಂತಾಗಲಿ, ಯೆಹೋವನೇ” ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹಾಲೂ ಜೇನೂ ಹರಿಯುವ ನಾಡನ್ನು, ಅಂದರೆ ಇಂದು ನೀವಿರುವ ನಾಡನ್ನು, ಕೊಡುವುದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು’ ಎಂದು ಹೇಳಿದ್ದೆ. ಈ ಒಡಂಬಡಿಕೆಯ ವಚನಗಳಿಗೆ ಕಿವಿಗೊಡದವನು ಶಾಪಗ್ರಸ್ತನು. ಇದು ಇಸ್ರಯೇಲಿನ ದೇವರಾದ ಸರ್ವೇಶ್ವರ ಹೇಳುವ ಮಾತು.” ಆಗ ನಾನು, “ತಮ್ಮ ಅಪ್ಪಣೆಯಂತಾಗಲಿ, ಸರ್ವೇಶ್ವರಾ,” ಎಂದು ಉತ್ತರಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ನಾನು ನಿಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಲು ನಾನು ಇದೆಲ್ಲವನ್ನು ಮಾಡಿದೆ. ನಾನು ಅವರಿಗೆ ಫಲವತ್ತಾದ ಭೂಮಿಯನ್ನೂ ಹಾಲು ಮತ್ತು ಜೇನು ಹರಿಯುವ ಪ್ರದೇಶವನ್ನೂ ಕೊಡುವ ವಾಗ್ದಾನ ಮಾಡಿದ್ದೆ. ನೀವು ಈಗ ಈ ಪ್ರದೇಶದಲ್ಲಿ ವಾಸಮಾಡುತ್ತಿದ್ದೀರಿ.” ನಾನು, “ಯೆಹೋವನೇ ನಿನ್ನ ಅಪ್ಪಣೆಯಂತಾಗಲಿ” ಎಂದು ಉತ್ತರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:5
16 ತಿಳಿವುಗಳ ಹೋಲಿಕೆ  

“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.


ನೀನು ಆತ್ಮದಲ್ಲಿ ಮಾತ್ರ ಸ್ತೋತ್ರ ಮಾಡಿದರೆ, ತಿಳುವಳಿಕೆ ಇಲ್ಲದೆ ಕುಳಿತಿರುವವನು ನಿನ್ನ ಕೃತಜ್ಞತಾಸ್ತುತಿಗೆ, “ಆಮೆನ್” ಎಂದು ಹೇಳುವುದು ಹೇಗೆ?


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಹೀಗಿರುವುದರಿಂದ ಓ ಇಸ್ರಾಯೇಲರೇ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ವಾಗ್ದಾನ ಮಾಡಿದ ಪ್ರಕಾರ ಹಾಲೂ ಜೇನೂ ಹರಿಯುವ ದೇಶದಲ್ಲಿ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಬಹಳವಾಗಿ ಹೆಚ್ಚುವ ಹಾಗೆಯೂ ಲಕ್ಷ್ಯವಿಟ್ಟು ಕೇಳಿ ವಿಧೇಯರಾಗಿರಿ.


ಆದರೆ, “ನೀವು ಅವರ ದೇಶವನ್ನು ಸ್ವಾಧೀನಪಡಿಸಿಕೊಳ್ಳುವಿರಿ. ಹಾಲೂ ಜೇನೂ ಹರಿಯುವ ಆ ದೇಶವನ್ನು ನೀವು ಸ್ವಾಧೀನಪಡಿಸಿಕೊಳ್ಳುವಂತೆ ನಾನು ಅದನ್ನು ನಿಮಗೆ ಕೊಡುತ್ತೇನೆ.” ನಿಮ್ಮನ್ನು ಬೇರೆ ಜನರಿಂದ ಪ್ರತ್ಯೇಕಪಡಿಸಿದಂಥ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು.


ಅವರ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶವಾದ ಈ ದೇಶವನ್ನು ಅವರಿಗೆ ಕೊಟ್ಟಿದ್ದೀರಿ.


ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನಿಮ್ಮ ಸೇವಕನಾದ ದಾವೀದನಿಗೆ ಹೇಳಿದ ವಾಕ್ಯವು ನೆರವೇರಲಿ.


ದೇವರು ತಮ್ಮ ಒಡಂಬಡಿಕೆಯನ್ನೂ, ಸಾವಿರ ತಲಾಂತರಗಳಿಗೆ ಆಜ್ಞಾಪಿಸಿದ ತಮ್ಮ ಮಾತನ್ನೂ,


ಹೀಗೆ ಈ ಸ್ಥಳಕ್ಕೂ, ಅದರ ನಿವಾಸಿಗಳಿಗೂ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ಈ ಪಟ್ಟಣವನ್ನು ತೋಫೆತಿನ ಹಾಗೆಯೇ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು