ಯೆರೆಮೀಯ 11:7 - ಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿಮ್ಮ ಪೂರ್ವಜರನ್ನು ಈಜಿಪ್ಟ್ ದೇಶದಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ ನನ್ನ ಮಾತನ್ನು ಕೇಳಿರೆಂದು ತಡಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಬರಮಾಡಿದಾರಭ್ಯ ಇಂದಿನವರೆಗೂ ನಾನು ಅವರಿಗೆ - ನನ್ನ ಮಾತನ್ನು ಕೇಳಿರಿ ಎಂದು ಸಾವಕಾಶಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಾನು ನಿಮ್ಮ ಪೂರ್ವಿಕರನ್ನು ಈಜಿಪ್ಟಿನಿಂದ ಹೊರತಂದಾಗ ಅವರಿಗೆ ಒಂದು ಮುನ್ನೆಚ್ಚರಿಕೆಯನ್ನು ಕೊಟ್ಟೆನು. ಇಂದಿನವರೆಗೂ ನಾನು ಮತ್ತೆಮತ್ತೆ ಅವರಿಗೆ ಮುನ್ನೆಚ್ಚರಿಕೆಯನ್ನು ಕೊಟ್ಟೆ. ನನ್ನ ಆಜ್ಞಾಪಾಲನೆ ಮಾಡಬೇಕೆಂದು ಅವರಿಗೆ ಹೇಳಿದೆ. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.
“ನೀವು ನಿಮ್ಮ ದುರ್ಮಾರ್ಗಗಳನ್ನು ಬಿಟ್ಟು ತಿರುಗಿ, ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರವಾದಿಗಳಾದ ನನ್ನ ಸೇವಕರ ಮುಖಾಂತರ ನಾನು ನಿಮಗೆ ಕಳುಹಿಸಿದ ಮೋಶೆಯ ಎಲ್ಲಾ ನಿಯಮದ ಪ್ರಕಾರ ನನ್ನ ಆಜ್ಞೆಗಳನ್ನೂ, ನನ್ನ ಕಟ್ಟಳೆಗಳನ್ನೂ ಕೈಗೊಳ್ಳಿರಿ,” ಎಂದು ಯೆಹೋವ ದೇವರು ಸಮಸ್ತ ಪ್ರವಾದಿಗಳ ಮುಖಾಂತರವಾಗಿಯೂ, ಸಮಸ್ತ ದರ್ಶಿಗಳ ಮುಖಾಂತರವಾಗಿಯೂ ಇಸ್ರಾಯೇಲಿಗೂ, ಯೆಹೂದಕ್ಕೂ ಎಚ್ಚರಿಕೆ ಕೊಟ್ಟಿದ್ದರು.