ಯೆರೆಮೀಯ 11:8 - ಕನ್ನಡ ಸಮಕಾಲಿಕ ಅನುವಾದ8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನು ತನ್ನ ದುಷ್ಟ ಹೃದಯದ ನಿಮಿತ್ತ ಹಟಮಾರಿಯಂತೆ ನಡೆದುಕೊಂಡನು. ಆದಕಾರಣ, ಕೈಗೊಳ್ಳಬೇಕೆಂದು ನಾನು ಆಜ್ಞಾಪಿಸಿದ್ದರೂ ಅವರು ಕೈಗೊಳ್ಳದೆಹೋದ ಆ ಒಡಂಬಡಿಕೆಯಲ್ಲೆ ಸೂಚಿಸಲಾಗಿರುವ ಶಾಪಗಳನ್ನೆಲ್ಲ ಅವರ ಮೇಲೆ ಬರಮಾಡಿದೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಕೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.” ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.