Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:1 - ಕನ್ನಡ ಸಮಕಾಲಿಕ ಅನುವಾದ

1 ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ, ನೀವು ನೀತಿವಂತರೇ ಆಗಿದ್ದೀರಿ. ಆದರೂ ನಾನು ನಿಮ್ಮ ಸಂಗಡ ನ್ಯಾಯವಾದವುಗಳನ್ನು ಕುರಿತು ಮಾತನಾಡುವೆನು. ದುಷ್ಟರ ಮಾರ್ಗವು ಸಮೃದ್ಧಿಯಾಗುವುದು ಏಕೆ? ಮಹಾ ವಂಚನೆ ಮಾಡುವವರೆಲ್ಲರು ಸುಖವಾಗಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನೀನು ಧರ್ಮಸ್ವರೂಪನಾಗಿರುವದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು, ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆಗೆ ಏಕೆ ಸುಫಲವಾಗುತ್ತದೆ? ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನಾನು ನಿನ್ನ ಜೊತೆ ವಾದ ಮಾಡಿದರೆ, ನೀನು ಯಾವಾಗಲೂ ನ್ಯಾಯಪರನೆಂಬುದು ರುಜುವಾತಾಗುತ್ತದೆ. ಆದರೂ ನ್ಯಾಯಪೂರ್ಣವಲ್ಲದ ಕೆಲವು ವಿಷಯಗಳ ಬಗ್ಗೆ ನಾನು ನಿನ್ನನ್ನು ಕೇಳಬಯಸುತ್ತೇನೆ. ದುಷ್ಟರು ಏಕೆ ಅಭಿವೃದ್ಧಿ ಹೊಂದುತ್ತಾರೆ? ನಿನ್ನ ವಿಶ್ವಾಸಕ್ಕೆ ಪಾತ್ರರಾಗದವರು ನೆಮ್ಮದಿಯ ಜೀವನ ನಡೆಸಲು ಹೇಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:1
44 ತಿಳಿವುಗಳ ಹೋಲಿಕೆ  

ಈಗ ನಾವು ಗರ್ವಿಷ್ಠರನ್ನು ಭಾಗ್ಯವಂತರೆಂದನ್ನುತ್ತೇವೆ. ದುಷ್ಟರು ಅಭಿವೃದ್ಧಿಯಾಗುತ್ತಿದ್ದಾರೆ. ದೇವರಿಗೆ ಸವಾಲು ಹಾಕಿದವರು ತಪ್ಪಿಸಿಕೊಂಡಿದ್ದಾರೆ’ ಎಂದು ಹೇಳಿದ್ದೀರಿ.”


ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ ಅವರು ನಿತ್ಯ ದಂಡನೆಗೆ ಗುರಿಯಾಗುವರು.


ಕೆಟ್ಟವರನ್ನು ನೋಡಿ ಕೋಪಿಸಿಕೊಳ್ಳಬೇಡ. ಇಲ್ಲವೆ ಅಕ್ರಮ ಮಾಡುವವರ ಬಗ್ಗೆ ಹೊಟ್ಟೆಕಿಚ್ಚುಪಡಬೇಡ.


“ಕರ್ತದೇವರೇ, ನೀವು ನೀತಿವಂತರು, ಆದರೆ ನಾವು ಈ ದಿನ ಬಹಳ ಲಜ್ಜೆಗೆಟ್ಟವರು. ಯೆಹೂದ್ಯರು ಹಾಗು ಯೆರೂಸಲೇಮಿನ ನಿವಾಸಿಗಳು ಈಗಾಗಲೇ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ಚದರಿಹೋಗಿದ್ದಾರೆ. ದೂರದ ದೇಶಗಳಿಗೂ, ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಆ ಎಲ್ಲಾ ಇಸ್ರಾಯೇಲರು ನಾಚಿಕೆಗೆ ಈಡಾಗಿದ್ದಾರೆ.


ಕಳ್ಳರ ಗುಡಾರಗಳು ವೃದ್ಧಿಯಾಗಿವೆ; ದೇವರನ್ನು ಕೆರಳಿಸುವವರು ನಿಶ್ಚಿಂತರಾಗಿದ್ದಾರೆ; ದೇವರೇ ತಮ್ಮ ಕೈಯಲ್ಲಿ ಇರುವುದಾಗಿ ತಿಳಿಯುತ್ತಾರೆ.


ಆದ್ದರಿಂದ ದೈವನಿಯಮವು ಪಕ್ಕಕ್ಕೆ ಇಡಲಾಗಿದೆ. ನ್ಯಾಯವು ಎಂದಿಗೂ ಸ್ಥಾಪಿತವಾಗುವುದಿಲ್ಲ. ಏಕೆಂದರೆ ದುಷ್ಟರು ನೀತಿವಂತರನ್ನು ಸುತ್ತಿಕೊಂಡಿದ್ದಾರೆ. ಆದ್ದರಿಂದ ತಪ್ಪಾಗಿ ನ್ಯಾಯತೀರ್ಪು ಹೊರಡುತ್ತದೆ.


ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.


ದುಷ್ಟರು ದೊಡ್ಡ ಅಧಿಕಾರದಲ್ಲಿರುವುದನ್ನು ನಾನು ಕಂಡೆನು; ಅವರು ಹಸಿರಾಗಿ ವಿಸ್ತರಿಸಿಕೊಂಡ ಮರದ ಹಾಗೆ ಇದ್ದರು.


ನೀತಿಯುಳ್ಳ ಯೆಹೋವ ದೇವರು ಅವಳ ಮಧ್ಯದಲ್ಲಿ ಇದ್ದಾರೆ. ಅವರು ಅನ್ಯಾಯ ಮಾಡುವುದಿಲ್ಲ; ಪ್ರತಿ ಬೆಳಿಗ್ಗೆ ತಮ್ಮ ನ್ಯಾಯತೀರ್ಪನ್ನು ಬೆಳಕಿಗೆ ತರುತ್ತಾರೆ; ಅವರು ತಪ್ಪುವವರಲ್ಲ. ಆದರೆ ಅನ್ಯಾಯವಂತನು ನಾಚಿಕೆಯನ್ನು ಅರಿಯನು.


ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.


ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.


ಇಸ್ರಾಯೇಲನ ಮನೆತನದವರೂ, ಯೆಹೂದನ ಮನೆತನದವರೂ ನನಗೆ ಬಹಳ ವಂಚನೆ ಮಾಡಿದ್ದಾರೆ, ಎಂದು ಯೆಹೋವ ದೇವರು ಹೇಳುತ್ತಾರೆ.


ನಾನು ಸರ್ವಶಕ್ತರ ಸಂಗಡ ಖಂಡಿತವಾಗಿ ಮಾತನಾಡುವೆನು; ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರೇ, ನೀವು ನೀತಿವಂತರು! ನಾವು ಇಂದು ತಪ್ಪಿಸಿಕೊಂಡು ಉಳಿದಿದ್ದೇವೆ. ನಾವು ನಮ್ಮ ಅಪರಾಧಗಳ ನಿಮಿತ್ತ ನಿಮ್ಮ ಮುಂದೆ ನಿಲ್ಲಲು ಯೋಗ್ಯರಲ್ಲದಿದ್ದರೂ, ನಮ್ಮ ಅಪರಾಧಗಳೊಂದಿಗೆ ನಿಮ್ಮ ಮುಂದೆ ನಿಂತಿದ್ದೇವೆ,” ಎಂದು ಪ್ರಾರ್ಥನೆಮಾಡಿದೆ.


ಅವರು ಆದಾಮನಂತೆ ಒಡಂಬಡಿಕೆಯನ್ನು ಮೀರಿದ್ದಾರೆ. ಅಲ್ಲಿ ಅವರು ನನಗೆ ವಿರುದ್ಧವಾಗಿ ಅಪನಂಬಿಗಸ್ತಿಕೆಯಿಂದ ನಡೆದುಕೊಂಡಿದ್ದಾರೆ.


ನೀನು ಕೇಳಿಲ್ಲ, ತಿಳಿದೂ ಇಲ್ಲ. ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ. ಏಕೆಂದರೆ ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ನೀನು ದ್ರೋಹಿ ಎಂದೂ ನಾನು ತಿಳಿದುಕೊಂಡಿದ್ದೇನೆ.


“ನಿಮ್ಮ ವ್ಯಾಜ್ಯವನ್ನು ತನ್ನಿರಿ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಬಲವಾದ ನ್ಯಾಯಗಳನ್ನು ತನ್ನಿರಿ,” ಎಂದು ಯಾಕೋಬ್ಯರ ಅರಸನು ಹೇಳುತ್ತಾನೆ.


ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.


ಯೆಹೋವ ದೇವರು ತಮ್ಮ ಎಲ್ಲಾ ಮಾರ್ಗಗಳಲ್ಲಿ ನೀತಿವಂತರೂ ತಮ್ಮ ಸೃಷ್ಟಿಗೆಲ್ಲಾ ಪ್ರೀತಿ ತೋರಿಸುವವರೂ ಆಗಿದ್ದಾರೆ.


ಯೆಹೋವ ದೇವರೇ, ನೀವು ನೀತಿವಂತರು, ನಿಮ್ಮ ನಿಯಮಗಳು ಸರಿಯಾದವುಗಳೇ.


ಯೆಹೋವ ದೇವರೇ, ನಿಮ್ಮ ನಿಯಮಗಳು ನೀತಿಯುಳ್ಳವುಗಳು; ನಿಮ್ಮ ನಂಬಿಗಸ್ತಿಕೆಯಿಂದಲೇ ನೀವು ನನ್ನನ್ನು ಕಷ್ಟಪಡಿಸಿದ್ದೀರಿ ಎಂದು ನನಗೆ ಗೊತ್ತಿದೆ.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ಈ ರೀತಿಯಾಗಿ ನೀತಿವಂತರಿಗೂ ದುಷ್ಟರಿಗೂ ಭೇದ ಮಾಡದೆ, ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವುದು ನಿಮ್ಮಿಂದ ಎಂದಿಗೂ ಆಗಬಾರದು. ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿರುವ ತಾವು ನ್ಯಾಯವಾದದ್ದನ್ನೇ ಮಾಡಬೇಕಲ್ಲವೇ?” ಎಂದನು.


ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು.


ಯೆಹೋವ ದೇವರು ಕೃಪೆಯೂ ನೀತಿಯೂ ಉಳ್ಳವರು ನಮ್ಮ ದೇವರು ಅನುಕಂಪ ಭರಿತರು.


ಭೂಮಿಯ ಮೇಲೆ ನಡೆಯುವ ಇನ್ನೊಂದು ವ್ಯರ್ಥ ಕಾರ್ಯವಿದು: ದುಷ್ಟರಿಗೆ ಆಗಬೇಕಾದ ಶಿಕ್ಷೆಯನ್ನು ನೀತಿವಂತರು ಅನುಭವಿಸುತ್ತಾರೆ. ನೀತಿವಂತರಿಗೆ ಆಗಬೇಕಾದ ಪ್ರತಿಫಲವನ್ನು ದುಷ್ಟರು ಅನುಭವಿಸುತ್ತಾರೆ. ಇದು ಸಹ ವ್ಯರ್ಥವೆಂದು ನಾನು ಹೇಳುತ್ತೇನೆ.


ಅವಳು ಇವುಗಳನ್ನೆಲ್ಲಾ ಮಾಡಿದ ಮೇಲೆ ನಾನು ನನ್ನ ಬಳಿಗೆ ತಿರುಗಿಕೋ ಎಂದೆನು. ಆದರೆ ಅವಳು ತಿರುಗಿಕೊಳ್ಳಲಿಲ್ಲ. ಅವಳ ವಂಚನೆಯುಳ್ಳ ಸಹೋದರಿಯಾದ ಯೆಹೂದಳು ಅದನ್ನು ನೋಡಿದಳು.


ನಿಶ್ಚಯವಾಗಿ ಹೆಂಡತಿ ತನ್ನ ಗಂಡನನ್ನು ವಂಚಿಸಿಬಿಡುವ ಕಾರಣ, ಓ ಇಸ್ರಾಯೇಲಿನ ಮನೆತನದವರೇ, ನನಗೆ ವಂಚನೆ ಮಾಡಿದ್ದೀರಿ,” ಎಂದು ಯೆಹೋವ ದೇವರು ಹೇಳುತ್ತಾರೆ.


ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.


“ನಾನು ಆ ಕ್ರಯಪತ್ರವನ್ನು ನೇರೀಯನ ಮಗನಾದ ಬಾರೂಕನಿಗೆ ಕೊಟ್ಟ ಮೇಲೆ, ಯೆಹೋವ ದೇವರಿಗೆ ಪ್ರಾರ್ಥನೆ ಮಾಡಿದೆನು:


ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.


“ಆದರೆ ನೀವು, ‘ಯೆಹೋವ ದೇವರ ಮಾರ್ಗವು ಸರಿಯಲ್ಲ’ ಎಂದು ಹೇಳುತ್ತೀರಿ. ಇಸ್ರಾಯೇಲ್ ಜನರೇ, ಈಗ ಕೇಳಿರಿ, ನನ್ನ ಮಾರ್ಗವು ಸರಿಯಲ್ಲವೇ? ನಿಜಕ್ಕೂ ನಿಮ್ಮ ಮಾರ್ಗಗಳೇ ಸರಿಯಲ್ಲ.


ಅವರ ಬೇರುಗಳು ಬಂಡೆಗಳ ರಾಶಿಯ ಮೇಲೆ ಸುತ್ತಿ, ಕಲ್ಲುಗಳ ನಡುವೆ ನುಗ್ಗುತ್ತವೆ.


ಪಟ್ಟಣದೊಳಗಿಂದ ಮನುಷ್ಯರ ನರಳುವಿಕೆಯು ಜೋರಾಗುತ್ತದೆ; ಗಾಯಪಟ್ಟವರ ಪ್ರಾಣವು ಸಹಾಯಕ್ಕಾಗಿ ಕೂಗುತ್ತದೆ; ಆದರೂ ದೇವರು ಯಾರ ಮೇಲೆಯೂ ತಪ್ಪು ಹೊರಿಸುವುದಿಲ್ಲ.


ಭದ್ರತೆಯಲ್ಲಿ ವಿಶ್ರಾಂತಿ ಪಡೆಯಲು ದೇವರು ಅವರಿಗೆ ಅವಕಾಶ ನೀಡಬಹುದು; ಆದರೆ ದೇವರ ಕಣ್ಣುಗಳು ಅವರ ಮಾರ್ಗಗಳ ಮೇಲಿರುವುದು.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ನಮ್ಮ ದೇವರಾದ ಯೆಹೋವ ದೇವರು ತಾವು ಮಾಡುವ ಎಲ್ಲದರಲ್ಲಿಯೂ ನೀತಿವಂತರಾಗಿದ್ದುದರಿಂದ, ವಿನಾಶವನ್ನು ನಮ್ಮ ಮೇಲೆ ಬರಮಾಡಲು ಯೆಹೋವ ದೇವರು ಹಿಂಜರಿಯಲಿಲ್ಲ. ಆದರೂ ನಾವು ಅವರಿಗೆ ವಿಧೇಯರಾಗಲೇ ಇಲ್ಲ.


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು