Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:12 - ಕನ್ನಡ ಸಮಕಾಲಿಕ ಅನುವಾದ

12 ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ ನಾಶಮಾಡುವವರು ಬಂದಿದ್ದಾರೆ. ಏಕೆಂದರೆ, ಯೆಹೋವ ದೇವರ ಖಡ್ಗವು ದೇಶದ ಒಂದು ಕಡೆಯಿಂದ ದೇಶದ ಇನ್ನೊಂದು ಕಡೆಯವರೆಗೂ ನುಂಗಿಬಿಡುತ್ತದೆ. ಯಾವ ಮನುಷ್ಯನೂ ಸುರಕ್ಷಿತವಾಗಿ ಉಳಿಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಜಡಾಡುತ್ತಿರುವುದು ಕಂಡು ಬರುತ್ತಿದೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾಡಿನ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಕೊಳ್ಳೆಗಾರರು ಕಾಡುಗುಡ್ಡೆಗಳ ಮೇಲೆಲ್ಲ ಕಂಡುಬಂದಿದ್ದಾರೆ. ಕಬಳಿಸಿಬಿಡುವುದು ನನ್ನ ಖಡ್ಗ ಯಾರಿಗು ನೆಮ್ಮದಿಯಿಲ್ಲದ ಹಾಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕೊಳ್ಳೆಗಾರರು ಅರಣ್ಯದ ಎಲ್ಲಾ ಬೋಳುಗುಡ್ಡಗಳಲ್ಲಿಯೂ ಕಂಡುಬಂದಿದ್ದಾರೆ; ಯೆಹೋವನ ಖಡ್ಗವು ದೇಶದ ಒಂದು ಕಡೆಯಿಂದ ಇನ್ನೊಂದು ಕಡೆಯವರೆಗೆ ನುಂಗಿಬಿಡುತ್ತಿದೆ; ಯಾರಿಗೂ ನೆಮ್ಮದಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಅನೇಕ ಸೈನಿಕರು ಆ ಬೋಳುಬೆಟ್ಟಗಳನ್ನು ತುಳಿದುಕೊಂಡು ಹೋದರು. ಆ ಸೈನ್ಯಗಳಿಂದ ಯೆಹೋವನು ಆ ದೇಶವನ್ನು ದಂಡಿಸಿದನು. ಆ ದೇಶದ ಒಂದು ತುದಿಯಿಂದ ಇನ್ನೊಂದು ತುದಿಯವರೆಗೆ ವಾಸಿಸಿದ ಎಲ್ಲಾ ಜನರನ್ನು ದಂಡಿಸಲಾಯಿತು. ಯಾರೂ ಸುರಕ್ಷಿತವಾಗಿ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:12
31 ತಿಳಿವುಗಳ ಹೋಲಿಕೆ  

ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”


“ಅಯ್ಯೋ, ಯೆಹೋವ ದೇವರ ಖಡ್ಗವೇ, ಎಷ್ಟರವರೆಗೆ ವಿಶ್ರಮಿಸಿಕೊಳ್ಳದೇ ಇರುವಿ? ನಿನ್ನ ಒರೆಯಲ್ಲಿ ಅಡಗಿಕೋ; ವಿಶ್ರಮಿಸಿಕೋ, ಸುಮ್ಮನಿರು.


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


ಯೆಹೋವ ದೇವರ ಖಡ್ಗವು ರಕ್ತದಲ್ಲಿ ಸ್ನಾನ ಮಾಡಿದೆ. ಅದು ಕುರಿ ಮತ್ತು ಹೋತಗಳ ರಕ್ತದಿಂದಲೂ, ಟಗರುಗಳ ಮೂತ್ರಪಿಂಡದ ಕೊಬ್ಬಿನಿಂದಲೂ ಮುಚ್ಚಲಾಗಿದೆ. ಏಕೆಂದರೆ ಯೆಹೋವ ದೇವರಿಗೆ ಬೊಚ್ರದಲ್ಲಿ ಬಲಿಯು, ಎದೋಮಿನ ದೇಶದಲ್ಲಿ ದೊಡ್ಡ ಕೊಲೆಯು ಉಂಟು.


ಆಗ ಕೆಂಪು ಬಣ್ಣದ ಬೇರೊಂದು ಕುದುರೆಯು ಹೊರಟು ಬಂದಿತು. ಅದರ ಸವಾರನಿಗೆ ಲೋಕದಿಂದ ಸಮಾಧಾನವನ್ನು ತೆಗೆದುಬಿಡುವುದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವುದಕ್ಕೂ ಅಧಿಕಾರವು ಕೊಡಲಾಗಿತ್ತು. ಅವನಿಗೆ ದೊಡ್ಡ ಕತ್ತಿಯು ಸಹ ಕೊಡಲಾಗಿತ್ತು.


ಕೂಷ್ ದೇಶದವರೇ, ನೀವೂ ಸಹ ನನ್ನ ಖಡ್ಗದಿಂದ ಹತರಾಗುವಿರಿ.


ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ; ಹೆಷ್ಬೋನಿನಲ್ಲಿ ಅದಕ್ಕೆ ವಿರೋಧವಾಗಿ ಕೇಡನ್ನು ಆಲೋಚಿಸಿದ್ದಾರೆ; ಬನ್ನಿ, ರಾಷ್ಟ್ರವಿಲ್ಲದ ಹಾಗೆ ಅದನ್ನು ಕಡಿದುಬಿಡೋಣ; ಮದ್ಮೆನೇ, ನೀನು ಸಹ ಸುಮ್ಮನಾಗುವೆ; ಖಡ್ಗವು ನಿನ್ನನ್ನು ಹಿಂದಟ್ಟುವುದು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ಮರಣಕ್ಕೆ ಇರುವವರು ಮರಣಕ್ಕೆ; ಖಡ್ಗಕ್ಕೆ ಇರುವವರು ಖಡ್ಗಕ್ಕೆ; ಕ್ಷಾಮಕ್ಕೆ ಇರುವವರು ಕ್ಷಾಮಕ್ಕೆ; ಸೆರೆಗೆ ಇರುವವರು ಸೆರೆಗೆ,’ ಎಂದು ಹೇಳಬೇಕು.


“ನಿನ್ನ ಕಣ್ಣುಗಳನ್ನು ಉನ್ನತ ಸ್ಥಳಗಳ ಮೇಲೆ ಎತ್ತು. ಯಾವುದರಲ್ಲಿ ನಿನ್ನನ್ನು ನೀನು ಕೆಡಿಸಿಕೊಳ್ಳಲಿಲ್ಲ? ಮರುಭೂಮಿಯಲ್ಲಿ ಅರಬೀಯನ ಹಾಗೆ ದಾರಿಗಳಲ್ಲಿ ಅವರಿಗೋಸ್ಕರ ಕೂತುಕೊಂಡಿದ್ದೀ. ಹೀಗೆ ನಿನ್ನ ವೇಶ್ಯೆತನಗಳಿಂದಲೂ, ನಿನ್ನ ಕೆಟ್ಟತನಗಳಿಂದಲೂ ದೇಶವನ್ನು ಅಪವಿತ್ರ ಮಾಡಿದ್ದೀಯೆ.


“ದುಷ್ಟರಿಗೆ ಸಮಾಧಾನವೇ ಇಲ್ಲ,” ಎಂದು ನನ್ನ ದೇವರು ಹೇಳುತ್ತಾರೆ.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


ಉನ್ನತ ಸ್ಥಳಗಳ ಮೇಲೆ ಸ್ವರವು ಕೇಳಿತು. ಅವು ಇಸ್ರಾಯೇಲಿನ ಮಕ್ಕಳ ಅಳುವಿಕೆಯ ಬೇಡಿಕೆಗಳೇ. ಏಕೆಂದರೆ ಅವರು ತಮ್ಮ ಮಾರ್ಗವನ್ನು ಡೊಂಕು ಮಾಡಿ, ತಮ್ಮ ದೇವರಾದ ಯೆಹೋವ ದೇವರನ್ನು ಮರೆತುಬಿಟ್ಟಿದ್ದರು.


ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ: “ದೇಶವೆಲ್ಲಾ ಹಾಳಾಗುವುದು. ಆದರೂ ನಾನು ಅದನ್ನು ಪೂರ್ಣ ನಾಶ ಮಾಡಿಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.


ಈ ದೇಶವೆಲ್ಲಾ ಹಾಳಾಗಿ ಭಯಕ್ಕೆ ಗುರಿಯಾಗುವುದು. ಈ ಜನಾಂಗಗಳು ಬಾಬಿಲೋನಿನ ಅರಸನನ್ನು ಎಪ್ಪತ್ತು ವರ್ಷ ಸೇವಿಸುವರು.


“ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ನಾವು ನಡುಗುವಿಕೆಯ ಮತ್ತು ಭಯದ ಧ್ವನಿಯನ್ನು ಕೇಳಿದ್ದೇವೆಯೇ ಹೊರತು, ಸಮಾಧಾನದ್ದಲ್ಲ.


ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ. ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು, ಖಡ್ಗವು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವುದು. ಏಕೆಂದರೆ ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೇನಾಧೀಶ್ವರ ಯೆಹೋವರಾದ ದೇವರಿಗೆ ಬಲಿ ಆಗುತ್ತದೆ.


ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ, ನಾನು ಸಮೃದ್ಧಿಯನ್ನು ಮರೆತುಬಿಟ್ಟೆನು.


ಆಮೇಲೆ ನಾನು ನೀತಿವಂತರನ್ನೂ, ದುಷ್ಟರನ್ನೂ ಕಡಿದುಬಿಡುವುದರಿಂದ ನನ್ನ ಖಡ್ಗವು ದಕ್ಷಿಣದಿಂದ ಮೊದಲುಗೊಂಡು ಉತ್ತರದ ಮನುಷ್ಯರೆಲ್ಲರಿಗೆ ವಿರೋಧವಾಗಿ ಅದರ ಒರೆಯನ್ನು ಬಿಟ್ಟು ಹೋಗುವುದು.


“ಮನುಷ್ಯಪುತ್ರನೇ, ನೀನು ಪ್ರವಾದಿಸಿ, ಸಾರ್ವಭೌಮ ಯೆಹೋವ ದೇವರು ಅಮ್ಮೋನಿಯರ ವಿಷಯವಾಗಿಯೂ ಅವರ ನಿಂದೆಯ ವಿಷಯವಾಗಿಯೂ ಹೀಗೆ ಹೇಳುತ್ತಾರೆ, ‘ಹೌದು, ನೀನು ಹೀಗೆ ಹೇಳು: “ ‘ಒಂದು ಖಡ್ಗವು, ಒಂದು ಖಡ್ಗವು ಸಂಹರಿಸುವುದಕ್ಕೆ ಹಿರಿದಿದೆ, ಮಿಂಚುವಂತೆ ಬಹಳವಾಗಿ ಮಸೆಯಲಾಗಿದೆ. ಥಳಥಳಿಸುತ್ತಾ ನುಂಗುವಹಾಗಿದೆ.


ಸಮಾಧಾನಕ್ಕೆ ಕಾದುಕೊಂಡೆವು, ಆದರೆ ಒಳ್ಳೆಯದೇನೂ ಬರಲಿಲ್ಲ. ಆರೋಗ್ಯದ ಸಮಯಕ್ಕೆ ಕಾದಿದ್ದೆವು. ಆದರೆ ಇಗೋ, ಆತಂಕವನ್ನು ನೋಡುತ್ತೇವೆ.


ಯೆಹೋವ ದೇವರ ವಾಕ್ಯವು ನನಗೆ ಬಂದಿತು,


“ಮನುಷ್ಯಪುತ್ರನೇ, ಪ್ರವಾದಿಸಿ, ‘ಯೆಹೋವ ದೇವರು ಹೀಗೆ ಹೇಳುತ್ತಾರೆಂದು ಹೇಳು: “ ‘ಆ ಒಂದು ಖಡ್ಗವು ಹದಮಾಡಲಾಗಿದೆ; ಮೆರುಗೂ ಸಹ ಮಾಡಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು