Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:14 - ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ತನ್ನ ಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸ್ವತ್ತಿಗೆ ಕೈಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ, “ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ, ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸರ್ವೇಶ್ವರ ಸ್ವಜನರಾದ ಇಸ್ರಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ : “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. (ಅವರ ಮಧ್ಯೆಯಿಂದ ಕಿತ್ತುಬಿಡುವೆನು ಯೆಹೂದ ವಂಶವನ್ನು).

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ತನ್ನ ಜನರಾದ ಇಸ್ರಾಯೇಲ್ಯರಿಗೆ ದಯಪಾಲಿಸಿದ ಸ್ವಾಸ್ತ್ಯಕ್ಕೆ ಕೈ ಹಾಕುವ ತನ್ನ ಕೆಟ್ಟ ನೆರೆಯವರ ವಿಷಯದಲ್ಲಿ ಹೀಗೆ ಹೇಳುತ್ತಾನೆ - ಆಹಾ, ಅವರನ್ನು ಅವರವರ ಸೀಮೆಗಳೊಳಗಿಂದ ಕಿತ್ತುಹಾಕಿ ಅವರ ಮಧ್ಯದಲ್ಲಿನ ಯೆಹೂದ ವಂಶವನ್ನೂ ಕಿತ್ತುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ಹೀಗೆ ಹೇಳುತ್ತಾನೆ: “ಇಸ್ರೇಲ್ ಪ್ರದೇಶದ ಸುತ್ತಮುತ್ತ ವಾಸಮಾಡುವ ಜನರಿಗಾಗಿ ನಾನು ಏನು ಮಾಡುವೆನೆಂಬುದನ್ನು ನಿಮಗೆ ಹೇಳುವೆನು. ಆ ಜನರು ತುಂಬ ದುಷ್ಟರಾಗಿದ್ದಾರೆ. ನಾನು ಇಸ್ರೇಲಿನ ಜನರಿಗೆ ಕೊಟ್ಟ ಪ್ರದೇಶವನ್ನು ಅವರು ಹಾಳು ಮಾಡಿದರು. ನಾನು ಆ ಜನರನ್ನು ಅವರ ಪ್ರದೇಶದಿಂದ ಹೊರಗೆ ಎಸೆಯುವೆನು. ನಾನು ಅವರೊಂದಿಗೆ ಯೆಹೂದದ ಜನರನ್ನೂ ಎಸೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:14
34 ತಿಳಿವುಗಳ ಹೋಲಿಕೆ  

ಏಕೆಂದರೆ ಸರ್ವಶಕ್ತರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, “ನಿಮ್ಮನ್ನು ಸುಲಿದುಕೊಂಡ ಜನಾಂಗಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ. ಏಕೆಂದರೆ ನಿಮ್ಮನ್ನು ಮುಟ್ಟುವವನು ಯೆಹೋವ ದೇವರ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ.


ಆ ಕಾಲದಲ್ಲಿ ಯೆಹೂದದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ಬಾಳುವುದು. ಈ ಎರಡು ವಂಶಗಳೂ ಉತ್ತರ ಪ್ರಾಂತಗಳನ್ನು ಬಿಟ್ಟು, ನಾನು ನಿಮ್ಮ ಪೂರ್ವಜರಿಗೆ ಬಾಧ್ಯವಾಗಿ ಕೊಟ್ಟ ನಾಡಿಗೆ ಬರುವುವು.”


ಎದೋಮ್ಯರನ್ನು ಕುರಿತದ್ದು: ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ. “ತೇಮಾನ್‌ನಲ್ಲಿ ಇನ್ನು ಮೇಲೆ ಜ್ಞಾನವಿರುವುದಿಲ್ಲವೋ? ವಿವೇಕಿಗಳಿಂದ ಆಲೋಚನೆಯು ನಾಶವಾಯಿತೋ? ಅವರ ಜ್ಞಾನವು ಕ್ಷೀಣಿಸಿದೆಯೇ?


ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ, ಆತನ ಹುಟ್ಟುವಳಿಯ ಪ್ರಥಮ ಫಲವೂ ಆಗಿದೆ ಅವಳನ್ನು ತಿಂದು ಬಿಟ್ಟವರೆಲ್ಲರೂ ಅಪರಾಧಿಗಳಾಗುವರು. ಅವರಿಗೆ ಕೇಡು ಬರುವುದು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮ ದೇವರಾದ ಯೆಹೋವ ದೇವರೇ, ನಾವು ನಿಮ್ಮ ಪರಿಶುದ್ಧ ಹೆಸರಿಗೆ ಉಪಕಾರಸ್ತುತಿ ಮಾಡಿ, ನಿಮ್ಮ ಸ್ತೋತ್ರದಲ್ಲಿ ಜಯಘೋಷ ಮಾಡುವ ಹಾಗೆ, ನಮ್ಮನ್ನು ರಕ್ಷಿಸಿರಿ.


ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಸೆರೆಯಿಂದ ಬಿಡಿಸಿ, ನಿಮ್ಮ ಮೇಲೆ ಕನಿಕರಿಸಿ, ಅವರು ನಿಮ್ಮನ್ನು ಚದರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿಮ್ಮನ್ನು ಕೂಡಿಸುವರು.


ನಿಶ್ಚಿಂತೆಯುಳ್ಳವರಾಗಿರುವ ಇತರ ರಾಷ್ಟ್ರಗಳ ಮೇಲೆ ನಾನು ಬಹಳ ಕೋಪವಾಗಿದ್ದೇನೆ. ಆದರೆ ಯೆರೂಸಲೇಮಿನ ಮೇಲೆ ನಾನು ಸ್ವಲ್ಪ ಮಾತ್ರ ಸಿಟ್ಟುಗೊಂಡಿರಲು, ಅವರು ಸಂಕಟಕ್ಕೆ ಇನ್ನು ಹೆಚ್ಚು ಕೇಡು ಕೂಡಿಸಿದರು.


ಆಗ ಯೆಹೂದದ ಜನರು ಮತ್ತು ಇಸ್ರಾಯೇಲ್ ಜನರು ಒಟ್ಟುಗೂಡಿಕೊಂಡು ತಮಗೆ ಒಬ್ಬ ನಾಯಕನನ್ನು ನೇಮಕ ಮಾಡಿಕೊಂಡು, ದೇಶದೊಳಗಿಂದ ಹೊರಗೆ ಬರುವರು. ಏಕೆಂದರೆ ಇಜ್ರೆಯೇಲಿನ ಆ ದಿನವು ಮಹಾದಿನವಾಗಿರುವುದು.


‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು.


“ ‘ನಾನು ನಿಮ್ಮನ್ನು ಇತರ ಜನಾಂಗಗಳ ಮಧ್ಯದಿಂದ ತೆಗೆದು ಎಲ್ಲಾ ದೇಶಗಳೊಳಗಿಂದ ಕೂಡಿಸಿ ನಿಮ್ಮ ನಿಮ್ಮ ಸ್ವಂತ ದೇಶಗಳಲ್ಲಿ ಸೇರಿಸುವೆನು.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಜನಾಂಗಗಳಲ್ಲಿ ಚದರಿಹೋಗಿರುವ ಇಸ್ರಾಯೇಲ್ ವಂಶದವರನ್ನು ನಾನು ಒಟ್ಟುಗೂಡಿಸಿ, ಎಲ್ಲ ಜನಾಂಗಗಳ ಕಣ್ಣೆದುರಿಗೆ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು. ಆಮೇಲೆ ದಾಸ ಯಾಕೋಬನಿಗೆ ನಾನು ಅನುಗ್ರಹಿಸಿದ ಸ್ವಂತ ನಾಡಿನಲ್ಲಿ ವಾಸಿಸುವರು.


ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ.


ನಾನು ನನ್ನ ಕೋಪದಲ್ಲಿಯೂ, ನನ್ನ ಉಗ್ರದಲ್ಲಿಯೂ, ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶದೊಳಗಿಂದ ಅವರನ್ನು ಕೂಡಿಸಿ, ಈ ಸ್ಥಳಕ್ಕೆ ತಿರುಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.


“ನನ್ನ ಅಭಿಷಿಕ್ತರನ್ನು ಮುಟ್ಟಬೇಡಿರಿ, ನನ್ನ ಪ್ರವಾದಿಗಳಿಗೆ ಕೇಡು ಮಾಡಬೇಡಿರಿ.”


ಯೆಹೋವ ದೇವರು ಹೇಗೆ ನಿಮಗೆ ಸಮೃದ್ಧಿಯನ್ನು ಕೊಡುವುದಕ್ಕೂ ನಿಮ್ಮನ್ನು ಹೆಚ್ಚಿಸುವುದಕ್ಕೂ ನಿಮಗೋಸ್ಕರ ಸಂತೋಷಿಸಿದರೋ, ಹಾಗೆಯೇ ಯೆಹೋವ ದೇವರು ನಿಮ್ಮನ್ನು ಕೆಡಿಸಿ, ನಾಶಮಾಡುವುದಕ್ಕೂ ನಿಮಗೆ ವಿರೋಧವಾಗಿ ಸಂತೋಷಿಸುವರು. ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಿಂದಲೂ ನಿಮ್ಮನ್ನು ಕಿತ್ತುಹಾಕುವರು.


“ಆದರೂ ನಾನು ಕಡೇ ದಿವಸಗಳಲ್ಲಿ ಮೋವಾಬಿನ ಸಮೃದ್ಧಿಯನ್ನು ತಿರುಗಿ ತರುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ಈವರೆಗೆ ಮೋವಾಬಿನ ನ್ಯಾಯ ತೀರ್ವಿಕೆಯು ಇರುವುದು.


ಅಮ್ಮೋನ್ಯರನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಸ್ರಾಯೇಲಿಗೆ ಪುತ್ರರಿಲ್ಲವೋ? ಅವನಿಗೆ ಬಾಧ್ಯಸ್ಥನಿಲ್ಲವೋ? ಮಲ್ಕಾಮ್ ದೇವತೆಯು ಗಾದನ್ನು ಬಾಧ್ಯವಾಗಿ ತೆಗೆದುಕೊಳ್ಳುವುದು ಏಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವುದು ಏಕೆ?


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಅವರು ನಿರ್ಭಯವಾಗಿ ಅಲ್ಲಿ ವಾಸಿಸುವರು. ಮನೆಗಳನ್ನು ಕಟ್ಟುವರು; ದ್ರಾಕ್ಷಿತೋಟಗಳನ್ನು ನೆಡುವರು. ಹೌದು, ಅವರ ಸುತ್ತಲೂ ಅವರನ್ನು ಅಸಡ್ಡೆ ಮಾಡಿದವರೆಲ್ಲರ ಮೇಲೆ ನಾನು ನ್ಯಾಯ ತೀರಿಸಿದ ಮೇಲೆ ಅವರು ನಿರ್ಭಯವಾಗಿ ವಾಸಿಸುವರು, ಆಗ ಯೆಹೋವನಾದ ನಾನೇ ಅವರ ದೇವರೆಂದು ತಿಳಿಯುವರು.’ ”


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಶ್ಚಯವಾಗಿ ನನ್ನ ರೋಷದ ಬೆಂಕಿಯಿಂದ ಇತರ ಜನಾಂಗಗಳಲ್ಲಿ ಉಳಿದವರಿಗೂ ಎದೋಮಿನವರೆಲ್ಲರಿಗೂ ವಿರುದ್ಧವಾಗಿ ನಾನು ಮಾತನಾಡಿದ್ದೇನೆ; ಅವರ ಸಂಪೂರ್ಣ ಹೃದಯದ ಸಂತೋಷದಿಂದಲೂ ತಮ್ಮ ಹಗೆಯ ಮನೋಭಾವದಿಂದಲೂ ನನ್ನ ದೇಶವನ್ನು ತಮ್ಮ ಸೊತ್ತಾಗಿ ಮಾಡಿಕೊಂಡಿದ್ದಾರೆ. ಅವರು ಅದರ ಹುಲ್ಲುಗಾವಲನ್ನು ಸಹ ಸೂರೆಮಾಡಬೇಕೆಂದಿದ್ದಾರೆ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು