Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:4 - ಕನ್ನಡ ಸಮಕಾಲಿಕ ಅನುವಾದ

4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:4
22 ತಿಳಿವುಗಳ ಹೋಲಿಕೆ  

ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ, ಮರುಭೂಮಿಯ ಸ್ಥಳಗಳಿಗೋಸ್ಕರ ಗೋಳಾಟವನ್ನೂ ಎತ್ತುವೆನು. ಅವುಗಳ ಮೂಲಕ ಹಾದುಹೋಗದಂತೆ ಅವು ಸುಟ್ಟುಹೋಗಿದೆ. ದನಗಳ ಕೂಗು ಕಿವಿಗೆ ಬೀಳುವುದಿಲ್ಲ. ಆಕಾಶದ ಪಕ್ಷಿಗಳೂ, ಮೃಗಗಳೂ ಸಹ ಓಡಿ ಹೋಗಿವೆ.


ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿ ಹೋಗಿದ್ದವು.


ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.


ಈವರೆಗೂ ಸೃಷ್ಟಿಯೆಲ್ಲ ಪ್ರಸವ ವೇದನೆಯಂಥ ನೋವಿನಿಂದ ನರಳುತ್ತಿದೆ ಎಂದು ನಾವು ಬಲ್ಲೆವು.


ಆದ್ದರಿಂದ ದೇಶವು ದುಃಖಪಡುತ್ತಿದೆ. ಅದರಲ್ಲಿ ವಾಸಿಸುವ ಪ್ರತಿಯೊಬ್ಬನು ಕುಗ್ಗಿಹೋಗಿದ್ದಾನೆ. ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ, ಸಮುದ್ರ ಮೀನುಗಳು ನಶಿಸಿ ಹೋಗುತ್ತಿವೆ.


ಏಕೆಂದರೆ ದೇಶವು ವ್ಯಭಿಚಾರಗಳಿಂದ ತುಂಬಿದೆ. ದೇಶವು ಶಾಪದಿಂದ ದುಃಖಿಸುತ್ತದೆ. ಮರುಭೂಮಿಯ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ. ಪ್ರವಾದಿಗಳು ಕೆಟ್ಟ ಮಾರ್ಗವನ್ನು ಅನುಸರಿಸುತ್ತಾರೆ ಮತ್ತು ತಮ್ಮ ಶಕ್ತಿಯನ್ನು ಅನ್ಯಾಯವಾಗಿ ಬಳಸುತ್ತಾರೆ.


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ಈ ಸ್ಥಳದ ಮೇಲೆಯೂ, ಮನುಷ್ಯರ ಮೇಲೆಯೂ, ಮೃಗಗಳ ಮೇಲೆಯೂ, ಹೊಲದ ಮರಗಳ ಮೇಲೆಯೂ, ಭೂಮಿಯ ಫಲದ ಮೇಲೆಯೂ ನನ್ನ ಕೋಪ ಮತ್ತು ಉಗ್ರತೆಯು ಹೊಯ್ಯಲಾಗುವುದು. ಅದು ಉರಿಯುವುದು ಮತ್ತು ಆರಿಹೋಗುವುದಿಲ್ಲ.


ಅಂಜೂರದ ಗಿಡವು ಚಿಗುರದಿದ್ದರೂ, ದ್ರಾಕ್ಷಾಲತೆಗಳಲ್ಲಿ ಹಣ್ಣು ಫಲಿಸದಿದ್ದರೂ, ಎಣ್ಣೆಮರಗಳ ಉತ್ಪತ್ತಿಯು ಶೂನ್ಯವಾದರೂ, ಹೊಲಗಳು ಆಹಾರ ಕೊಡದಿದ್ದರೂ, ಕುರಿಹಟ್ಟಿಗಳು ಬರಿದಾಗಿ ಹೋದರೂ, ಕೊಟ್ಟಿಗೆಗಳಲ್ಲಿ ದನಕರುಗಳು ಇಲ್ಲವಾದರೂ,


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


“ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.


ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು, ದೈವೋಕ್ತಿ ಎಂಬುದು ಅವುಗಳಲ್ಲಿ ಇಲ್ಲ, ಅವರು ಹೇಳುವುದೆಲ್ಲಾ ಅವರಿಗೇ ತಗಲಲಿ,” ಎಂದುಕೊಂಡಿದ್ದಾರೆ.


ಇದರ ನಿಮಿತ್ತ ಭೂಮಿಯು ದುಃಖಿಸುವುದು. ಮೇಲಿರುವ ಆಕಾಶವು ಕಪ್ಪಾಗುವುದು. ಏಕೆಂದರೆ ನಾನು ಅದನ್ನು ಹೇಳಿದ್ದರಿಂದ ನಿಶ್ಚಯಿಸಿದ್ದೇನೆ. ಮಾನಸಾಂತರ ಪಡುವುದಿಲ್ಲ. ಇಲ್ಲವೆ ಅದರಿಂದ ಹಿಂದಿರುಗುವುದಿಲ್ಲ.”


ಇವುಗಳನ್ನೆಲ್ಲಾ ನೀವು ಮಾಡಿದ್ದೀರಿ, ಆದರೂ ನಾನು ಮೌನವಾಗಿದ್ದೆನು. ಆದ್ದರಿಂದ ನಾನೂ ಸಹ ನಿಮ್ಮ ಹಾಗೆ ಒಬ್ಬನೆಂದು ನೀವು ನೆನಸಿಕೊಂಡಿದ್ದೀರಿ. ಆದರೆ ಈಗ ನಾನು ನಿಮ್ಮನ್ನು ಗದರಿಸಿ ನಿಮ್ಮ ಕಣ್ಣು ಮುಂದೆಯೇ ನಿಮ್ಮ ಅಪರಾಧ ಪ್ರಕಟಿಸುವೆನು.


ಅದನ್ನು ಹಾಳು ಮಾಡಿದ್ದಾರೆ. ಅದು ಒಣಗಿ ಬರಿದಾಗಿ ಹೋಗಿದೆ. ದೇಶವೆಲ್ಲಾ ಹಾಳಾಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವುದಿಲ್ಲ.


ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.


ಆಮೋಸನು ಹೇಳಿದ್ದೇನೆಂದರೆ: “ಯೆಹೋವ ದೇವರು ಚೀಯೋನಿನಿಂದ ಗರ್ಜಿಸಿ, ಯೆರೂಸಲೇಮಿನಿಂದ ತಮ್ಮ ಧ್ವನಿ ಗೈಯುವರು. ಕುರುಬರ ಹುಲ್ಲುಗಾವಲುಗಳು ಬಾಡಿ ಹೋಗುತ್ತಿವೆ, ಕರ್ಮೆಲಿನ ತುದಿಯ ಗಿಡಗಳು ಒಣಗಿ ಹೋಗುತ್ತವೆ.”


ಆಗ ಯೆಹೋವ ದೇವರ ದೂತನು ಉತ್ತರಕೊಟ್ಟು: “ಸರ್ವಶಕ್ತರಾದ ಯೆಹೋವ ದೇವರೇ, ನೀವು ಯೆರೂಸಲೇಮನ್ನೂ, ಯೆಹೂದದ ಪಟ್ಟಣಗಳನ್ನೂ ಎಷ್ಟರವರೆಗೆ ಕನಿಕರಿಸದೆ ಇರುವಿರಿ? ಅವುಗಳ ಮೇಲೆ ಈ ಎಪ್ಪತ್ತು ವರ್ಷಗಳು ಸಿಟ್ಟು ಮಾಡಿದ್ದೀರಲ್ಲವೋ?” ಎಂದನು.


ಭೂಮಿಯು ಪ್ರಲಾಪಿಸುತ್ತಾ ಬಾಡಿಹೋಗುವುದು. ಲೋಕವು ಸೊರಗಿ ಬಾಡಿಹೋಗುವುದು. ಆಕಾಶವು ಭೂಮಿಯೊಂದಿಗೆ ಕುಗ್ಗಿಹೋಗುವುದು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ. ಅದರಲ್ಲಿ ವಾಸವಾಗಿರುವವರು ದಂಡನೆಗೆ ಒಳಗಾಗಿದ್ದಾರೆ. ಆದ್ದರಿಂದ ಭೂನಿವಾಸಿಗಳು ಸುಟ್ಟು ಹೋಗಿ, ಕೆಲವರು ಮಾತ್ರ ಉಳಿದಿದ್ದಾರೆ.


ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು