ಯೆರೆಮೀಯ 12:5 - ಕನ್ನಡ ಸಮಕಾಲಿಕ ಅನುವಾದ5 “ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ, ಕುದುರೆಗಳ ಸಂಗಡ ಹೇಗೆ ಹೋರಾಡುವೆ? ನೀನು ಸುರಕ್ಷಿತವಾದ ದೇಶದಲ್ಲಿ ಎಡವಿದರೆ, ಯೊರ್ದನಿನ ದಟ್ಟ ಅಡವಿಯಲ್ಲಿ ಹೇಗೆ ಸುಧಾರಿಸುವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 (ಆಗ ಸರ್ವೇಶ್ವರ ನನಗೆ) : “ಕಾಲಾಳುಗಳ ಸಂಗಡ ಓಡಲು ಆಯಾಸಗೊಂಡೆಯಾದರೆ ಕುದುರೆಗಳೊಂದಿಗೆ ಓಡಿ ಹೇಗೆ ಹೋರಾಡುವೆ? ಪ್ರಶಾಂತ ಪ್ರದೇಶದಲ್ಲಿ ನಿರ್ಭಯನಾಗಿ ನಿಲ್ಲಲಾರೆಯಾದರೆ ಜೋರ್ಡಾನಿನ ದಟ್ಟ ಅಡವಿಯಲ್ಲಿ ಏನು ಮಾಡಬಲ್ಲೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 [ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಯೆರೆಮೀಯನೇ, ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿರುವುದಾದರೆ, ಕುದುರೆಗಳೊಂದಿಗೆ ಓಡಿ ಹೇಗೆ ಗೆಲ್ಲುವೆ? ಸುರಕ್ಷಿತವಾದ ದೇಶದಲ್ಲಿ ನೀನು ದಣಿದುಕೊಂಡರೆ ಜೋರ್ಡನ್ ನದಿ ದಡದ ಭಯಾನಕ ಮುಳ್ಳುಕಂಟಿಯ ಪ್ರದೇಶಕ್ಕೆ ಬಂದಾಗ ಏನು ಮಾಡುವೆ? ಅಧ್ಯಾಯವನ್ನು ನೋಡಿ |
ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಆ ಬಾಬಿಲೋನಿಯರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು; ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”