Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:6 - ಕನ್ನಡ ಸಮಕಾಲಿಕ ಅನುವಾದ

6 ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಸಹೋದರರೂ, ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹಮಾಡಿದ್ದಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗುತ್ತಾರೆ; ಒಳ್ಳೆಯ ಮಾತನಾಡಿದರೂ ಇವರನ್ನು ನಂಬಬೇಡ” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಸಹೋದರರೂ ನಿನ್ನ ತಂದೆಯ ಮನೆಯವರೂ ನಿನಗೆ ದ್ರೋಹ ಮಾಡಿರುತ್ತಾರೆ. ಇವರೇ ನಿನ್ನ ಬೆನ್ನಟ್ಟುತ್ತಾ ಕೂಗಿರುತ್ತಾರೆ; ಒಳ್ಳೇ ಮಾತಾಡಿದರೂ ಇವರನ್ನು ನಂಬಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಈ ಜನರು ನಿನ್ನ ಸ್ವಂತ ಸಹೋದರರಾಗಿದ್ದಾರೆ. ನಿನ್ನ ಸ್ವಂತ ಕುಟುಂಬದ ಜನರೇ ನಿನ್ನ ವಿರುದ್ಧ ಕೂಗಾಡುತ್ತಾ ಸಂಚು ಮಾಡುತ್ತಿದ್ದಾರೆ. ಅವರು ನಿನ್ನೊಡನೆ ಸ್ನೇಹಿತರಂತೆ ಮಾತನಾಡಿದರೂ ಅವರನ್ನು ನಂಬಬೇಡ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:6
25 ತಿಳಿವುಗಳ ಹೋಲಿಕೆ  

ಸವಿಮಾತನ್ನಾಡಿದರೆ ಅವನನ್ನು ನಂಬಬೇಡ; ಏಕೆಂದರೆ ಅವನ ಹೃದಯದಲ್ಲಿ ಏಳು ಅಸಹ್ಯ ಕಾರ್ಯಗಳಿವೆ.


“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ. ಯಾವ ಸಹೋದರನಲ್ಲಾದರೂ ನಂಬಿಕೆ ಇಡಬೇಡಿರಿ. ಏಕೆಂದರೆ ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸ ಮಾಡುವರು; ನೆರೆಯವರೆಲ್ಲರೂ ಚಾಡಿ ಹೇಳುತ್ತಾ ತಿರುಗಾಡುವರು.


ಪ್ರತಿಯೊಬ್ಬರು ತಮ್ಮ ನೆರೆಯವರ ಸಂಗಡ ಸುಳ್ಳಾಡುತ್ತಾರೆ; ಅವರು ತಮ್ಮ ತುಟಿಯಿಂದ ಹೊಗಳಿ, ಹೃದಯದಲ್ಲಿ ವಂಚನೆಯನ್ನು ಮಾತನಾಡುತ್ತಾರೆ.


“ಸಹೋದರನು ತನ್ನ ಸಹೋದರನನ್ನೂ, ತಂದೆಯು ಮಗನನ್ನೂ ಮರಣಕ್ಕೆ ಒಪ್ಪಿಸುವರು. ಮಕ್ಕಳು ತಮ್ಮ ತಂದೆತಾಯಿಗಳಿಗೆ ವಿರೋಧವಾಗಿ ಎದ್ದು ಅವರನ್ನು ಕೊಲ್ಲಿಸುವರು.


ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.”


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ನನ್ನ ಸಹೋದರರಿಗೆ ಅನ್ಯನಾಗಿದ್ದೇನೆ. ನನ್ನ ಒಡಹುಟ್ಟಿದವರಿಗೇ ಪರಕೀಯನಾಗಿದ್ದೇನೆ.


ಆದರೆ ನನ್ನ ಸಹೋದರರಾದರೋ, ಉಕ್ಕಿ ಹರಿಯುವ ತೊರೆಯಂತೆಯೂ, ಬತ್ತಿದ ಹಳ್ಳದಂತೆಯೂ ಅಪನಂಬಿಗಸ್ತರಾಗಿದ್ದಾರೆ.


ಏಕೆಂದರೆ ಯೇಸುವಿನ ಸಹೋದರರು ಸಹ ಅವರನ್ನು ನಂಬಲಿಲ್ಲ.


ಆಗ ಮುಖ್ಯಯಾಜಕರೂ ನಿಯಮ ಬೋಧಕರೂ ಹಿರಿಯರೂ ತಮ್ಮ ವಿರೋಧವಾಗಿಯೇ ಈ ಸಾಮ್ಯವನ್ನು ಹೇಳಿದರೆಂದು ತಿಳಿದು ಯೇಸುವನ್ನು ಹಿಡಿಯುವುದಕ್ಕೆ ಸಂದರ್ಭ ನೋಡಿದರು. ಆದರೆ ಅವರು ಜನರಿಗೆ ಹೆದರಿ, ಯೇಸುವನ್ನು ಬಿಟ್ಟು ಹೊರಟು ಹೋದರು.


ಯೆಹೋವ ದೇವರು ನನಗೆ ಹೀಗೆ ಹೇಳಿದ್ದಾನೆ: ಸಿಂಹವು, ಪ್ರಾಯದ ಸಿಂಹವು ಬೇಟೆಯ ಮೇಲೆ ಬಿದ್ದು ಗುರುಗುಟ್ಟುತ್ತಿರುವಾಗ, ಕಾವಲುಗಾರನ ಕೂಗನ್ನು ಕೇಳಿ, ಕುರುಬರ ಗುಂಪು ಅದಕ್ಕೆ ವಿರುದ್ಧವಾಗಿ ಕೂಡಿ ಬಂದರೂ, ಹೇಗೆ ಅವರ ಶಬ್ದಕ್ಕೆ ಭಯಪಡದೆ ಇಲ್ಲವೆ ಅವರ ಗದ್ದಲಕ್ಕೆ ಕುಂದಿಹೋಗದೆ ಇರುವುದೋ, ಹಾಗೆಯೇ ಸೇನಾಧೀಶ್ವರ ಯೆಹೋವ ದೇವರು ಚೀಯೋನ್ ಪರ್ವತಕ್ಕೋಸ್ಕರವೂ, ಅದರ ಗುಡ್ಡಕ್ಕೋಸ್ಕರವೂ ಯುದ್ಧಮಾಡಲು ಇಳಿದು ಬರುವರು.


ಪೌಲ, ಸೀಲರಿಗೆ ವಿರೋಧವಾಗಿ ಜನಸಮೂಹವೆಲ್ಲಾ ಕೂಡಿಕೊಂಡಿತು. ನ್ಯಾಯಾಧಿಪತಿಗಳು ಪೌಲ, ಸೀಲರ ಬಟ್ಟೆಗಳನ್ನು ಕಿತ್ತುಹಾಕಿಸಿ ಛಡಿಗಳಿಂದ ಹೊಡೆಯಬೇಕೆಂದು ಆಜ್ಞಾಪಿಸಿದರು.


ಆಹಾ, ಮರುಭೂಮಿಯಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೆಯದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು. ಏಕೆಂದರೆ ಅವರೆಲ್ಲರು ವ್ಯಭಿಚಾರಿಗಳೇ, ವಂಚಕರ ಕೂಟವೇ.


ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತನಾಡರು. ಸುಳ್ಳುಗಳನ್ನು ಹೇಳುವುದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಪಾಪದಿಂದ ತಮ್ಮನ್ನು ಸುಸ್ತಾಗಿಸಿಕೊಳ್ಳುತ್ತಾರೆ.


ಹೊಗಳಿಕೆಯ ಎಲ್ಲಾ ತುಟಿಗಳನ್ನೂ ಗರ್ವ ಮಾತನಾಡುವ ಎಲ್ಲಾ ನಾಲಿಗೆಯನ್ನೂ ಯೆಹೋವ ದೇವರು ಮೌನವಾಗಿರಿಸಲಿ.


ನೀನು ತಿಂದ ಸ್ವಲ್ಪ ತುತ್ತನ್ನು ಕಕ್ಕಿಬಿಡುವೆ; ನಿನ್ನ ಸವಿಮಾತುಗಳೆಲ್ಲಾ ವ್ಯರ್ಥವೇ.


“ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವುದಿಲ್ಲ. ಏಕೆಂದರೆ ಅವರು ಒಂದು ಪಾಪದಿಂದ ಇನ್ನೊಂದು ಪಾಪಕ್ಕೆ ಹೋಗುತ್ತಾ, ನನ್ನನ್ನು ಅರಿಯದೆ ಇದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು