ಯೆರೆಮೀಯ 13:10 - ಕನ್ನಡ ಸಮಕಾಲಿಕ ಅನುವಾದ10 ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈ ದುಷ್ಟಜನರು ನನ್ನ ಮಾತುಗಳನ್ನು ಕೇಳಲೊಲ್ಲರು. ತಮ್ಮ ಹೃದಯದ ಒರಟುತನದಂತೆ ನಡೆದುಬರುತ್ತಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸಿ, ಪೂಜಿಸುತ್ತಿದ್ದಾರೆ. ಇವರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಹಟದಂತೆ ನಡೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಾಟಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು. ಅಧ್ಯಾಯವನ್ನು ನೋಡಿ |
ಇದಲ್ಲದೆ, ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿರಂತರವಾಗಿ ಕಳುಹಿಸುತ್ತಾ ಬಂದೆ. “ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ, ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ. ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸದಿರಿ. ಹಾಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಜರಿಗೂ ಅನುಗ್ರಹಿಸಿದ ನಾಡಿನಲ್ಲಿ ವಾಸಿಸುವಿರಿ ಎಂದು ಅವರ ಮುಖಾಂತರ ಎಚ್ಚರಿಸಿದೆ.” ಆದರೆ ನೀವು ಕೇಳಲಿಲ್ಲ. ಕಿವಿಗೊಡಲೂ ಇಲ್ಲ.