ಯೆರೆಮೀಯ 13:11 - ಕನ್ನಡ ಸಮಕಾಲಿಕ ಅನುವಾದ11 ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಮಸ್ತ ಇಸ್ರಾಯೇಲ್ ವಂಶವೂ ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರುವಾಸಿಯೂ ಸ್ತೋತ್ರವೂ ಮಹಿಮೆಯೂ ಆಗಿರಲೆಂದು ನಡುಕಟ್ಟು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳಲೊಲ್ಲದೆ ಹೋದರು ಎಂದು ಯೆಹೋವನು ಅನ್ನುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.” ಅಧ್ಯಾಯವನ್ನು ನೋಡಿ |