ಯೆರೆಮೀಯ 13:13 - ಕನ್ನಡ ಸಮಕಾಲಿಕ ಅನುವಾದ13 ಆಗ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ಇಗೋ, ನಾನು ಈ ದೇಶದ ನಿವಾಸಿಗಳನ್ನೆಲ್ಲಾ ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ನಿವಾಸಿಗಳೆಲ್ಲರನ್ನೂ ಅಮಲಿನಿಂದ ತುಂಬಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ನೀನು ಅವರಿಗೆ - ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿ : ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಜೆರುಸಲೇಮಿನ ಎಲ್ಲ ನಿವಾಸಿಗಳನ್ನೂ, ಅಂತು ನಾಡಿನ ಜನರೆಲ್ಲರನ್ನೂ ಅಮಲಿನಿಂದ ಮತ್ತರಾಗುವಂತೆ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆಗ ನೀನು ಅವರಿಗೆ - ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ ಯಾಜಕರನ್ನೂ ಪ್ರವಾದಿಗಳನ್ನೂ ಯೆರೂಸಲೇವಿುನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ ನಾನು ಅಮಲಿನಿಂದ ತುಂಬಿಸಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ನೀನು ಅವರಿಗೆ, ‘ಯೆಹೋವನು ಹೀಗೆ ಹೇಳುತ್ತಾನೆ ಎಂದು ಹೇಳು. ಈ ಪ್ರದೇಶದಲ್ಲಿ ವಾಸಮಾಡುವ ಪ್ರತಿಯೊಬ್ಬ ಮನುಷ್ಯನನ್ನು ಕುಡಿದು ಮತ್ತನಾದವನಂತೆ ಅಸಹಾಯಕನನ್ನಾಗಿ ಮಾಡುತ್ತೇನೆ. ನಾನು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ರಾಜರ ಬಗ್ಗೆ ಹೇಳುತ್ತಿದ್ದೇನೆ. ನಾನು ಯಾಜಕರ, ಪ್ರವಾದಿಗಳ ಮತ್ತು ಜೆರುಸಲೇಮಿನಲ್ಲಿ ವಾಸಿಸುವ ಎಲ್ಲಾ ಜನರ ಬಗ್ಗೆಯೂ ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿ |