Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:18 - ಕನ್ನಡ ಸಮಕಾಲಿಕ ಅನುವಾದ

18 ರಾಜನಿಗೂ ರಾಜಮಾತೆಗೂ ಹೀಗೆ ಹೇಳಿರಿ, “ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಸರ್ವೇಶ್ವರ ನನಗೆ ಹೀಗೆಂದರು : “ರಾಜನಿಗೂ ರಾಜಮಾತೆಗೂ ಈ ವರ್ತಮಾನವನ್ನು ತಿಳಿಸು - ‘ನೀವು ಇಳಿದುಬಂದು ನೆಲದಲ್ಲಿ ಕುಳಿತುಕೊಳ್ಳಿ. ನಿಮ್ಮ ಚೆಲುವಾದ ಕಿರೀಟ ಬಿದ್ದುಹೋಗಿದೆ ತಲೆಯಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ರಾಜನಿಗೂ ರಾಜಮಾತೆಗೂ - ನೆಲದಲ್ಲಿ ಕೂತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಈ ಸಂಗತಿಗಳನ್ನು ರಾಜನಿಗೂ ರಾಣಿಗೂ ಹೇಳಿರಿ: “ನಿಮ್ಮ ಸಿಂಹಾಸನಗಳಿಂದ ಕೆಳಗಿಳಿದು ಬನ್ನಿ. ನಿಮ್ಮ ಸುಂದರವಾದ ಕಿರೀಟಗಳು ನಿಮ್ಮ ತಲೆಯಿಂದ ಉರುಳಿ ಕೆಳಗೆ ಬಿದ್ದಿವೆ” ಎಂದು ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:18
30 ತಿಳಿವುಗಳ ಹೋಲಿಕೆ  

ನಿನ್ನನ್ನೂ, ನಿನ್ನ ಹೆತ್ತ ತಾಯಿಯನ್ನೂ ನೀವು ಹುಟ್ಟದಿರುವ ಬೇರೆ ದೇಶದಲ್ಲಿ ಹಾಕಿಬಿಡುವೆನು. ನೀವು ಅಲ್ಲೇ ಸಾಯುವಿರಿ.


ಆಗ ಯೆಹೂದದ ಅರಸನಾದ ಯೆಹೋಯಾಖೀನನೂ, ಅವನ ತಾಯಿಯೂ, ಅವನ ಸೇವಕರೂ, ಅವನ ಪ್ರಧಾನರೂ, ಅವನ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಗೆ ಶರಣಾದರು. ಬಾಬಿಲೋನಿನ ಅರಸನು ತನ್ನ ಆಳಿಕೆಯ ಎಂಟನೆಯ ವರ್ಷದಲ್ಲಿ ಯೆಹೋಯಾಕೀನನನ್ನು ಸೆರೆಹಿಡಿದನು.


ನೆಬೂಕದ್ನೆಚ್ಚರನು ಯೆಹೋಯಾಖೀನನನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದನು. ಅರಸನ ತಾಯಿಯನ್ನೂ, ಅರಸನ ಹೆಂಡತಿಯರನ್ನೂ, ಅವನ ಅಧಿಕಾರಿಗಳನ್ನೂ, ದೇಶದ ಪ್ರತಿಷ್ಠಿತರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆಯಾಗಿ ಒಯ್ದನು.


ಇದಲ್ಲದೆ ಅವನ ಪ್ರಾರ್ಥನೆಯೂ, ಅವನು ದೇವರಿಗೆ ಭಿನ್ನವಿಸಿದ್ದೂ, ಅವನ ಸಮಸ್ತ ಪಾಪವೂ, ಅವನ ಅಪನಂಬಿಕೆಯೂ, ಅವನು ತಗ್ಗಿಸಿಕೊಳ್ಳುವುದಕ್ಕಿಂತ ಮುಂಚೆ ಕಟ್ಟಿಸಿದ ಉನ್ನತ ಸ್ಥಳಗಳನ್ನೂ, ನಿಲ್ಲಿಸಿದ ಅಶೇರ ಸ್ತಂಭಗಳೂ, ಕೆತ್ತಿಸಿದ ವಿಗ್ರಹಗಳೂ, ಸ್ಥಾಪಿಸಿದ ಸ್ಥಳಗಳೂ ಪ್ರವಾದಿಗಳ ದಾಖಲೆಗಳಲ್ಲಿ ಬರೆದಿರುತ್ತವೆ.


ಬಾಬಿಲೋನಿನ ಪುತ್ರಿಯಾದ ಕನ್ನಿಕೆಯೇ, ಕೆಳಕ್ಕೆ ಇಳಿದುಬಂದು, ಧೂಳಿನಲ್ಲಿ ಕುಳಿತುಕೋ! ಕಸ್ದೀಯರ ಪುತ್ರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಏಕೆಂದರೆ ಇನ್ನು ಮೇಲೆ ನಿನ್ನನ್ನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯುವುದಿಲ್ಲ.


ಮನಸ್ಸೆಯು ಬಾಧೆಯಲ್ಲಿರುವಾಗ ತನ್ನ ದೇವರಾದ ಯೆಹೋವ ದೇವರನ್ನು ಬೇಡಿಕೊಂಡನು ಮತ್ತು ತನ್ನ ಪಿತೃಗಳ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಪ್ರಾರ್ಥನೆಮಾಡಿದನು.


ಹೀಗಿರುವುದರಿಂದ ದೇವರ ಪರಾಕ್ರಮವುಳ್ಳ ಹಸ್ತದ ಕೆಳಗೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ, ಆಗ ದೇವರು ಸಕಾಲದಲ್ಲಿ ನಿಮ್ಮನ್ನು ಮೇಲಕ್ಕೆತ್ತುವರು.


ಕರ್ತದೇವರ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ. ಆಗ ಅವರು ನಿಮ್ಮನ್ನು ಮೇಲಕ್ಕೆತ್ತುವರು.


ಯಾರು ಈ ಚಿಕ್ಕಮಗುವಿನಂತೆ ತಮ್ಮನ್ನು ತಾವು ತಗ್ಗಿಸಿಕೊಳ್ಳುವರೋ ಅವರೇ ಪರಲೋಕ ರಾಜ್ಯದಲ್ಲಿ ಅತಿ ದೊಡ್ಡವರಾಗಿರುವರು.


ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ, ಅವನು ತನ್ನ ಸಿಂಹಾಸನದಿಂದ ಎದ್ದು, ತನ್ನ ನಿಲುವಂಗಿಯನ್ನು ತೆಗೆದಿಟ್ಟು, ಗೋಣಿತಟ್ಟನ್ನು ಉಟ್ಟುಕೊಂಡು, ಬೂದಿಯಲ್ಲಿ ಕುಳಿತುಕೊಂಡನು.


ಚೀಯೋನ್ ಬಾಗಿಲುಗಳಲ್ಲಿ ಪ್ರಲಾಪವು, ದುಃಖವು ತುಂಬಿರುವುದು. ಅವಳು ನಿರ್ಗತಿಕಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ಆಮೋನನು ತನ್ನ ತಂದೆ ಮನಸ್ಸೆಯು ತನ್ನನ್ನು ತಗ್ಗಿಸಿಕೊಂಡ ಹಾಗೆ, ಯೆಹೋವ ದೇವರ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ. ಆದರೆ ಆಮೋನನು ಅಧಿಕವಾಗಿ ಅಪರಾಧ ಮಾಡಿದನು.


ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ, “ಹಿಬ್ರಿಯರ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನನ್ನ ಸನ್ನಿಧಿಯಲ್ಲಿ ನೀನು ಎಷ್ಟು ಕಾಲ ತಲೆ ತಗ್ಗಿಸದಿರುವೆ? ನನ್ನನ್ನು ಆರಾಧಿಸುವಂತೆ ನನ್ನ ಜನರನ್ನು ಹೋಗಗೊಡಿಸು.


ಚೀಯೋನಿನ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಶಬ್ದವಾಗಿದ್ದಾರೆ. ಅವರು ತಮ್ಮ ತಲೆಗಳ ಮೇಲೆ ಧೂಳು ಹಾಕಿಕೊಂಡಿದ್ದಾರೆ. ಅವರು ಗೋಣಿತಟ್ಟನ್ನು ಸುತ್ತಿಕೊಂಡಿದ್ದಾರೆ. ಯೆರೂಸಲೇಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬಗ್ಗಿಸಿಕೊಂಡಿದ್ದಾರೆ.


ನಯವಾದ ನಾರಿನಿಂದ ಮಾಡಿದ ಮುಂಡಾಸವನ್ನೂ ಸೌಂದರ್ಯವುಳ್ಳ ನಾರಿನ ಕುಲಾವಿಗಳನ್ನೂ ಹೊಸೆದ ನಯವಾದ ನಾರುಗಳಿಂದ ಮಾಡಿದ ಒಳಉಡುಪುಗಳನ್ನೂ


ಐಶ್ವರ್ಯವು ಶಾಶ್ವತವಲ್ಲ; ಕಿರೀಟವು ತಲತಲಾಂತರಕ್ಕೂ ಇರುವುದಿಲ್ಲ.


ಕಂಠ ವಸ್ತ್ರ, ಕಾಲ ಸರಪಣಿ, ಡಾಬು, ಸುಗಂಧ ಭರಣಿ, ತಾಯಿತಿ,


ಅರಸನಾದ ಯೆಕೊನ್ಯನೂ ರಾಜಮಾತೆಯೂ ಕಂಚುಕಿಗಳೂ ಯೆಹೂದದ ಯೆರೂಸಲೇಮಿನ ಪ್ರಧಾನರೂ ಬಡಿಗೆಯವರೂ ಕಮ್ಮಾರರೂ ಯೆರೂಸಲೇಮನ್ನು ಬಿಟ್ಟುಹೋದ ಮೇಲೆ ಈ ಪತ್ರವನ್ನು ಬರೆದನು.


ಆಗ ಅವರು ಆ ವಾಕ್ಯಗಳನ್ನೆಲ್ಲಾ ಕೇಳಿದ ಮೇಲೆ ಒಬ್ಬರಿಗೊಬ್ಬರು ಹೆದರಿಕೊಂಡು, “ನಾವು ನಿಶ್ಚಯವಾಗಿ ಈ ವಾಕ್ಯಗಳನ್ನೆಲ್ಲಾ ಅರಸನಿಗೆ ತಿಳಿಸುತ್ತೇವೆ,” ಎಂದು ಬಾರೂಕನಿಗೆ ಹೇಳಿದರು.


ಚೀಯೋನ್ ಪುತ್ರಿಯ ಎಲ್ಲಾ ವೈಭವವು ಅವಳನ್ನು ಬಿಟ್ಟುಹೋಯಿತು. ಅವಳ ಪ್ರಧಾನರು ಹುಲ್ಲುಗಾವಲು ಕಾಣದ ಜಿಂಕೆಗಳ ಹಾಗಾದರು, ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಓಡಿಹೋದರು.


ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”


ಕಿರೀಟವು ನಮ್ಮ ತಲೆಯ ಮೇಲಿನಿಂದ ಬಿದ್ದುಹೋಯಿತು. ಅಯ್ಯೋ, ನಾವು ಪಾಪಮಾಡಿದ್ದೇವೆ.


ನಿನ್ನ ಮೂಗಿಗೆ ಮೂಗುತಿಯನ್ನೂ, ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ, ನಿನ್ನ ತಲೆಯ ಮೇಲೆ ಸುಂದರ ಕಿರೀಟವನ್ನೂ ಇಟ್ಟೆನು.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಮೊದಲಿದ್ದ ಹಾಗೆಯೇ ಇರುವುದಿಲ್ಲ; ತಗ್ಗಿಸಿಕೊಂಡವನನ್ನು ಹೆಚ್ಚಿಸಿ, ಹೆಚ್ಚಿಸಿಕೊಂಡವನನ್ನು ತಗ್ಗಿಸು.


ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖ ತೋರಿಸಬೇಡ. ಮುಂಡಾಸವನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ನಿನ್ನ ಮೀಸೆ ಮತ್ತು ಗಡ್ಡವನ್ನು ಮುಚ್ಚಿಕೊಳ್ಳಬೇಡ, ದುಃಖಿಸುವವರ ಸಾಂಪ್ರದಾಯಿಕ ಆಹಾರವನ್ನು ತಿನ್ನಬೇಡಿರಿ.”


ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.


ಅವರ ತಲೆಗಳ ಮೇಲೆ ನಾರಿನ ಮುಂಡಾಸಗಳೂ, ಅವರ ಸೊಂಟಗಳ ಮೇಲೆ ನಾರಿನ ಒಳಉಡುಪುಗಳೂ ಇರಬೇಕು. ಅವರು ಬೆವರು ಬರುವಂಥವುಗಳನ್ನು ಕಟ್ಟಿಕೊಳ್ಳಬಾರದು.


ಆದರೆ ಅವನ ಹೃದಯವು ಹೆಮ್ಮೆಯಿಂದ ಉಬ್ಬಿಕೊಂಡಾಗ ಮತ್ತು ಅವನ ಹೃದಯವು ಗಟ್ಟಿಯಾದಾಗ, ಅವನನ್ನು ಸಿಂಹಾಸನದಿಂದ ತೆಗೆದುಹಾಕಲಾಯಿತು ಮತ್ತು ಅವನ ಪ್ರತಿಷ್ಠೆಯನ್ನು ಕಿತ್ತುಕೊಳ್ಳಲಾಯಿತು.


“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು