ಯೆರೆಮೀಯ 13:21 - ಕನ್ನಡ ಸಮಕಾಲಿಕ ಅನುವಾದ21 ನಿಮ್ಮ ವಿಶೇಷ ಮಿತ್ರರಾಗಿ ನೀವು ಬೆಳೆಸಿದವರನ್ನು ಯೆಹೋವ ದೇವರು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳೋ ಎಂಬಂತೆ ಹಿಡಿಯುವುದಲ್ಲವೆ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿನ್ನೊಡನೆ ಗೆಳೆಯರಂತೆ ಬಾಳಲು ನೀನೇ ಪಳಗಿಸಿದವರನ್ನು ನಿನಗೆ ಒಡೆಯರನ್ನಾಗಿ ನಾನು ನೇಮಿಸುವಾಗ ಏನು ಹೇಳುವೆ? ಹೆರುವವಳಿಗೆ ಬರುವಂಥ ವೇದನೆ ಆಗ ನಿನಗೆ ಬರದೆ ಇರುವುದೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ನಿನಗೆ ಆ ಮಂದೆಯ ಲೆಕ್ಕವನ್ನೊಪ್ಪಿಸು ಎಂದು ಕೇಳಿದರೆ ಏನು ಹೇಳುವೆ? ಜನರಿಗೆ ದೇವರ ಬಗ್ಗೆ ತಿಳಿಸುವದು ನಿನ್ನ ಕರ್ತವ್ಯವಾಗಿತ್ತು. ನಿನ್ನ ನಾಯಕರು ಜನರಿಗೆ ಮಾರ್ಗದರ್ಶನ ಮಾಡಬೇಕಾಗಿತ್ತು. ಆದರೆ ಅವರು ತಮ್ಮ ಕೆಲಸವನ್ನು ಮಾಡಲಿಲ್ಲ. ಆದ್ದರಿಂದ ನಿನಗೆ ಹೆಚ್ಚಿನ ನೋವು ಮತ್ತು ಕಷ್ಟಗಳು ಉಂಟಾಗುವವು. ಪ್ರಸವವೇದನೆಯಂಥ ನೋವು ನಿನಗಾಗುವುದು. ಅಧ್ಯಾಯವನ್ನು ನೋಡಿ |
ಆಗ ನೀನು ನಿರ್ಜನನಾದಾಗ ಏನು ಮಾಡುವೆ? ನೀನು ಕಡುಕೆಂಪು ಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡರೇನು? ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು? ನೀವು ವ್ಯರ್ಥವಾಗಿ ನಿನ್ನನ್ನು ಅಲಂಕರಿಸಿಕೊಳ್ಳುತ್ತಿ. ನಿನ್ನ ಪ್ರೇಮಿಗಳು ನಿನ್ನನ್ನು ತಿರಸ್ಕರಿಸುತ್ತಾರೆ; ಅವರು ನಿನ್ನನ್ನು ಕೊಲ್ಲಲು ಬಯಸುತ್ತಾರೆ.