ಯೆರೆಮೀಯ 13:23 - ಕನ್ನಡ ಸಮಕಾಲಿಕ ಅನುವಾದ23 ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ. ಅಧ್ಯಾಯವನ್ನು ನೋಡಿ |