Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:27 - ಕನ್ನಡ ಸಮಕಾಲಿಕ ಅನುವಾದ

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:27
32 ತಿಳಿವುಗಳ ಹೋಲಿಕೆ  

ಸಮಾರ್ಯವೇ, ನಿನ್ನ ಬಸವ ವಿಗ್ರಹವನ್ನು ಬಿಸಾಡಿಬಿಡು. ನನ್ನ ಕೋಪವು ಅವರ ಮೇಲೆ ಉರಿಯುತ್ತದೆ. ಅವರು ಎಷ್ಟು ಕಾಲ ಶುದ್ಧತೆಗೆ ಅಸಮರ್ಥರಾಗಿರುತ್ತಾರೆ?


“ ‘ನಿನ್ನ ಅಶುದ್ಧತ್ವವು ದುಷ್ಕರ್ಮವುಳ್ಳದ್ದು. ನಾನು ನಿನ್ನನ್ನು ಪರಿಶುದ್ಧಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರದಿಂದ ಇನ್ನು ಶುದ್ಧವಾಗುವುದಿಲ್ಲ.


ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಇನ್ನೊಂದು ವಿಷಯದಲ್ಲಿ, ಇಸ್ರಾಯೇಲರ ಮತ್ತೊಂದು ಕೋರಿಕೆಯನ್ನು ಆಲಿಸಿ ನೆರವೇರಿಸುವೆನು. ನಾನು ಅವರನ್ನು ಮನುಷ್ಯರಲ್ಲಿ ಮಂದೆಯಂತೆ ಹೆಚ್ಚಿಸುವೆನು.


“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ. ಕುಚೋದ್ಯಗಾರರೇ ಎಷ್ಟು ಕಾಲ ಕುಚೋದ್ಯಗಾರರಾಗಿರಲು ಇಚ್ಛಿಸುವಿರಿ? ಜ್ಞಾನಹೀನರೇ, ಎಷ್ಟು ಕಾಲ ಪರಿಜ್ಞಾನವನ್ನು ಹಗೆ ಮಾಡುವಿರಿ?


ನಾನು ನೋಡಲಾಗಿ, ಆಕಾಶದ ಮಧ್ಯದಲ್ಲಿ ಹಾರುತ್ತಿರುವ ಒಂದು ಗರುಡ ಪಕ್ಷಿ ಮಹಾಧ್ವನಿಯಿಂದ: ಇನ್ನೂ ಊದಲಿರುವ ಮೂವರು ದೂತರ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿಗಳಿಗೆ, “ಅಯ್ಯೋ! ಅಯ್ಯೋ! ಅಯ್ಯೋ!” ಎಂದಿತು.


ವ್ಯಭಿಚಾರಿಗಳೇ, ಇಹಲೋಕ ಸ್ನೇಹವು ದೇವರೊಂದಿಗಿರುವ ಶತ್ರುತ್ವ ಎಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರಬೇಕೆಂಬುವವನು ದೇವರಿಗೆ ಶತ್ರುವಾಗಿದ್ದಾನೆ.


ನಾನು ತಿರುಗಿ ಬಂದಾಗ, ಹಿಂದೆ ನಿಮ್ಮಲ್ಲಿ ಅಶುದ್ಧತ್ವ, ಲೈಂಗಿಕ ಅನೈತಿಕತೆ, ಪೋಕರಿತನ ಮುಂತಾದ ಪಾಪಗಳನ್ನು ಮಾಡಿ ಪಶ್ಚಾತ್ತಾಪ ಪಡದಿರುವ ಅನೇಕರ ವಿಷಯವಾಗಿ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಬಿಡುವನು ಎಂದು ದುಃಖಪಡಬೇಕಾಗಿರುವುದರಿಂದ ನಾನು ಭಯಪಡುತ್ತೇನೆ.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


“ಖೊರಾಜಿನೇ, ನಿನಗೆ ಕಷ್ಟ! ಬೇತ್ಸಾಯಿದವೇ, ನಿನಗೆ ಕಷ್ಟ! ಏಕೆಂದರೆ ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ಟೈರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅಲ್ಲಿಯವರು ಬಹಳ ಕಾಲದ ಹಿಂದೆಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ದೇವರ ಕಡೆ ತಿರುಗಿಕೊಳ್ಳುತ್ತಿದ್ದರು.


ಅಸಹ್ಯವಾದ, ಮೈಲಿಗೆಯಾದ, ಶ್ರಮೆಪಡಿಸುವ ಪಟ್ಟಣಕ್ಕೆ ಕಷ್ಟ!


ಯೆಹೋವ ದೇವರು ಹೋಶೇಯನೊಂದಿಗೆ ಮಾತನಾಡಲು ಪ್ರಾರಂಭಿಸಿದಾಗ, ಯೆಹೋವ ದೇವರು ಹೋಶೇಯನಿಗೆ, “ನೀನು ಹೋಗಿ ವ್ಯಭಿಚಾರಿಣಿಯೊಬ್ಬಳನ್ನು ಮದುವೆ ಮಾಡಿಕೋ ಮತ್ತು ಆಕೆಗೆ ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ ಈ ದೇಶವು ನನ್ನನ್ನು ತೊರೆದುಬಿಟ್ಟು, ವ್ಯಭಿಚಾರಿಣಿಯಾದ ಹೆಂಡತಿಯಂತೆ ಯೆಹೋವ ದೇವರಿಗೆ ದ್ರೋಹ ಬಗೆದಿದೆ,” ಎಂದು ಹೇಳಿದರು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ, ನಿಮ್ಮ ಎಲ್ಲಾ ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು.


“ ‘ಆದಕಾರಣ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: “ ‘ರಕ್ತಮಯವಾದ ಆ ಪಟ್ಟಣಕ್ಕೆ ಕಷ್ಟ! ಯಾವುದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವುದೋ ಆ ಹಂಡೆಗೆ ಕಷ್ಟ! ಅದರಿಂದ ತುಂಡುತುಂಡಾಗಿ ಹೊರಗೆ ತೆಗೆ. ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶದಲ್ಲಿ ನಾನು ಅವರನ್ನು ಬರಮಾಡಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಮರಗಳನ್ನೂ ನೋಡಿ, ಅಲ್ಲಿ ತಮ್ಮ ಬಲಿಗಳನ್ನರ್ಪಿಸಿ ಸುವಾಸನೆಗಳನ್ನಿಟ್ಟು ಪಾನದ್ರವ್ಯವನ್ನು ಸುರಿದರು.


ಆ ಸುರುಳಿಯನ್ನು ನನ್ನೆದುರಿನಲ್ಲೇ ಬಿಚ್ಚಿದರು. ಅದರ ಎರಡು ಬದಿಗಳಲ್ಲಿಯೂ ಪ್ರಲಾಪ, ಶೋಕ ಮತ್ತು ಶಾಪದ ಪದಗಳನ್ನು ಬರೆಯಲಾಗಿತ್ತು.


ಮಹೋನ್ನತ ಪರ್ವತದಲ್ಲಿ ನೀನು ಹಾಸಿಗೆಯನ್ನು ಹಾಕಿಕೊಂಡಿದ್ದೀಯೆ, ಬಲಿಯನ್ನರ್ಪಿಸಲು ಆ ಬೆಟ್ಟವನ್ನೇರಿದ್ದೀ.


ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.


ಯೆಹೋವ ದೇವರು ಅರಸನಾದ ಯೋಷೀಯನ ದಿವಸಗಳಲ್ಲಿ ನನಗೆ ಹೇಳಿದ್ದೇನೆಂದರೆ: “ಭ್ರಷ್ಟಳಾದ ಇಸ್ರಾಯೇಲು ಮಾಡಿದ್ದನ್ನು ನೀನು ನೋಡಿದೆಯೋ? ಅವಳು ಒಂದೊಂದು ಎತ್ತರವಾದ ಬೆಟ್ಟದ ಮೇಲೆಯೂ, ಒಂದೊಂದು ಹಸುರಾದ ಮರದ ಕೆಳಗೆಯೂ ಹೋಗಿ, ಅಲ್ಲಿ ವೇಶ್ಯೆತನ ಮಾಡಿದ್ದಾಳೆ.


ಜನರಲ್ಲಿ ಬುದ್ಧಿಹೀನರೇ, ನೀವು ಗ್ರಹಿಸಿರಿ. ಮೂರ್ಖರೇ, ಯಾವಾಗ ಬುದ್ಧಿವಂತರಾಗುವಿರಿ?


“ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”


“ ‘ನಿನಗೆ ಕಷ್ಟ! ಕಷ್ಟ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಅವನ ಎಲ್ಲಾ ದುಷ್ಟತನದ ಹೊರತಾಗಿ,


ಅದರ ಕಲ್ಮಶವು ನನ್ನಲ್ಲಿ ಆಯಾಸವನ್ನುಂಟು ಮಾಡೀತೆ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ. ಅದು ಬೆಂಕಿಯಿಂದಲೂ ನೀಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು