Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:7 - ಕನ್ನಡ ಸಮಕಾಲಿಕ ಅನುವಾದ

7 ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಹುಡುಕಿ, ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆಗ ನಾನು ಯೂಫ್ರೆಟಿಸ್ ನದಿಗೆ ಹೋಗಿ ಹುಡುಕಿ ನಾನು ಬಚ್ಚಿಟ್ಟ ಸ್ಥಳದಿಂದ ಆ ನಡುಕಟ್ಟನ್ನು ತೆಗೆದೆ. ಆದರೆ ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ನಾನು ಯೂಫ್ರೇಟೀಸ್ ನದಿಗೆ ಹೋಗಿ ಅಗೆದು ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು; ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಪೆರಾತ್‌ಗೆ ಹೋದೆ ಮತ್ತು ನಡುಪಟ್ಟಿಯನ್ನು ಬಚ್ಚಿಟ್ಟ ಬೆಟ್ಟದ ಸಂದಿನಿಂದ ಹೊರತೆಗೆದೆ. ಆದರೆ ಆ ನಡುಪಟ್ಟಿ ಹಾಳಾಗಿಹೋಗಿತ್ತು. ನಾನು ಅದನ್ನು ಧರಿಸಲಾಗಲಿಲ್ಲ. ಅದು ಯಾವುದಕ್ಕೂ ಪ್ರಯೋಜನವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:7
10 ತಿಳಿವುಗಳ ಹೋಲಿಕೆ  

ಎಲ್ಲರೂ ದಾರಿತಪ್ಪಿ ಹೋಗಿದ್ದಾರೆ, ಎಲ್ಲರೂ ಕೆಲಸಕ್ಕೆ ಬಾರದವರಾಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ ಒಬ್ಬನಾದರೂ ಇಲ್ಲ.”


ನಾವೆಲ್ಲರೂ ಅಶುದ್ಧನ ಹಾಗೆ ಇದ್ದೇವೆ. ನಮ್ಮ ನೀತಿ ಕಾರ್ಯಗಳೆಲ್ಲಾ ಮೈಲಿಗೆ ವಸ್ತ್ರದ ಹಾಗೆ ಇವೆ. ನಾವೆಲ್ಲರೂ ಎಲೆಯ ಹಾಗೆ ಒಣಗಿಹೋಗಿದ್ದೇವೆ. ನಮ್ಮ ಪಾಪಗಳು ಗಾಳಿಯಂತೆ ನಮ್ಮನ್ನು ಬಡಿದುಕೊಂಡು ಹೋಗಿವೆ.


ಅವನು ಮೊದಲು ನಿನಗೆ ಅಪ್ರಯೋಜಕನಾಗಿದ್ದನು. ಈಗ ನಿನಗೂ ನನಗೂ ಪ್ರಯೋಜಕನಾಗಿದ್ದಾನೆ.


ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡೆದುಕೊಂಡು, ಬೇರೆ ದೇವರುಗಳನ್ನು ಸೇವಿಸುವುದಕ್ಕೂ, ಅವುಗಳನ್ನು ಆರಾಧಿಸುವುದಕ್ಕೂ ಹಿಂಬಾಲಿಸುವ ಈ ದುಷ್ಟಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.


ಬಹು ದಿನಗಳ ಮೇಲೆ ಯೆಹೋವ ದೇವರು ನನಗೆ, “ಹೊರಡು, ಯೂಫ್ರೇಟೀಸ್ ನದಿಗೆ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ,” ಎಂದು ಹೇಳಿದರು.


ಆಗ ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನೆಂದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು