Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:10 - ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರು ಈ ಜನರಿಗೆ ಹೀಗೆ ಹೇಳುತ್ತಾರೆ: “ಹೀಗೆ ತಿರುಗಾಡುವುದಕ್ಕೆ ಅವರು ಇಷ್ಟಪಡುತ್ತಾರೆ. ತಮ್ಮ ಕಾಲುಗಳನ್ನು ಹಿಂದೆಗೆಯುವುದಿಲ್ಲ. ಆದ್ದರಿಂದ ಯೆಹೋವ ದೇವರು ಅವರನ್ನು ಅಂಗೀಕರಿಸುವುದಿಲ್ಲ. ಈಗಲೇ ಅವರ ಅಕ್ರಮವನ್ನು ಜ್ಞಾಪಕಮಾಡಿಕೊಳ್ಳುವೆನು. ಅವರ ಪಾಪಗಳಿಗಾಗಿ ಅವರನ್ನು ದಂಡಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ. ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಈ ಜನರನ್ನು ಕುರಿತು ಸರ್ವೇಶ್ವರ ನನಗೆ ಹೇಳಿದ ಮಾತುಗಳು : “ಇವರು ಅಲೆದಾಡಲು ಇಷ್ಟಪಡುವ ಜನರು. ತಮ್ಮ ಕಾಲಿನ ಮೇಲೆ ಹತೋಟಿಯಿಲ್ಲದವರು. ಆದಕಾರಣ ಸರ್ವೇಶ್ವರನಾದ ನಾನು ಇವರನ್ನು ಕರುಣೆಯಿಂದ ನೋಡುವುದಿಲ್ಲ. ಇದೀಗಲೆ ಇವರ ಅಪರಾಧಗಳನ್ನು ನೆನಪಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನು ಈ ಜನರನ್ನು ಕುರಿತು - ಇವರು [ನನ್ನನ್ನು ಪ್ರಯಾಣಿಕನು ಎಂದ] ಹಾಗೆಯೇ ಅಲೆಯುವದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ; ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು ಎಂದು ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೂದದ ಜನರ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: “ಯೆಹೂದದ ಜನರು ನನ್ನಿಂದ ದೂರವಾಗಲು ಮನಃಪೂರ್ವಕವಾಗಿ ಇಚ್ಛಿಸುತ್ತಾರೆ. ಅವರು ಮೊದಲಿಂದಲೂ ಹೀಗೆ ಮಾಡುತ್ತಲೇ ಇದ್ದಾರೆ. ಆದ್ದರಿಂದ ಈಗ ಯೆಹೋವನು ಅವರನ್ನು ಸ್ವಿಕರಿಸುವದಿಲ್ಲ. ಆತನು ಅವರ ದುಷ್ಕೃತ್ಯಗಳನ್ನು ಜ್ಞಾಪಕಕ್ಕೆ ತಂದುಕೊಂಡು ಅವರ ಪಾಪಗಳಿಗಾಗಿ ಅವರನ್ನು ದಂಡಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:10
25 ತಿಳಿವುಗಳ ಹೋಲಿಕೆ  

ಗಿಬೆಯದ ದಿವಸಗಳಲ್ಲಿ ಆದ ಹಾಗೆ ತಮ್ಮನ್ನು ಬಹಳವಾಗಿ ಕೆಡಿಸಿಕೊಂಡಿದ್ದಾರೆ. ಆದ್ದರಿಂದ ಅವರ ಅಕ್ರಮವನ್ನು ಆತನು ಜ್ಞಾಪಕ ಮಾಡಿಕೊಳ್ಳುವನು. ಅವರ ಪಾಪಕ್ಕೆ ತನ್ನ ದಂಡನೆಯನ್ನು ವಿಧಿಸುವನು.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


ನಿಮ್ಮ ವಾಕ್ಯವನ್ನು ಅನುಸರಿಸಬೇಕೆಂದು, ನಾನು ಪ್ರತಿಯೊಂದು ದುರ್ಮಾರ್ಗದಿಂದ ನನ್ನ ಹೆಜ್ಜೆಗಳನ್ನು ಹಿಂದೆಗೆದಿದ್ದೇನೆ.


ನೀವು ನನಗೆ ದಹನಬಲಿಗಳನ್ನೂ ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ, ನಾನು ಅವುಗಳನ್ನು ಅಂಗೀಕರಿಸುವುದಿಲ್ಲ. ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನೂ ನಾನು ಲಕ್ಷಿಸುವುದಿಲ್ಲ.


ಶೆಬದಿಂದ ಸಾಂಬ್ರಾಣಿಯೂ ದೂರದೇಶದಿಂದ ಒಳ್ಳೆಯ ಸುಗಂಧವೂ ನನಗೆ ಬರುವುದು ಏತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚುಗೆಯಾಗಲಿಲ್ಲ. ನಿಮ್ಮ ಬಲಿಗಳು ನನಗೆ ರುಚಿಯಿಲ್ಲ.”


ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು ಮತ್ತು ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ, ಎಂದು ಕರ್ತದೇವರು ನುಡಿಯುತ್ತಾರೆ.”


ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದರನಿಗೂ, ‘ಯೆಹೋವ ದೇವರನ್ನು ಅರಿತುಕೊಳ್ಳಿರಿ,’ ಎಂದು ಬೋಧಿಸಬೇಕಾಗಿಲ್ಲ. ಏಕೆಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ದುಷ್ಕೃತ್ಯಗಳನ್ನು ಕ್ಷಮಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರ ಪಾಪಗಳನ್ನು ಇನ್ನೆಂದಿಗೂ ನನ್ನ ನೆನಪಿಗೆ ತಂದುಕೊಳ್ಳುವುದಿಲ್ಲ.”


ನನ್ನ ಕೋಪದ ಉರಿಯನ್ನು ನಾನು ತೀರಿಸುವುದಿಲ್ಲ. ನಾನು ಎಫ್ರಾಯೀಮನ್ನು ತಿರುಗಿ ನಾಶಮಾಡುವುದಿಲ್ಲ. ಏಕೆಂದರೆ ನಾನು ಮನುಷ್ಯನಲ್ಲ, ದೇವರೇ. ನಿನ್ನ ಮಧ್ಯದಲ್ಲಿ ಪರಿಶುದ್ಧನಾಗಿದ್ದೇನೆ. ನಾನು ಅವರ ಪಟ್ಟಣಗಳ ವಿರುದ್ಧ ಬರುವುದಿಲ್ಲ.


ನನ್ನ ಜನರು ನನ್ನ ಕಡೆಯಿಂದ ಹಿಂಜಾರಬೇಕೆಂದು ತೀರ್ಮಾನಿಸಿದ್ದಾರೆ. ಅವರು ನನ್ನನ್ನು ಸರ್ವೋನ್ನತ ದೇವರು ಎಂದು ಕರೆದರೂ ನಾನು ಅವರನ್ನು ಯಾವುದೇ ರೀತಿಯಲ್ಲಿ ಉನ್ನತೀಕರಿಸುವುದಿಲ್ಲ.


ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ ಹಿಂದಿರುಗದಂತೆ ಏಕೆ ಬಿಟ್ಟು ಹೋಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವುದಕ್ಕೆ ನಿರಾಕರಿಸುತ್ತಾರೆ.


ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು ಏಕೆ ಬಹಳವಾಗಿ ತಿರುಗಾಡುತ್ತೀ? ಅಸ್ಸೀರಿಯದ ನಿಮಿತ್ತ ನಾಚಿಕೆ ಪಟ್ಟ ಹಾಗೆ ಈಜಿಪ್ಟಿನ ನಿಮಿತ್ತವೂ ನಾಚಿಕೆಪಡುವೆ.


ಆಗ ಅವಳು ಎಲೀಯನಿಗೆ, “ದೇವರ ಮನುಷ್ಯನೇ, ನನಗೂ ನಿನಗೂ ಏನು? ನನ್ನ ಅಕ್ರಮವನ್ನು ಜ್ಞಾಪಕಪಡಿಸುವುದಕ್ಕೂ, ನನ್ನ ಮಗನು ಸಾಯುವುದಕ್ಕೂ ನನ್ನ ಬಳಿಗೆ ಬಂದಿಯೋ?” ಎಂದಳು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ ಅಮಾಲೇಕ್ಯರು ಅವರ ಮಾರ್ಗಕ್ಕೆ ಅಡ್ಡಗಟ್ಟಿ ತೊಂದರೆಪಡಿಸಿದರು, ಆದ್ದರಿಂದ ನಾನು ಅವರಿಗೆ ಮುಯ್ಯಿತೀರಿಸುವೆನು.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಇನ್ನು ಅದು ಇಸ್ರಾಯೇಲ್ ವಂಶದವರ ಭರವಸೆಯಾಗದೆ, ಇವರು ಅವರ ಕಡೆಗೆ ನೋಡಿದಾಗ ಪಾಪವನ್ನು ಜ್ಞಾಪಕಕ್ಕೆ ತರುವರು. ಆಗ ನಾನೇ ಸಾರ್ವಭೌಮ ಯೆಹೋವ ದೇವರೆಂದು ಅವರಿಗೆ ತಿಳಿಯುವುದು.’ ”


ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.


ಅವರಿಗೆ ಕಷ್ಟ, ಏಕೆಂದರೆ ಅವರು ನನ್ನನ್ನು ಬಿಟ್ಟು ಹೋಗಿದ್ದಾರೆ. ಅವರು ನಾಶವಾಗಲಿ! ಏಕೆಂದರೆ ಅವರು ನನಗೆ ವಿರುದ್ಧವಾಗಿ ದ್ರೋಹ ಮಾಡಿದ್ದಾರೆ. ನಾನು ಅವರಿಗೆ ವಿಮೋಚನೆ ಮಾಡಿದ್ದರೂ, ಅವರು ನನಗೆ ವಿರುದ್ಧವಾಗಿ ಸುಳ್ಳು ಹೇಳಿದ್ದಾರೆ.


“ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ಆರಿಸಿಕೊಂಡಿದ್ದೇನೆ. ಆದ್ದರಿಂದ ನಾನು ನಿಮ್ಮ ಎಲ್ಲಾ ಪಾಪಗಳಿಗಾಗಿ ಶಿಕ್ಷಿಸುತ್ತೇನೆ.”


ಆದರೆ ಈಗ ನೀನು ಹೋಗಿ, ಜನರನ್ನು ನಿನಗೆ ನಾನು ಹೇಳಿದ ಸ್ಥಳಕ್ಕೆ ಕರೆದುಕೊಂಡು ಹೋಗು. ಇಗೋ, ನನ್ನ ದೂತನು ನಿನ್ನನ್ನು ಮುನ್ನಡೆಸುವನು. ಆದರೂ ನಾನು ವಿಚಾರಿಸುವ ದಿನ ಬಂದಾಗ ಅವರ ಪಾಪಕ್ಕೆ ತಕ್ಕಂತೆ ಅವರನ್ನು ಶಿಕ್ಷಿಸುತ್ತೇನೆ,” ಎಂದರು.


ನಾಲ್ವತ್ತು ವರ್ಷ ಆ ಸಂತತಿಗೆ ಬೇಸರಗೊಂಡು, ‘ಇವರು ತಮ್ಮ ಹೃದಯದಲ್ಲಿ ತಪ್ಪಿಹೋಗುವ ಜನರಾಗಿದ್ದಾರೆ, ನನ್ನ ಮಾರ್ಗಗಳನ್ನು ಇವರು ಅರಿಯರು,’ ಎಂದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು