Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:16 - ಕನ್ನಡ ಸಮಕಾಲಿಕ ಅನುವಾದ

16 ಅವರು ಪ್ರವಾದಿಸುವ ಜನರು ಕ್ಷಾಮದ ಮತ್ತು ಖಡ್ಗದ ನಿಮಿತ್ತ ಯೆರೂಸಲೇಮಿನ ಬೀದಿಪಾಲಾಗುವರು. ಅವರನ್ನೂ, ಅವರ ಹೆಂಡತಿಯರನ್ನೂ, ಅವರ ಪುತ್ರಪುತ್ರಿಯರನ್ನೂ ಹೂಳಿಡುವುದಕ್ಕೆ ಯಾರೂ ಇರುವುದಿಲ್ಲ. ಏಕೆಂದರೆ ಅವರಿಗೆ ಅರ್ಹವಾದ ಆಪತ್ತನ್ನು ನಾನು ಅವರ ಮೇಲೆ ಸುರಿಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರ ಪ್ರವಾದನೆಗೆ ಕಿವಿಗೊಡುವ ಜನರು ಕೂಡ ಕ್ಷಾಮಖಡ್ಗಗಳಿಗೆ ತುತ್ತಾಗುವರು. ಜೆರುಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು. ಅವರನ್ನೂ ಅವರ ಮಡದಿ ಮಕ್ಕಳನ್ನೂ ಹೂಣಲು ಸಹ ಯಾರೂ ಇರುವುದಿಲ್ಲ. ಅವರ ದುಷ್ಟತನವನ್ನು ಅವರ ಮೇಲೆಯೆ ಸುರಿದುಬಿಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮಖಡ್ಗಗಳ ದೆಸೆಯಿಂದ ಯೆರೂಸಲೇವಿುನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡರುಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾರಿಗೆ ಪ್ರವಾದಿಗಳು ಬೋಧನೆ ಮಾಡಿದ್ದರೋ ಅವರನ್ನು ಬೀದಿಗಳಲ್ಲಿ ಎಸೆಯಲಾಗುವದು. ಆ ಜನರು ಹಸಿವಿನಿಂದ ಮತ್ತು ಶತ್ರುಗಳ ಖಡ್ಗಗಳಿಂದ ಮಡಿಯುವರು. ಆ ಜನರನ್ನೂ ಅವರ ಹೆಂಡತಿಯರನ್ನೂ ಮಕ್ಕಳನ್ನೂ ಹೂಣಿಡುವದಕ್ಕೆ ಯಾರೂ ಇರುವದಿಲ್ಲ. ನಾನು ಅವರನ್ನು ದಂಡಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:16
23 ತಿಳಿವುಗಳ ಹೋಲಿಕೆ  

ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.


ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ, ತಮ್ಮ ಸ್ವಂತ ಕುಯುಕ್ತಿಗಳಿಂದಲೇ ಹೊಟ್ಟೆ ತುಂಬಿಕೊಳ್ಳುವರು.


ಆದ್ದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು. ಖಡ್ಗದ ಬಲದಿಂದ ಅವರ ರಕ್ತವನ್ನು ಸುರಿದುಬಿಡು. ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ. ಅವರ ಗಂಡಸರು ಹತರಾಗಲಿ. ಅವರ ಯೌವನಸ್ಥರು ಯುದ್ಧದಲ್ಲಿ ಖಡ್ಗಕ್ಕೆ ತುತ್ತಾಗಲಿ.


“ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”


ಆಗ ದೇವಾಲಯದಿಂದ ಬಂದ ಗಟ್ಟಿಯಾದ ಧ್ವನಿಯು, ಏಳು ದೇವದೂತರಿಗೂ, “ಹೋಗಿರಿ, ಏಳು ಬೋಗುಣಿಗಳಲ್ಲಿರುವ ದೇವರ ಕೋಪವನ್ನು ಭೂಮಿಯ ಮೇಲೆ ಸುರಿದುಬಿಡಿರಿ!” ಎಂದು ಹೇಳುವುದನ್ನು ನಾನು ಕೇಳಿದೆನು.


ಅವರನ್ನು ಬಿಡಿರಿ, ಅವರು ಕುರುಡರಿಗೆ ದಾರಿತೋರಿಸುವ ಕುರುಡರು. ಕುರುಡನು ಕುರುಡನಿಗೆ ದಾರಿತೋರಿಸಿದರೆ ಅವರಿಬ್ಬರೂ ಹಳ್ಳಕ್ಕೆ ಬೀಳುವರು,” ಎಂದು ಹೇಳಿದರು.


ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ”


ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ. ಯಾಜಕರು ತಮ್ಮ ಅಧಿಕಾರದಿಂದ ದೊರೆತನ ಮಾಡುತ್ತಾರೆ. ನನ್ನ ಜನರು ಅದನ್ನು ಪ್ರೀತಿ ಮಾಡುತ್ತಾರೆ. ಆದರೆ ಅಂತ್ಯದಲ್ಲಿ ನೀವು ಏನು ಮಾಡುವಿರಿ?


“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ, ಇವುಗಳನ್ನು ನಿನಗೆ ಉಂಟುಮಾಡಿದವು, ಇದೇ ನಿನ್ನ ಶಿಕ್ಷೆ. ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ನಾಟುವುದಿಲ್ಲವೋ?”


ಈ ಜನರನ್ನು ನಡೆಸುವವರು ದಾರಿ ತಪ್ಪಿಸುವವರಾಗಿದ್ದಾರೆ, ಅವರನ್ನು ಹಿಂಬಾಲಿಸುವವರು ನಾಶವಾಗುವರು.


ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.


“ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.


ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.


ಅವರನ್ನು ನಾನು ಕಳುಹಿಸಲಿಲ್ಲ, ನನ್ನ ಹೆಸರೆತ್ತಿ ಸುಳ್ಳನ್ನು ಸಾರುತ್ತಾ ಇದ್ದಾರೆ. ಅವರ ದುರ್ಬೋಧನೆಯ ನಿಮಿತ್ತ ನಾನು ನಿಮ್ಮನ್ನು ಮತ್ತು ನಿಮಗೆ ಪ್ರವಾದಿಸುವ ಪ್ರವಾದಿಗಳನ್ನು ಹೊರದೂಡಬೇಕಾಗುವುದು, ನೀವು ನಾಶವಾಗುವಿರಿ, ಎಂದು ಯೆಹೋವ ದೇವರೇ ನುಡಿದಿದ್ದಾರೆ.”


ದೇಶವನ್ನು ಶುದ್ಧೀಕರಿಸುವ ಹಾಗೆ ಅದರ ಮೇಲೆ ಮಿಕ್ಕವರನ್ನು ಹೂಳಿಡುವುದಕ್ಕೆ ಯಾವಾಗಲೂ ದೇಶವನ್ನು ಹಾದುಹೋಗುವ ಮನುಷ್ಯರನ್ನೇ ನಿರಂತರವಾಗಿ ನೇಮಿಸುವರು. “ ‘ಮತ್ತು ಇವರು ಏಳು ತಿಂಗಳುಗಳಾದ ಮೇಲೆ ಹುಡುಕುವರು.


ಆದ್ದರಿಂದ ಯೆಹೋವ ದೇವರು ಹೇಳುವುದೇನೆಂದರೆ: “ ‘ನಿನ್ನ ಹೆಂಡತಿ ಪಟ್ಟಣದಲ್ಲಿ ವ್ಯಭಿಚಾರಿಣಿಯಾಗುವಳು. ನಿನ್ನ ಪುತ್ರ ಪುತ್ರಿಯರೂ ಖಡ್ಗದಿಂದ ಬೀಳುವರು. ನಿನ್ನ ದೇಶವನ್ನು ಅಳೆಯಲಾಗುತ್ತದೆ ಮತ್ತು ವಿಭಾಗಿಸಲಾಗುತ್ತದೆ. ನೀನು ಅಪವಿತ್ರವಾದ ದೇಶದಲ್ಲಿ ಸಾಯುವಿ. ಇಸ್ರಾಯೇಲ್ ನಿಶ್ಚಯವಾಗಿ ತನ್ನ ದೇಶದಿಂದ ಸೆರೆಯಾಗಿ ಕರೆದೊಯ್ಯಲಾಗುವುದು.’ ”


ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ. ನಿಮ್ಮ ಪುತ್ರಿಯರಿಗೆ ಗೋಳಾಟವನ್ನೂ, ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.


ಪಷ್ಹೂರನೇ, ನೀನೂ, ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ. ಬಾಬಿಲೋನಿಗೆ ಹೋಗಿ ಅಲ್ಲಿಯೇ ಸಾಯುವೆ. ಅಲ್ಲಿಯೇ ಸಮಾಧಿಯಾಗುವೆ. ನಿನಗೂ, ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವುದು.’ ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು