Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:20 - ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ, ನಮ್ಮ ದುಷ್ಟತನವನ್ನೂ, ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ, ನಿಮಗೆ ವಿರುದ್ಧವಾಗಿ ಪಾಪಮಾಡಿದ್ದೇವಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ನಮ್ಮ ದುಷ್ಟತನವನ್ನೂ ನಮ್ಮ ಪಿತೃಗಳ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಿನಗೇ ಪಾಪಮಾಡಿದ್ದೇವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಯೆಹೋವನೇ, ನಾವು ಬಹಳ ಕೆಟ್ಟ ಜನರೆಂಬುದು ನಮಗೆ ಗೊತ್ತು. ನಮ್ಮ ಪೂರ್ವಿಕರು ದುಷ್ಕೃತ್ಯಗಳನ್ನು ಮಾಡಿದರೆಂಬುದನ್ನು ನಾವು ಬಲ್ಲೆವು. ಹೌದು, ನಾವು ನಿನ್ನ ವಿರುದ್ಧ ಪಾಪಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:20
21 ತಿಳಿವುಗಳ ಹೋಲಿಕೆ  

ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ. ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ. ಏಕೆಂದರೆ ನಾವೂ, ನಮ್ಮ ಪೂರ್ವಜರೂ ನಮ್ಮ ಚಿಕ್ಕತನದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ. ನಮ್ಮ ಯೆಹೋವ ದೇವರ ಸ್ವರಕ್ಕೆ ಕಿವಿಗೊಡಲಿಲ್ಲ.”


ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ಆಗ ಇಸ್ರಾಯೇಲ್ ಸಂತಾನದವರು ತಮ್ಮನ್ನು ಸಮಸ್ತ ಜನರಿಂದ ಪ್ರತ್ಯೇಕಿಸಿಕೊಂಡು ನಿಂತು, ತಮ್ಮ ಪಾಪಗಳನ್ನೂ, ತಮ್ಮ ಪಿತೃಗಳ ಪಾಪಗಳನ್ನೂ ಅರಿಕೆಮಾಡಿದರು.


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ? ನೀವು ಕೂಡಿಕೊಳ್ಳಿರಿ, ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ನಾಶವಾಗೋಣ. ಏಕೆಂದರೆ, ನಾವು ನಮ್ಮ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ ಕಾರಣ, ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ನಾಶಮಾಡಿ, ನಮಗೆ ವಿಷದ ನೀರನ್ನು ಕುಡಿಯಲು ಕೊಟ್ಟಿದ್ದಾರೆ.


ಯೆಹೋವ ದೇವರೇ, ನಮ್ಮ ಅಕ್ರಮಗಳು ನಮಗೆ ವಿರೋಧವಾಗಿ ಸಾಕ್ಷಿ ಕೊಟ್ಟರೂ, ನೀನೇ ನಿನ್ನ ಹೆಸರಿಗೋಸ್ಕರ ಕಾರ್ಯ ಸಾಧಿಸು. ಏಕೆಂದರೆ, ನಮ್ಮ ಹಿಂಜಾರುವಿಕೆಗಳು ಅನೇಕವಾಗಿವೆ; ನಿಮಗೆ ವಿರೋಧವಾಗಿ ಪಾಪಮಾಡಿದ್ದೇವೆ.


ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.


ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ, ನೀವು ಮನ್ನಿಸಲಿಲ್ಲ.


ನಮ್ಮ ತಂದೆಗಳು ಪಾಪಮಾಡಿ ಇಲ್ಲವಾದರು. ನಾವು ಅವರ ಅಕ್ರಮಗಳನ್ನು ಹೊರುತ್ತೇವೆ.


ಅವು ದೇಶದ ಹುಲ್ಲನ್ನು ತಿಂದು ಮುಗಿಸಿದ ಮೇಲೆ ನಾನು, “ಸಾರ್ವಭೌಮ ಯೆಹೋವ ದೇವರೇ, ಲಾಲಿಸು, ನನ್ನನ್ನು ಮನ್ನಿಸು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗ,” ಎಂದು ವಿಜ್ಞಾಪಿಸಿಕೊಂಡೆನು.


“ಈಗ ನಮ್ಮ ಕರ್ತದೇವರೇ, ನಿಮ್ಮ ಭುಜಬಲವನ್ನು ತೋರಿಸಿ, ನಿಮ್ಮ ಜನರನ್ನು ಈಜಿಪ್ಟ್ ದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರು ಪಡೆದುಕೊಂಡವರೇ, ನಾವು ಪಾಪಮಾಡಿದ್ದೇವೆ, ನಾವು ಕೆಟ್ಟವರಾಗಿ ನಡೆದುಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು