Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:3 - ಕನ್ನಡ ಸಮಕಾಲಿಕ ಅನುವಾದ

3 ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ. ಇವರು ಬಾವಿಗಳಿಗೆ ಬರುತ್ತಾರೆ. ಆದರೆ ನೀರು ಸಿಕ್ಕಲ್ಲ. ಬರೀ ಪಾತ್ರೆಗಳುಳ್ಳವರಾಗಿ ತಿರುಗಿಕೊಳ್ಳುತ್ತಾರೆ. ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ, ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರಿಗೆ ಕಳುಹಿಸುತ್ತಾರೆ; ಅವರು ಕೊಳಗಳಿಗೆ ಹೋದಾಗ ನೀರು ಕಾಣುವದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ; ಆಶೆಗೆಟ್ಟು ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನನಾಯಕರು ನೀರು ತರುವದಕ್ಕಾಗಿ ತಮ್ಮ ಸೇವಕರನ್ನು ಕಳುಹಿಸುತ್ತಾರೆ. ಆ ಸೇವಕರು ನೀರಿರುವ ಸ್ಥಳಗಳಿಗೆ ಹೋಗುತ್ತಾರೆ. ಆದರೆ ಅಲ್ಲಿ ಅವರಿಗೆ ನೀರು ಸಿಕ್ಕುವದಿಲ್ಲ. ಸೇವಕರು ಕೇವಲ ಪಾತ್ರೆಗಳನ್ನು ತೆಗೆದುಕೊಂಡು ಹಿಂದಿರುಗಿ ಬರುತ್ತಾರೆ. ಅವರು ನಾಚಿಕೆಪಟ್ಟುಕೊಳ್ಳುತ್ತಾರೆ ಮತ್ತು ಪೇಚಾಡುತ್ತಾರೆ. ಅವರು ನಾಚಿಕೆಯಿಂದ ತಮ್ಮ ಮುಖಗಳನ್ನು ಮುಚ್ಚಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:3
23 ತಿಳಿವುಗಳ ಹೋಲಿಕೆ  

ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿಕೊಂಡು, ಬರಿಗಾಲಿನಿಂದ ಎಣ್ಣೆಮರಗಳ ಗುಡ್ಡವನ್ನು ಏರಿದನು. ಅವನ ಸಂಗಡ ಇರುವ ಸಮಸ್ತ ಜನರೂ, ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆ ಏರಿದರು.


ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.


“ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.


ಎರಡು ಅಥವಾ ಮೂರು ಪಟ್ಟಣದವರು ಕುಡಿಯುವ ನೀರಿಗಾಗಿ ಒಂದು ಪಟ್ಟಣದಿಂದ ಇನ್ನೊಂದು ಪಟ್ಟಣಕ್ಕೆ ಅಲೆದಾಡುತ್ತಾ ಹೋದರೂ, ಅವರ ಬಾಯಾರಿಕೆ ತೀರಲಿಲ್ಲ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ. ಜೀವವುಳ್ಳ ನೀರಿನ ಬುಗ್ಗೆಯಾಗಿರುವ ನನ್ನನ್ನು ಬಿಟ್ಟು, ತಮಗೆ ನೀರು ಹಿಡಿಯಲಾರದ ಒಡಕ ತೊಟ್ಟಿಗಳನ್ನೂ ಕೆತ್ತಿದ್ದಾರೆ.


ಕಾಡುಮೃಗಗಳು ಸಹ ನಿನ್ನ ಕಡೆಗೆ ತಲೆಯೆತ್ತಿವೆ. ನೀರಿನ ಹೊಳೆಗಳು ಬತ್ತಿ ಹೋಗಿವೆ. ಹುಲ್ಲುಗಾವಲನ್ನು ಬೆಂಕಿಯು ದಹಿಸಿಬಿಟ್ಟಿದೆ.


ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.


ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಳ್ಳಲಿ, ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.


ಅವರು ನಿರೀಕ್ಷಿಸಿದ್ದರಿಂದ ವ್ಯಥೆಗೊಂಡರು; ಅವರು ಬಂದು ಸ್ಥಳಸೇರಿದರೂ ನಿರಾಶರಾದರು.


ಅನಂತರ ಮೊರ್ದೆಕೈ ಪುನಃ ಅರಮನೆಯ ಬಾಗಿಲಿಗೆ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆಯನ್ನು ಮುಚ್ಚಿಕೊಂಡು ತನ್ನ ಮನೆಗೆ ಶೀಘ್ರವಾಗಿ ಹೋದನು.


ಸ್ವಲ್ಪ ಕಾಲವಾದ ಮೇಲೆ ದೇಶದಲ್ಲಿ ಮಳೆ ಇಲ್ಲದ್ದರಿಂದ ಆ ಹಳ್ಳವು ಬತ್ತಿಹೋಯಿತು.


ಆದರೆ ಅರಸನು ಮೋರೆಯನ್ನು ಮುಚ್ಚಿಕೊಂಡು, ಮಹಾಶಬ್ದವಾಗಿ, “ನನ್ನ ಮಗ ಅಬ್ಷಾಲೋಮನೇ, ಅಬ್ಷಾಲೋಮನೇ ನನ್ನ ಮಗನೇ, ನನ್ನ ಮಗನೇ,” ಎಂದು ಕೂಗುತ್ತಿದ್ದನು.


ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟು ಹೋಗುವೆ. ಏಕೆಂದರೆ ಯೆಹೋವ ದೇವರು ನೀನು ಭರವಸೆ ಇಟ್ಟವುಗಳನ್ನು ತಿರಸ್ಕರಿಸಿದ್ದಾರೆ, ಅವುಗಳ ಮುಖಾಂತರ ನಿನ್ನ ಕಾರ್ಯ ಸಫಲವಾಗುವುದಿಲ್ಲ.”


ಆದ್ದರಿಂದ ಮಳೆಗಳು ನಿಂತುಹೋದವು, ಹಿಂಗಾರೇ ಆಗಲಿಲ್ಲ. ವೇಶ್ಯೆಯ ನೋಟ ನಿನಗಿತ್ತು. ನಾಚುವುದನ್ನು ನಿರಾಕರಿಸಿದೆ.


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು.


ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.


ಇಲ್ಲದಿದ್ದರೆ ನಾನು ಅವಳ ಬಟ್ಟೆಯನ್ನು ತೆಗೆದು, ಅವಳು ಹುಟ್ಟಿದ ದಿವಸದಲ್ಲಿದ್ದ ಹಾಗೆ ಅವಳನ್ನು ಬೆತ್ತಲೆ ಮಾಡುತ್ತೇನೆ. ಅವಳನ್ನು ಮರುಭೂಮಿಯಂತೆ ಮಾಡಿ, ಅವಳನ್ನು ಒಣಗಿದ ಭೂಮಿಯಂತೆ ಇಟ್ಟು, ದಾಹದಿಂದ ಅವಳನ್ನು ಕೊಲ್ಲುವೆನು.


ಭೂಮಿಯ ಜನಾಂಗಗಳಲ್ಲಿ ಅರಸನಾದ ಸೇನಾಧೀಶ್ವರ ಯೆಹೋವ ದೇವರನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಹೋಗದಿದ್ದರೆ, ಅವರ ಮೇಲೆ ಮಳೆ ಬರುವುದಿಲ್ಲ.


“ಸುಗ್ಗಿಯು ಇನ್ನು ಮೂರು ತಿಂಗಳು ಇರುವಾಗ, ಮಳೆಯನ್ನು ನಾನು ನಿಮ್ಮಿಂದ ಹಿಂದೆಗೆದಿದ್ದೇನೆ. ಒಂದು ಪಟ್ಟಣದ ಮೇಲೆ ಮಳೆ ಸುರಿಸಿ, ಇನ್ನೊಂದು ಪಟ್ಟಣದ ಮೇಲೆ ಮಳೆ ಸುರಿಸಲಿಲ್ಲ. ಒಂದು ಹೊಲದ ಮೇಲೆ ಮಳೆ ಸುರಿಸಿ, ಇನ್ನೊಂದು ಹೊಲದ ಮೇಲೆ ಮಳೆ ಸುರಿಸಲಿಲ್ಲ ಮತ್ತು ಅದು ಒಣಗಿ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು