ಯೆರೆಮೀಯ 15:10 - ಕನ್ನಡ ಸಮಕಾಲಿಕ ಅನುವಾದ10 ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ, ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ನಿಂದಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನನ್ನ ಹೆತ್ತತಾಯೇ, ನನ್ನ ಗತಿಯನ್ನು ಏನು ಹೇಳಲಿ! ಜಗದ ಜನರಿಗೆಲ್ಲ ನಾನೊಬ್ಬ ಜಗಳಗಂಟಿಗ, ವ್ಯಾಜ್ಯಗಾರ. ನಾನು ಹಣವನ್ನು ಸಾಲವಾಗಿ ಕೊಟ್ಟವನಲ್ಲ, ಕೊಂಡವನೂ ಅಲ್ಲ. ಆದರೂ ನನ್ನನ್ನು ಎಲ್ಲರು ಶಪಿಸುವವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ತಾಯೀ, ನನ್ನ ಗತಿಯನ್ನು ಏನು ಹೇಳಲಿ! ನಿನ್ನ ಗರ್ಭದಿಂದ ಬಂದ ನಾನು ಲೋಕದವರೆಲ್ಲರಿಗೆ ಜಗಳಗಂಟಿಗನೂ ವ್ಯಾಜ್ಯಗಾರನೂ ಆಗಿದ್ದೇನಲ್ಲಾ. ನಾನು ಹಣವನ್ನು ಬಡ್ಡಿಗೆ ಕೊಟ್ಟವನಲ್ಲ, ತೆಗೆದುಕೊಂಡವನಲ್ಲ, ಆದರೂ ನನ್ನನ್ನು ಎಲ್ಲರೂ ಬಯ್ಯುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನನ್ನ ತಾಯೀ, ನೀನು ಜನ್ಮಕೊಟ್ಟಿದ್ದಕ್ಕಾಗಿ ನನಗೆ ದುಃಖವಾಗುತ್ತದೆ. ಯೆರೆಮೀಯನಾದ ನಾನು ಇಡೀ ದೇಶದ ಜನರ ವಿರುದ್ಧವಾಗಿ ವಾದಿಸುತ್ತಾ ನಿಂದಿಸುತ್ತಾ ಇರುವೆ. ನಾನು ಯಾರಿಗೂ ಸಾಲವನ್ನು ಕೊಟ್ಟಿಲ್ಲ; ಸಾಲವನ್ನು ತೆಗೆದುಕೊಂಡಿಲ್ಲ. ಆದರೆ ಪ್ರತಿಯೊಬ್ಬರು ನನ್ನನ್ನು ಶಪಿಸುತ್ತಾರೆ. ಅಧ್ಯಾಯವನ್ನು ನೋಡಿ |