ಯೆರೆಮೀಯ 15:15 - ಕನ್ನಡ ಸಮಕಾಲಿಕ ಅನುವಾದ15 ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ, ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿ ತೀರಿಸು, ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ ಏಕೆಂದರೆ ನೀವು ಕನಿಕರ ಉಳ್ಳವರು, ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅದಕ್ಕೆ ನಾನು : “ಸರ್ವೇಶ್ವರಾ, ನೀವು ಎಲ್ಲವನ್ನು ಬಲ್ಲವರು. ನನ್ನನ್ನು ನೆನಪಿಗೆ ತಂದುಕೊಂಡು ನೆರವುನೀಡಿ. ನನಗಾಗಿ ನನ್ನ ಶತ್ರುಗಳಿಗೆ ಮುಯ್ಯಿತೀರಿಸಿರಿ. ಅವರಿಗೆ ಹೆಚ್ಚು ತಾಳ್ಮೆತೋರಿ ನನ್ನನ್ನು ನಿರ್ಮೂಲಮಾಡಬೇಡಿ. ನಿಮ್ಮ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆ ಎಂಬುದನ್ನು ಜ್ಞಾಪಕಕ್ಕೆ ತಂದುಕೊಳ್ಳಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 [ಅದಕ್ಕೆ ನಾನು] - ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು; ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲಮಾಡಬೇಡ; ನಿನ್ನ ನಿವಿುತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಚಿತ್ತಕ್ಕೆ ತಂದುಕೋ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಯೆಹೋವನೇ, ನನ್ನ ವಿಷಯ ನಿನಗೆ ಗೊತ್ತು. ನನ್ನನ್ನು ಜ್ಞಾಪಕದಲ್ಲಿಟ್ಟುಕೊಂಡು ರಕ್ಷಿಸು. ಜನರು ನನ್ನನ್ನು ತೊಂದರೆಗೀಡು ಮಾಡುತ್ತಿದ್ದಾರೆ. ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು. ನೀನು ಅವರೊಂದಿಗೆ ಬಹಳ ತಾಳ್ಮೆಯಿಂದ ವರ್ತಿಸುತ್ತಿರುವೆ. ಅವರೊಂದಿಗೆ ತಾಳ್ಮೆಯಿಂದ ಇದ್ದು ನನ್ನನ್ನು ಹಾಳುಮಾಡಬೇಡ. ನನ್ನ ಬಗ್ಗೆ ವಿಚಾರ ಮಾಡು. ಯೆಹೋವನೇ, ನಿನಗಾಗಿ ನಾನು ಎಷ್ಟು ಕಷ್ಟಪಡುತ್ತಿದ್ದೇನೆ ಎಂಬುದನ್ನು ಯೋಚಿಸು. ಅಧ್ಯಾಯವನ್ನು ನೋಡಿ |