Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:4 - ಕನ್ನಡ ಸಮಕಾಲಿಕ ಅನುವಾದ

4 ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 “ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇಮಿನಲ್ಲಿ ನಡೆಸಿದ್ದಕ್ಕೆ ಪ್ರತಿಯಾಗಿ, ನಾನು ಅವರನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹಿಜ್ಕೀಯನ ಮಗನೂ ಯೆಹೂದದ ಅರಸನೂ ಆದ ಮನಸ್ಸೆಯು ಯೆರೂಸಲೇವಿುನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಅವರನ್ನು ಲೋಕದ ಸಮಸ್ತರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರನ್ನು ಭೂಲೋಕದ ಎಲ್ಲಾ ಜನರಿಗೆ ಒಂದು ಭಯಾನಕವಾದ ಉದಾಹರಣೆಯಾಗುವಂತೆ ಮಾಡುತ್ತೇನೆ. ಮನಸ್ಸೆಯು ಜೆರುಸಲೇಮಿನಲ್ಲಿ ಮಾಡಿದ ಪಾಪಕೃತ್ಯಗಳ ಫಲವಾಗಿ ನಾನು ಯೆಹೂದದಲ್ಲಿ ಹೀಗೆ ಮಾಡುತ್ತೇನೆ. ಮನಸ್ಸೆಯು ರಾಜನಾದ ಹಿಜ್ಕೀಯನ ಮಗನಾಗಿದ್ದನು. ಮನಸ್ಸೆಯು ಯೆಹೂದದ ರಾಜನಾಗಿದ್ದನು.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:4
19 ತಿಳಿವುಗಳ ಹೋಲಿಕೆ  

‘ನಾನು ಅವರನ್ನು ಅಸಹ್ಯಪಡಿಸುತ್ತೇನೆ. ನಿಂದೆಗೂ, ಗಾದೆಗೂ, ಹಾಸ್ಯಕ್ಕೂ, ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.


ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ಹಿಂಸಿಸಿ, ನಾನು ಅವರನ್ನು ಓಡಿಸಿಬಿಟ್ಟ ಎಲ್ಲಾ ಜನಾಂಗಗಳಲ್ಲಿ ಶಾಪಕ್ಕೂ ಭಯಕ್ಕೂ ಪರಿಹಾಸ್ಯಕ್ಕೂ ನಿಂದೆಗೂ ಗುರಿಯಾಗುವ ಹಾಗೆ ಒಪ್ಪಿಸಿಬಿಡುವೆನು.


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ, ಅವರನ್ನು ಸೂರೆಗೂ ಹೆದರಿಕೆಗೂ ಒಪ್ಪಿಸುವೆನು.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.


ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯವರೆಗೂ ಎಲ್ಲಾ ಜನಾಂಗಗಳಲ್ಲಿ ಚದರಿಸುವರು. ಅಲ್ಲಿ ನೀವೂ ನಿಮ್ಮ ಪಿತೃಗಳು ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಆರಾಧಿಸುವಿರಿ.


ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು. ಅವನ ತಾಯಿಯ ಹೆಸರು ಹೆಫ್ಚಿಬಾ.


ಮನಸ್ಸೆಯು ಅರಸನಾದಾಗ ಹನ್ನೆರಡು ವರ್ಷದವನಾಗಿದ್ದನು. ಅವನು ಐವತ್ತೈದು ವರ್ಷ ಯೆರೂಸಲೇಮಿನಲ್ಲಿ ಆಳಿದನು.


ಆದರೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಜನಾಂಗಗಳ ಅಸಹ್ಯವಾದವುಗಳನ್ನು ಅವನು ಅನುಸರಿಸಿ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.


“ಆದರೂ ಇನ್ನೂ ನೀವು ಹೇಳುವುದೇನು? ‘ಮಗನು ತಂದೆಯ ಅಕ್ರಮವನ್ನು ಹೊರುವುದಿಲ್ಲವೇ?’ ಎಂದು ಹೇಳುವಿರಿ. ಮಗನು ನ್ಯಾಯವನ್ನೂ, ನೀತಿಯನ್ನೂ ಮಾಡಿ, ನನ್ನ ನಿಯಮಗಳನ್ನೆಲ್ಲಾ ಕೈಗೊಂಡು ನಡೆದರೆ ಅವನು ನಿಶ್ಚಯವಾಗಿ ಬದುಕುವನು.


ಏಕೆಂದರೆ ಅವರ ತಂದೆಗಳು ಈಜಿಪ್ಟಿನಿಂದ ಹೊರಟ ದಿವಸ ಮೊದಲುಗೊಂಡು, ಇಂದಿನವರೆಗೂ ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿ ನನಗೆ ಕೋಪವನ್ನು ಎಬ್ಬಿಸಿದ್ದಾರೆ, ಎಂದು ಹೇಳುತ್ತಾರೆ,” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು