Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:5 - ಕನ್ನಡ ಸಮಕಾಲಿಕ ಅನುವಾದ

5 “ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು, ನಿನಗೋಸ್ಕರ ಯಾರು ದುಃಖಿಸುವರು? ನಿನ್ನ ಕ್ಷೇಮವನ್ನು ಕುರಿತು ಕೇಳುವುದಕ್ಕೆ ಯಾರು ಹೋಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಪ್ರಲಾಪಿಸುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆರೂಸಲೇಮೇ, ಯಾರು ನಿನ್ನನ್ನು ಕರುಣಿಸುವರು? ನಿನಗಾಗಿ ಯಾರು ಬಡುಕೊಳ್ಳುವರು? ನಿನ್ನ ಕ್ಷೇಮವನ್ನು ವಿಚಾರಿಸಲು ಯಾರು ನಿನ್ನ ಕಡೆಗೆ ತಿರುಗುವರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಜೆರುಸಲೇಮ್ ನಗರವೇ, ನಿನಗಾಗಿ ಯಾರೂ ವ್ಯಥೆಪಡುವದಿಲ್ಲ. ನಿನಗಾಗಿ ದುಃಖಪಡುವುದಿಲ್ಲ ಮತ್ತು ಆಳುವುದಿಲ್ಲ. ಯಾರೂ ತಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಬಿಟ್ಟು ನಿನ್ನ ಯೋಗಕ್ಷೇಮವನ್ನು ವಿಚಾರಿಸಲು ಬರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:5
15 ತಿಳಿವುಗಳ ಹೋಲಿಕೆ  

ಈ ಎರಡು ಸಂಗತಿಗಳು ನಿನಗೆ ಸಂಭವಿಸಿವೆ, ನಿನಗೋಸ್ಕರ ಚಿಂತಿಸುವವರು ಯಾರಿದ್ದಾರೆ? ನಾಶನವೋ ಸಂಹಾರವೋ ಕ್ಷಾಮವೋ ಖಡ್ಗವೋ, ಯಾರು ನಿನ್ನನ್ನು ಸಂತೈಸುವರು?


ನಿನ್ನನ್ನು ನೋಡುವವರೆಲ್ಲರೂ ನಿನ್ನಿಂದ ಓಡಿಹೋಗಿ ಹೀಗೆ ಹೇಳುವರು, ‘ನಿನೆವೆ ಹಾಳಾಯಿತು, ಅದಕ್ಕೆ ಯಾರು ಚಿಂತೆಪಡುವರು?’ ನಿನ್ನನ್ನು ಆದರಿಸುವವರನ್ನು ನಾನು ಎಲ್ಲಿಂದ ಹುಡುಕಲಿ.”


ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’


ನಿಂದೆಯು ನನ್ನ ಹೃದಯವನ್ನು ಮುರಿದಿದೆ. ನನ್ನನ್ನು ನಿಸ್ಸಹಾಯಕನನ್ನಾಗಿ ಮಾಡಿದೆ. ಅನುತಾಪಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಇರಲಿಲ್ಲ. ಸಂತೈಸುವವರಿಗೋಸ್ಕರ ಸಹ ಎದುರು ನೋಡಿದೆನು, ಆದರೆ ಯಾರೂ ಸಿಕ್ಕಲಿಲ್ಲ.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ದುಃಖದ ಮನೆಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡುವುದಕ್ಕೂ, ದುಃಖ ಪಡುವುದಕ್ಕೂ ಹೋಗಬೇಡ. ಏಕೆಂದರೆ ನಾನು ನನ್ನ ಸಮಾಧಾನವನ್ನೂ, ಪ್ರೀತಿಯನ್ನೂ, ಕನಿಕರವನ್ನೂ ಈ ಜನರಿಂದ ತೆಗೆದುಹಾಕಿದ್ದೇನೆ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.”


“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ, ಏಕೆಂದರೆ ದೇವರ ಕೈ ನನ್ನನ್ನು ದಂಡಿಸಿದೆ.


ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ:


ಆಗ ದಾವೀದನು ತಾನು ತೆಗೆದುಕೊಂಡು ಬಂದದ್ದನ್ನು, ವಸ್ತುಗಳನ್ನು ಕಾಯುವವನ ಕೈಯಲ್ಲಿ ಇಟ್ಟುಬಿಟ್ಟು, ರಣರಂಗಕ್ಕೆ ಓಡಿಹೋಗಿ, ತನ್ನ ಸಹೋದರರ ಬಳಿಗೆ ಬಂದು, ಯೋಗಕ್ಷೇಮ ವಿಚಾರಿಸಿದನು.


ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ, ನಿನಗೆ ಎರಡು ರೊಟ್ಟಿಗಳನ್ನು ಕೊಡುವರು. ಅವುಗಳನ್ನು ನೀನು ಅವರ ಕೈಯಿಂದ ತೆಗೆದುಕೊಳ್ಳುವೆ.


ಅವರು ಅಲ್ಲಿಗೆ ಹೋಗಿ ಮೀಕನ ಮನೆಯಲ್ಲಿರುವ ಯುವಕನಾದ ಲೇವಿಯನ ಬಳಿಗೆ ಬಂದು ಅವನ ಕ್ಷೇಮಸಮಾಚಾರವನ್ನು ವಿಚಾರಿಸತೊಡಗಿದರು.


ಮೋಶೆಗೆ ತನ್ನ ಮಾವನನ್ನು ಎದುರುಗೊಂಡು ಅವನನ್ನು ವಂದಿಸಿ, ಮುದ್ದಿಟ್ಟನು. ಅವರು ಪರಸ್ಪರ ಕ್ಷೇಮಸಮಾಚಾರವನ್ನು ಕೇಳಿಕೊಂಡು ಗುಡಾರಕ್ಕೆ ಬಂದರು.


ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ. ಅವಳನ್ನು ಆದರಿಸುವವನು ಒಬ್ಬನೂ ಇಲ್ಲ. ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಯೆಹೋವ ದೇವರು ಆಜ್ಞಾಪಿಸಿದ್ದಾರೆ. ಯೆರೂಸಲೇಮ್ ಅವರ ಮಧ್ಯದಲ್ಲಿ ಅಶುದ್ಧ ವಸ್ತುವಿನಂತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು