ಯೆರೆಮೀಯ 16:11 - ಕನ್ನಡ ಸಮಕಾಲಿಕ ಅನುವಾದ11 ‘ನಿಮ್ಮ ಪಿತೃಗಳು ನನ್ನನ್ನು ಬಿಟ್ಟುಬಿಟ್ಟದ್ದರಿಂದಲೇ,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಅವರು ಬೇರೆ ದೇವರುಗಳನ್ನು ಹಿಂಬಾಲಿಸಿ, ಅವುಗಳನ್ನು ಸೇವಿಸಿ, ಅವುಗಳನ್ನು ಆರಾಧಿಸಿ, ನನ್ನನ್ನು ತೊರೆದುಬಿಟ್ಟು, ನನ್ನ ನಿಯಮವನ್ನು ಕೈಗೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀನು ಅವರಿಗೆ ಹೀಗೆ ಹೇಳಬೇಕು, ‘ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪೂರ್ವಿಕರು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ, ಪೂಜಿಸಿ ನನ್ನನ್ನು ಬಿಟ್ಟು, ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆಗ ನೀನು ಅವರಿಗೆ ಹೀಗೆಂದು ಹೇಳಬೇಕು : ಸರ್ವೇಶ್ವರನ ಈ ಮಾತಿಗೆ ಕಿವಿಗೊಡಿ : ‘ನಿಮ್ಮ ಪೂರ್ವಜರು ನನ್ನನ್ನು ತೊರೆದುಬಿಟ್ಟರು. ಅನ್ಯದೇವತೆಗಳನ್ನು ಹಿಂಬಾಲಿಸಿದರು. ಅವುಗಳಿಗೆ ಸೇವೆಸಲ್ಲಿಸಿ ಪೂಜಿಸಿದರು. ನನ್ನನ್ನು ಬಿಟ್ಟುದಲ್ಲದೆ ನನ್ನ ಧರ್ಮವಿಧಿಗಳನ್ನು ಮೀರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ಅವರಿಗೆ ಹೀಗೆ ಹೇಳಬೇಕು - ಯೆಹೋವನ ಮಾತನ್ನು ಕೇಳಿರಿ, ನಿಮ್ಮ ಪಿತೃಗಳು ನನ್ನನ್ನು ತೊರೆದು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿ ಪೂಜಿಸಿ ನನ್ನನ್ನು ಬಿಟ್ಟು ನನ್ನ ಧರ್ಮವಿಧಿಗಳನ್ನು ಮೀರಿದ್ದರಿಂದಲೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನೀನು ಅವರಿಗೆ ಹೀಗೆ ಹೇಳಬೇಕು: ‘ನಿಮ್ಮ ಪೂರ್ವಿಕರು ನನ್ನ ಉಪದೇಶದಂತೆ ನಡೆಯುವದನ್ನು ಬಿಟ್ಟುಬಿಟ್ಟರು’ ಎಂದು ದೇವರು ಹೇಳುತ್ತಾನೆ. ‘ಅವರು ನನ್ನ ಅನುಸರಣೆಯನ್ನು ಬಿಟ್ಟು ಬೇರೆ ದೇವರುಗಳನ್ನು ಅನುಸರಿಸಲು ಮತ್ತು ಸೇವಿಸಲು ಪ್ರಾರಂಭಿಸಿದರು. ಅವರು ಅನ್ಯದೇವರುಗಳನ್ನು ಪೂಜಿಸಿದರು. ನಿಮ್ಮ ಪೂರ್ವಿಕರು ನನ್ನನ್ನು ತ್ಯಜಿಸಿ ನನ್ನ ಧರ್ಮವಿಧಿಗಳನ್ನು ಮೀರಿದರು. ಅಧ್ಯಾಯವನ್ನು ನೋಡಿ |