Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:16 - ಕನ್ನಡ ಸಮಕಾಲಿಕ ಅನುವಾದ

16 “ಇಗೋ, ನಾನು ಅನೇಕ ಮೀನುಗಾರರನ್ನು ಕಳುಹಿಸುತ್ತೇನೆ. ಇವರು ಅವರನ್ನು ಹಿಡಿಯುವರು. ಆಮೇಲೆ ಅನೇಕ ಬೇಟೆಗಾರರನ್ನು ಕಳುಹಿಸುವೆನು. ಇವರು ಎಲ್ಲಾ ಬೆಟ್ಟಗಳ ಮೇಲೆಯೂ, ಎಲ್ಲಾ ಗುಡ್ಡಗಳ ಮೇಲೆಯೂ, ಎಲ್ಲಾ ಬಂಡೆಗಳ ಬಿರುಕುಗಳಲ್ಲಿಯೂ ಅವರನ್ನು ಬೇಟೆಯಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನು ಹೀಗೆನ್ನುತ್ತಾನೆ, “ಇಗೋ, ನನ್ನ ಜನರನ್ನು ಹಿಡಿಯುವುದಕ್ಕೆ ಬಹು ಮಂದಿ ಬೆಸ್ತರನ್ನು ಕರೆಯಿಸುವೆನು; ಆ ಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ, ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ, ಬೇಟೆಯಾಡುವುದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಸರ್ವೇಶ್ವರ ಹೀಗೆನ್ನುತ್ತಾರೆ : “ಇಗೋ, ನಾನು ಬಹುಮಂದಿ ಬೆಸ್ತರನ್ನು ಕಳಿಸುವೆನು, ಅವರು ನನ್ನ ಜನರನ್ನು ಹಿಡಿಯುವರು, ಬಳಿಕ ಬಹುಜನ ಬೇಡರನ್ನು ಕಳಿಸುವೆನು. ಅವರು ಎಲ್ಲ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ನನ್ನ ಜನರನ್ನು ಹೊರಡಿಸಿ ಬೇಟೆಯಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನು ಹೀಗನ್ನುತ್ತಾನೆ - ಇಗೋ, ನನ್ನ ಜನರನ್ನು ಹಿಡಿಯುವದಕ್ಕೆ ಬಹುಮಂದಿ ಬೆಸ್ತರನ್ನು ಕರೆಯಿಸುವೆನು; ಆಮೇಲೆ ಎಲ್ಲಾ ಬೆಟ್ಟಗುಡ್ಡಗಳಿಂದಲೂ ಬಂಡೆಗಳ ಸಂದುಗೊಂದುಗಳಿಂದಲೂ ಅವರನ್ನು ಹೊರಡಿಸಿ ಬೇಟೆಯಾಡುವದಕ್ಕೆ ಬಹುಜನ ಬೇಡರನ್ನು ಕರೆಯಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನು, “ನಾನು ಅನೇಕ ಮೀನುಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಮೀನುಗಾರರು ಯೆಹೂದದ ಜನರನ್ನು ಬಂಧಿಸುವರು. ಇದಾದ ಮೇಲೆ ನಾನು ಹಲವಾರು ಜನ ಬೇಟೆಗಾರರನ್ನು ಈ ಪ್ರದೇಶಕ್ಕೆ ಕರೆಸುವೆನು. ಆ ಬೇಟೆಗಾರರು ಪ್ರತಿಯೊಂದು ಪರ್ವತ, ಬೆಟ್ಟ ಮತ್ತು ಬಂಡೆಗಳ ಸಂದುಗೊಂದುಗಳಲ್ಲಿ ಯೆಹೂದ್ಯರನ್ನು ಬೇಟೆಯಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:16
21 ತಿಳಿವುಗಳ ಹೋಲಿಕೆ  

“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು. ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು. ಎಂದು ಸಾರ್ವಭೌಮ ಯೆಹೋವ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ನಿಷ್ಠಾವಂತರು ಭೂಮಿಯೊಳಗಿಂದ ನಾಶವಾಗಿದ್ದಾರೆ. ಮನುಷ್ಯರಲ್ಲಿ ಯಥಾರ್ಥನು ಒಬ್ಬನು ಉಳಿದಿಲ್ಲ; ಎಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾ, ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ.


ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.


ಅವನು ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರನಾದನು. ಆದ್ದರಿಂದ, “ನಿಮ್ರೋದನಂತೆ ಯೆಹೋವ ದೇವರ ಮುಂದೆ ಬಲಿಷ್ಠ ಬೇಟೆಗಾರ” ಎಂಬ ಹೇಳಿಕೆ ಇಂದಿಗೂ ಇದೆ.


ಇಗೋ, ನಾನು ಕಳುಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ, ನನ್ನ ಸೇವಕನಾದ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನನ್ನೂ ತೆಗೆದುಕೊಂಡು, ಈ ದೇಶಕ್ಕೆ ವಿರೋಧವಾಗಿಯೂ, ಅವರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ತರಿಸಿ, ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ಭಯಕ್ಕೂ, ಪರಿಹಾಸ್ಯಕ್ಕೂ ಗುರಿಮಾಡಿ ನಿತ್ಯ ನಾಶಮಾಡುವೆನು.


ಇದು ಒಬ್ಬ ಮನುಷ್ಯನು ಸಿಂಹದಿಂದ ತಪ್ಪಿಸಿಕೊಂಡು ಓಡಿಹೋಗಿ, ಕರಡಿಯನ್ನು ಎದುರುಗೊಂಡ ಹಾಗೆಯೂ, ಇಲ್ಲವೆ ಅವನು ಮನೆಗೆ ಹೋಗಿ ಗೋಡೆಗೆ ತನ್ನ ಕೈಯನ್ನು ಒರಗಿಸಿದಾಗ, ಸರ್ಪವು ಕಚ್ಚಿದ ಹಾಗೆಯೂ ಇರುವುದು.


ಇದಲ್ಲದೆ ನನ್ನ ತಂದೆಯೇ, ಇಲ್ಲಿ ನೋಡು! ನನ್ನ ಕೈಯಲ್ಲಿರುವ ನಿನ್ನ ನಿಲುವಂಗಿಯ ತುಂಡನ್ನು ನೋಡು. ನಾನು ನಿನ್ನನ್ನು ಕೊಂದುಹಾಕದೆ, ನಿನ್ನ ನಿಲುವಂಗಿಯ ಅಂಚನ್ನು ಮಾತ್ರ ಕತ್ತರಿಸಿಕೊಂಡದ್ದರಿಂದ, ನನ್ನಲ್ಲಿ ಕೆಟ್ಟತನವೂ, ದ್ರೋಹವೂ ಇಲ್ಲವೆಂದು ಇದು ಸೂಚಿಸುತ್ತಿದೆ; ನಾನು ನಿನಗೆ ವಿರೋಧವಾಗಿ ತಪ್ಪುಮಾಡಲಿಲ್ಲವೆಂದು ತಿಳಿದುಕೋ. ಹೀಗಿದ್ದರೂ, ನೀನು ನನ್ನ ಪ್ರಾಣವನ್ನು ತೆಗೆಯಲು ಬೇಟೆಯಾಡುತ್ತೀ.


ಯೆಹೋವ ದೇವರು ಭೂಮಿಯನ್ನು ನಡುಗಿಸಲು ಎದ್ದಾಗ, ಯೆಹೋವ ದೇವರ ಭಯಕ್ಕೂ, ಅವರ ಮಹಿಮೆಯ ಘನಕ್ಕೂ ಹೆದರಿ ಬಂಡೆಗಳ ಸಂದುಗಳಿಗೂ, ಎತ್ತರವಾಗಿರುವ ಬಂಡೆಗಳ ಕಡಿದಾದ ಸ್ಥಳಗಳಿಗೂ ಜನರು ನುಗ್ಗುವರು.


ಅವು ಬಂದು ಹಾಳಾದ ಕಣಿವೆಗಳಲ್ಲಿಯೂ ಬಂಡೆಗಳ ಬಿರುಕುಗಳಲ್ಲಿಯೂ ಎಲ್ಲಾ ಮುಳ್ಳಿನ ಮೇಲೆಯೂ ಎಲ್ಲಾ ಪೊದೆಗಳಲ್ಲಿಯೂ ಮುತ್ತಿಕೊಳ್ಳುವುವು.


ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವುದು. ಪೊದೆಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು. ಪಟ್ಟಣಗಳೆಲ್ಲಾ ನಾಶವಾಗುವುವು. ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.


ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಇಸ್ರಾಯೇಲಿನ ಶೇಷವನ್ನು ದ್ರಾಕ್ಷಿ ಗಿಡದ ಹಾಗೆ ಪೂರ್ಣವಾಗಿ ಹಕ್ಕಲಾಯುವರು; ದ್ರಾಕ್ಷಿ ಕೂಡಿಸುವವನ ಹಾಗೆ ನಿನ್ನ ಕೈಯನ್ನು ರೆಂಬೆಗಳಲ್ಲಿ ಹಿಂದಕ್ಕೆ ತಿರುಗಿಸು.”


ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಅನ್ನುತ್ತಾರೆ. “ಆಗ ನಿಮ್ಮಲ್ಲಿ ಪ್ರತಿಯೊಬ್ಬನನ್ನೂ ಅಟ್ಟಲಾಗುವುದು; ಓಡಿಹೋದವರನ್ನು ಕೂಡಿಸುವವನು ಒಬ್ಬನೂ ಇರುವುದಿಲ್ಲ.


ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ, ಶತ್ರುಗಳು ನಮ್ಮ ಹೆಜ್ಜೆಗಳನ್ನೇ ಬೇಟೆಯಾಡುತ್ತಾರೆ. ನಮ್ಮ ಅಂತ್ಯವು ಸಮೀಪಿಸಿತು, ನಮ್ಮ ದಿನಗಳು ತೀರಿದವು. ಏಕೆಂದರೆ ನಮ್ಮ ಅಂತ್ಯವು ಬಂದಿತು.


ನಾನು ಅವರನ್ನು ಶಿಕ್ಷಿಸಲು ನನಗೆ ಮನಸ್ಸುಂಟು. ಅವರ ಇಮ್ಮಡಿ ಅಪರಾಧಕ್ಕೆ ತಕ್ಕ ಶಾಸ್ತಿಯಾಗುವುದು, ಆಗ ಇತರ ರಾಷ್ಟ್ರಗಳು ಅವರಿಗೆ ವಿರುದ್ಧವಾಗಿ ಒಂದುಗೂಡುವುವು.


ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.


ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರವಾಗಿದ್ದಾರೆ. ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ, ಅರಣ್ಯದಲ್ಲಿ ಹೊಂಚು ಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು