Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:18 - ಕನ್ನಡ ಸಮಕಾಲಿಕ ಅನುವಾದ

18 ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮೊತ್ತ ಮೊದಲು ಅವರ ಅಕ್ರಮಕ್ಕೂ ಪಾಪಕ್ಕೂ ಇಮ್ಮಡಿ ಶಿಕ್ಷೆಯನ್ನು ಕೊಡುವೆನು. ಏಕೆಂದರೆ ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ನಾಡನ್ನು ಹೊಲಸುಮಾಡಿದ್ದಾರೆ. ಅಸಹ್ಯವಾದ ವಸ್ತುಗಳಿಂದ ಆ ನನ್ನ ಸ್ವಂತ ನಾಡನ್ನು ತುಂಬಿಸಿಬಿಟ್ಟಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವರು ಮಾಡಿದ ದುಷ್ಕೃತ್ಯಗಳಿಗಾಗಿ ನಾನು ಯೆಹೂದದ ಜನರನ್ನು ಶಿಕ್ಷಿಸುತ್ತೇನೆ. ಪ್ರತಿಯೊಂದು ಪಾಪಕ್ಕಾಗಿ ನಾನು ಅವರನ್ನು ಎರಡು ಸಲ ಶಿಕ್ಷಿಸುತ್ತೇನೆ. ಅವರು ನನ್ನ ದೇಶವನ್ನು ‘ಹೊಲಸು’ ಮಾಡಿದ್ದಕ್ಕಾಗಿ ನಾನು ಹೀಗೆ ಮಾಡುತ್ತೇನೆ. ಅವರು ತಮ್ಮ ಭಯಂಕರವಾದ ವಿಗ್ರಹಗಳಿಂದ ನನ್ನ ಪ್ರದೇಶವನ್ನು ‘ಹೊಲಸು’ ಮಾಡಿದ್ದಾರೆ. ನಾನು ಆ ವಿಗ್ರಹಗಳನ್ನು ದ್ವೇಷಿಸುತ್ತೇನೆ. ಆದರೆ ಅವರು ತಮ್ಮ ವಿಗ್ರಹಗಳಿಂದ ನನ್ನ ದೇಶವನ್ನು ತುಂಬಿಸಿಬಿಟ್ಟಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:18
24 ತಿಳಿವುಗಳ ಹೋಲಿಕೆ  

ಯೆರೂಸಲೇಮಿನ ಸಂಗಡ ನೀವು ಮೃದುವಾಗಿ ಮಾತನಾಡಿರಿ. ಅದರ ಕಠಿಣ ಸೇವೆ ತೀರಿತೆಂದೂ, ಅದರ ಪಾಪಕ್ಕೆ ಪ್ರಾಯಶ್ಚಿತ್ತವಾಗಿದೆ, ಎಂದು ಘೋಷಿಸಿರಿ, ಏಕೆಂದರೆ ಅದು ಎಲ್ಲಾ ಪಾಪಗಳಿಗೂ ಯೆಹೋವ ದೇವರ ಕೈಯಿಂದ ಎರಡರಷ್ಟು ಹೊಂದಿದ್ದಾಯಿತು.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಆದರೆ ಯಾರ ಹೃದಯವು ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ಅನುಸರಿಸುತ್ತದೋ, ನಾನು ಅವರ ದುರ್ಮಾರ್ಗವನ್ನು ಅವರ ತಲೆಗೇ ಕಟ್ಟುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.”


ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.


ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ, ಮೇಲನ್ನೂ ತಿನ್ನುವ ಹಾಗೆ ಕರೆದುಕೊಂಡು ಬಂದೆನು. ಆದರೆ ನೀವು ಬಂದು ನನ್ನ ದೇಶವನ್ನು ಅಶುದ್ಧಮಾಡಿ, ನನ್ನ ಸೊತ್ತನ್ನು ಅಸಹ್ಯ ಮಾಡಿದಿರಿ.


“ಅವರು ಅಲ್ಲಿಗೆ ಹಿಂತಿರುಗಿ ಮತ್ತು ಅದರಲ್ಲಿರುವ ಎಲ್ಲಾ ಅನುಪಯುಕ್ತ ಆಕೃತಿಗಳನ್ನು ಮತ್ತು ಅಸಹ್ಯಕರ ವಿಗ್ರಹಗಳನ್ನು ತೆಗೆದುಹಾಕುತ್ತಾರೆ.


ಆದದ್ದೇನೆಂದರೆ, ಅವಳ ಸೂಳೆತನದ ಸುದ್ದಿಯಿಂದ ಅವಳು ದೇಶವನ್ನು ಅಪವಿತ್ರ ಮಾಡಿ, ಕಲ್ಲುಗಳ ಮತ್ತು ಮರಗಳ ಸಂಗಡ ವ್ಯಭಿಚಾರ ಮಾಡಿದಳು.


ನಿಮ್ಮ ನಾಚಿಕೆಗೆ ಬದಲಾಗಿ ಮಾನವು ಎರಡರಷ್ಟಾಗುವುದು. ಅವಮಾನಕ್ಕೆ ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು. ಆದ್ದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನಮಾಡಿಕೊಳ್ಳುವರು. ನಿತ್ಯವಾದ ಸಂತೋಷವು ನಿಮಗೆ ಆಗುವುದು.


ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿಯ ಸ್ಥಳವಲ್ಲ, ಏಕೆಂದರೆ ಇದಕ್ಕೆ ಹೊಲಸು ಅಂಟಿಕೊಂಡು, ಯಾವ ಸುಧಾರಣೆಗೂ ಒಳಗಾಗದಂತೆ ಹಾಳಾಗಿ ಹೋಗಿಬಿಟ್ಟಿದೆ.


ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ದೈವನಿಯಮಗಳನ್ನು ಬದಲಾಯಿಸಿ, ನಿತ್ಯವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಸಹ ಅದರ ನಿವಾಸಿಗಳ ಹೆಜ್ಜೆಯಿಂದ ಅಪವಿತ್ರವಾಗುವುದು.


ಇದಲ್ಲದೆ ತಮ್ಮ ಗಂಡು ಹೆಣ್ಣು ಮಕ್ಕಳ ನಿರಪರಾಧದ ರಕ್ತವನ್ನು ಚೆಲ್ಲಿ, ಕಾನಾನಿನ ವಿಗ್ರಹಗಳಿಗೆ ಅರ್ಪಿಸಿ, ದೇಶವನ್ನು ರಕ್ತದಿಂದ ಅಶುದ್ಧ ಮಾಡಿದರು.


ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.


“ನನ್ನ ಮುಂದೆ ಅದು ಬರೆಯಲಾಗಿದೆ. ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ. ಅವರ ಮಡಿಲಲ್ಲಿ ಪ್ರತಿಫಲ ಕೊಡುತ್ತೇನೆ.


“ ‘ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಯೆಹೋವ ದೇವರು ಹೇಳುತ್ತಾರೆ. ನನ್ನ ಹೆಸರನ್ನು ಹೊಂದಿರುವ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವುದಕ್ಕೆ ತಮ್ಮ ಅಸಹ್ಯವಾದವುಗಳನ್ನು ಇಟ್ಟಿದ್ದಾರೆ.


ಆದರೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಪುನಃ ಕಳುಹಿಸಿ, ‘ನಾನು ಹಗೆ ಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇಬೇಡಿರಿ!’ ಎಂದು ಹೇಳಿದೆನು.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ನಿಮ್ಮ ಪಾಪಗಳಿಗೂ, ನಿಮ್ಮ ತಂದೆಗಳ ಪಾಪಗಳಿಗೂ ಕೂಡ ಪ್ರತಿಫಲ ಕೊಡುತ್ತೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು, ಗುಡ್ಡಗಳ ಮೇಲೆ ನನ್ನನ್ನು ಪರಿಹಾಸ್ಯ ಮಾಡಿದರಲ್ಲಾ. ಹೀಗಿರುವುದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಮಡಿಲಲ್ಲಿ ಅಳೆದು ಸುರಿಸುವೆನು.”


ಆದ್ದರಿಂದ ಅವರು ದೇಶದಲ್ಲಿ ಚೆಲ್ಲಿದ ರಕ್ತದ ನಿಮಿತ್ತವಾಗಿಯೂ ಅವರು ಅದನ್ನು ಅಶುದ್ಧಪಡಿಸಿದ ಅವರ ವಿಗ್ರಹಗಳ ನಿಮಿತ್ತವಾಗಿಯೂ ನನ್ನ ರೋಷವನ್ನು ಅವರ ಮೇಲೆ ಸುರಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು