Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:2 - ಕನ್ನಡ ಸಮಕಾಲಿಕ ಅನುವಾದ

2 “ನೀನು ಮದುವೆಯಾಗಬೇಡ. ನಿನಗೆ ಪುತ್ರರಾಗಲಿ, ಪುತ್ರಿಯರಾಗಲಿ ಈ ಸ್ಥಳದಲ್ಲಿ ಹುಟ್ಟದಿರಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಮದುವೆಯಾಗಬೇಡ, ಗಂಡು ಮತ್ತು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಮದುವೆಯಾಗಬೇಡ, ಗಂಡು ಅಥವಾ ಹೆಣ್ಣು ಮಕ್ಕಳು ನಿನಗೆ ಈ ಸ್ಥಳದಲ್ಲಿ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಮದುವೆಯಾಗಬೇಡ, ಗಂಡು ಹೆಣ್ಣು ಮಕ್ಕಳು ಈ ಸ್ಥಳದಲ್ಲಿ ನಿನಗೆ ಹುಟ್ಟದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆರೆಮೀಯನೇ, ನೀನು ಮದುವೆ ಮಾಡಿಕೊಳ್ಳಬಾರದು. ನೀನು ಇಲ್ಲಿ ಮಕ್ಕಳನ್ನು ಹೊಂದಬಾರದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:2
9 ತಿಳಿವುಗಳ ಹೋಲಿಕೆ  

ಏಕೆಂದರೆ, ‘ಇಗೋ, ಬಂಜೆಯರೂ ಹೆರದವರೂ ಹಾಲು ಕುಡಿಸದವರೂ ಧನ್ಯರು,’ ಎಂದು ಜನರು ಹೇಳುವ ದಿವಸಗಳು ಬರುತ್ತವೆ.


ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ! ದೇಶದಲ್ಲಿ ಈ ಜನರು ಮಹಾ ವಿಪತ್ತಿಗೂ ಕೋಪಕ್ಕೂ ಗುರಿಯಾಗುವರು.


ಆಗ ಲೋಟನು ಹೊರಟುಹೋಗಿ, ತನ್ನ ಪುತ್ರಿಯರನ್ನು ಗೊತ್ತುಮಾಡಿದ್ದ ಅಳಿಯಂದಿರ ಸಂಗಡ ಮಾತನಾಡಿ, “ಎದ್ದು ಈ ಸ್ಥಳದಿಂದ ಹೊರಡಿರಿ. ಏಕೆಂದರೆ ಯೆಹೋವ ದೇವರು ಈ ಪಟ್ಟಣವನ್ನು ನಾಶಮಾಡುವುದಕ್ಕಿದ್ದಾರೆ,” ಎಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಪರಿಹಾಸ್ಯಮಾಡುವಂತೆ ಕಾಣಿಸಿದನು.


ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಹಾಲುಣಿಸುವ ತಾಯಂದಿರಿಗೂ ಕಷ್ಟ!


ಯೆಹೋವ ದೇವರ ವಾಕ್ಯವು ನನಗೆ ಉಂಟಾಗಿ,


ಏಕೆಂದರೆ ಈ ಸ್ಥಳದಲ್ಲಿ ಹುಟ್ಟಿರುವ ಪುತ್ರಪುತ್ರಿಯರನ್ನು ಕುರಿತು ಮತ್ತು ಅವರ ತಾಯಂದಿರನ್ನೂ, ಅವರನ್ನು ಪಡೆದ ತಂದೆಗಳನ್ನೂ ಕುರಿತು ಯೆಹೋವ ದೇವರು ಹೀಗೆ ಹೇಳುತ್ತಾರೆ:


ಮದುವೆಮಾಡಿಕೊಂಡು, ಪುತ್ರಪುತ್ರಿಯರನ್ನು ಪಡೆಯಿರಿ. ನಿಮ್ಮ ಪುತ್ರರಿಗೆ ಹೆಂಡತಿಯರನ್ನು ಹುಡುಕಿರಿ. ನಿಮ್ಮ ಪುತ್ರಿಯರನ್ನು ಮದುವೆಮಾಡಿಕೊಡಿರಿ; ಅವರು ಪುತ್ರಪುತ್ರಿಯರನ್ನು ಹೆರಲಿ. ಹೀಗೆ ನೀವು ಕಡಿಮೆಯಾಗದೆ, ಅಲ್ಲಿ ಹೆಚ್ಚಿರಿ.


ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು