Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:4 - ಕನ್ನಡ ಸಮಕಾಲಿಕ ಅನುವಾದ

4 “ಅವರು ಮರಣಕರವಾದ ಬೇನೆಗಳಿಂದ ಸಾಯುವರು. ಅವರಿಗೋಸ್ಕರ ಗೋಳಾಟ ಆಗುವುದಿಲ್ಲ. ಅವರಿಗೆ ಸಮಾಧಿಯಾಗುವುದಿಲ್ಲ. ಭೂಮಿಯ ಮೇಲೆ ಅವರು ಗೊಬ್ಬರವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಅವರು ಒಂದು ಭಯಾನಕವಾದ ರೀತಿಯಲ್ಲಿ ಮರಣಹೊಂದುತ್ತಾರೆ. ಅವರನ್ನು ಯಾರೂ ಹೂಳುವುದಿಲ್ಲ. ಅವರ ದೇಹಗಳು ಭೂಮಿಯ ಮೇಲೆ ಗೊಬ್ಬರದಂತೆ ಬಿದ್ದಿರುತ್ತವೆ. ಅವರು ವೈರಿಗಳ ಖಡ್ಗಗಳಿಂದ ಮಡಿಯುವರು. ಅವರು ಅನ್ನವಿಲ್ಲದೆ ಸಾಯುವರು. ಅವರ ಶವಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೇಲಿನ ಕಾಡುಪ್ರಾಣಿಗಳಿಗೂ ಆಹಾರವಾಗುವವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:4
33 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ಭೂಮಿಯ ಈ ಮೇರೆಯಿಂದ ಭೂಮಿಯ ಆ ಮೇರೆಯವರೆಗೆ ಯೆಹೋವ ದೇವರಿಂದ ಹತರಾದವರು ಇರುವರು. ಅವರಿಗೋಸ್ಕರ ಗೋಳಾಡುವುದಿಲ್ಲ. ಅವರನ್ನು ಕೂಡಿಸುವುದಿಲ್ಲ. ಅವರನ್ನು ಹೂಳಿಡುವುದಿಲ್ಲ. ಅವರು ಭೂಮಿಯ ಮೇಲೆ ಗೊಬ್ಬರದಂತಿರುವರು.


ಅವರು ಎಂದೋರಿನಲ್ಲಿ ನಾಶವಾಗಿ ಭೂಮಿಗೆ ಗೊಬ್ಬರವಾದರು.


ಯೆಹೋವ ದೇವರು ನನಗೆ ಹೀಗೆಂದರು: “ ‘ಮನುಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳುವುವು. ಧಾನ್ಯ ಕೊಯ್ಯುವವನು ಉಳಿಸಿದ ಕೈಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವುವು.’ ”


“ನಾನು ಮನುಷ್ಯರ ಮೇಲೆ ಇಕ್ಕಟ್ಟು ತರಿಸುವೆನು. ಅವರು ಕುರುಡರ ಹಾಗೆ ತಡಕುವರು. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದಾರೆ. ಅವರ ರಕ್ತವು ಧೂಳಿನಂತೆಯೂ ಅವರ ಮಾಂಸವು ಗೊಬ್ಬರದಂತೆಯೂ ಸುರಿದಿರುವುದು.


ಅವರ ಶತ್ರುಗಳ ಕೈಯಲ್ಲಿಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಒಪ್ಪಿಸುವೆನು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗುವುವು.


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುವು. ಯಾರೂ ಅವುಗಳನ್ನು ಬೆದರಿಸುವುದಿಲ್ಲ.


ಅವುಗಳೆಲ್ಲ ಬೆಟ್ಟದ ಹದ್ದುಗಳಿಗೂ, ಭೂಮಿಯ ಮೃಗಗಳಿಗೂ ಆಹಾರವಾಗುವುವು. ಅದು ಪಕ್ಷಿಗಳಿಗೆ ಬೇಸಿಗೆ ಕಾಲದಲ್ಲಿಯೂ, ಕಾಡುಮೃಗಗಳಿಗೆ ಚಳಿಗಾಲದಲ್ಲಿಯೂ ಆಹಾರವಾಗುವುದು.


ನಿನ್ನಲ್ಲಿಯ ಮೂರನೆಯ ಒಂದು ಪಾಲು ಜನರು ವ್ಯಾಧಿಗಳಿಂದ ಸಾಯುವರು, ಕ್ಷಾಮದಿಂದ ನಿಮ್ಮಲ್ಲಿ ಅವರು ನಾಶವಾಗುವರು. ಮೂರನೆಯ ಒಂದು ಪಾಲು ನಿಮ್ಮ ಸುತ್ತಲೂ ಖಡ್ಗ ಹಿಡಿದು ಬೀಳುವರು. ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ ಗಾಳಿಗೆ ತೂರಿ ಚದರಿಸಿ, ಅವರ ಮೇಲೆ ಖಡ್ಗವನ್ನು ಬೀಸುವೆನು.


ನಾನು ಒಳ್ಳೆಯದಕ್ಕಾಗಿ ಅಲ್ಲ; ಕೆಟ್ಟದ್ದಕ್ಕಾಗಿ ಅವರ ಮೇಲೆ ಎಚ್ಚರವಾಗಿರುವೆನು. ಈಜಿಪ್ಟ್ ದೇಶದಲ್ಲಿರುವ ಯೆಹೂದದ ಮನುಷ್ಯರೆಲ್ಲರೂ ಮುಗಿದು ಅಂತ್ಯವಾಗುವವರೆಗೆ ಖಡ್ಗದಿಂದಲೂ ಬರದಿಂದಲೂ ನಾಶವಾಗುವರು.


ಆದ್ದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: ದಾವೀದನ ಸಿಂಹಾಸನದಲ್ಲಿ ಕುಳಿತುಕೊಳ್ಳುವವನು ಅವನಿಗೆ ಇರುವುದಿಲ್ಲ. ಅವನ ಹೆಣವು ಹಗಲಿನಲ್ಲಿ ಬಿಸಿಲಿಗೂ, ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲಾಗುವುದು.


“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ಅವರ ಯಾಜಕರು ಖಡ್ಗದಿಂದ ಸಂಹಾರವಾದರು. ಅವರ ವಿಧವೆಯರು ಗೋಳಾಡಲಿಲ್ಲ.


ಇದಲ್ಲದೆ ಇಜ್ರೆಯೇಲ್ ಊರಿನ ಹೊಲದಲ್ಲಿ ನಾಯಿಗಳು ಈಜೆಬೆಲಳನ್ನು ತಿಂದುಬಿಡುವುವು; ಅವಳ ಶವವನ್ನು ಸಮಾಧಿಮಾಡಲು ಯಾವನೂ ಇರುವುದಿಲ್ಲ,” ಎಂದು ಹೇಳಿ ಬಾಗಿಲನ್ನು ತೆರೆದು ಓಡಿಹೋದನು.


ಈಜಿಪ್ಟ್ ದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ಇಟ್ಟಿರುವ ಯೆಹೂದದಲ್ಲಿ ಉಳಿದಿರುವವರನ್ನು ತೆಗೆದುಕೊಳ್ಳುತ್ತೇನೆ. ಅವರೆಲ್ಲರು ಈಜಿಪ್ಟ್ ದೇಶದಲ್ಲಿ ನಾಶವಾಗುವರು. ಖಡ್ಗದಿಂದಲೂ ಕ್ಷಾಮದಿಂದಲೂ ಅಳಿದುಹೋಗುವರು. ಚಿಕ್ಕವನು ಮೊದಲುಗೊಂಡು ದೊಡ್ಡವನವರೆಗೂ ಖಡ್ಗದಿಂದಲೂ ಕ್ಷಾಮದಿಂದಲೂ ಸಾಯುವರು. ಅಸಹ್ಯವೂ ಭಯವೂ ಶಾಪವೂ ನಿಂದೆಯೂ ಆಗುವುವು.


ನಿಮ್ಮ ಹೆಣಗಳು ಆಕಾಶದ ಎಲ್ಲಾ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವುದು. ಯಾರೂ ಅವುಗಳನ್ನು ಬೆದರಿಸಿ ಓಡಿಸುವುದಿಲ್ಲ.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.


ಇಸ್ರಾಯೇಲರ ಮನೆತನದವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ ಎಂದು ಹೇಳು: ಇಗೋ, ನಾನು ನನ್ನ ಪವಿತ್ರಾಲಯವನ್ನೂ, ನಿಮ್ಮ ಮುಖ್ಯಬಲವನ್ನೂ, ನಿಮ್ಮ ನೇತ್ರಾನಂದಕರವಾದದ್ದನ್ನೂ, ನಿಮ್ಮ ಮನಸ್ಸು ಅಭಿಲಾಷಿಸುವುದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಗಂಡು ಮತ್ತು ಹೆಣ್ಣುಮಕ್ಕಳು ಖಡ್ಗದಿಂದ ಬೀಳುವರು.


ಯೆಹೋವ ದೇವರು ಕ್ಷಯರೋಗದಿಂದಲೂ, ಚಳಿಜ್ವರದಿಂದಲೂ, ಉರಿವಾತದಿಂದಲೂ, ಉಷ್ಣಜ್ವರದಿಂದಲೂ ಕುಗ್ಗಿಸಿ, ದೇಶವನ್ನು ಕ್ಷಾಮದಿಂದಲೂ, ಬೆಳೆಯನ್ನು ಕಾಡಿನ ಬಿಸಿಗಾಳಿಯಿಂದಲೂ ಬಾಧಿಸುವರು. ನೀವು ನಾಶವಾಗುವ ತನಕ ಅವು ನಿಮ್ಮನ್ನು ಹಿಂದಟ್ಟಿಬರುವವು.


ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು